ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ನಾಕೌಟ್ ಪಂದ್ಯಗಳಿಗೆ ಸಜ್ಜಾಗುತ್ತಿರುವ ತಂಡಗಳ ಕೋವಿಡ್ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಅಹಮದಾಬಾದ್(ಜ.25): ಮುಷ್ತಾಕ್ ಅಲಿ ಟಿ20 ಟೂರ್ನಿಯ ನಾಕೌಟ್ ಹಂತ ಮಂಗಳವಾರದಿಂದ ಆರಂಭಗೊಳ್ಳಲಿದ್ದು, ನಾಕೌಟ್‌ನಲ್ಲಿ ಆಡಲಿರುವ ಎಲ್ಲ 8 ತಂಡಗಳ ಆಟಗಾರರ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.
ತಂಡಗಳು ಭಾನುವಾರ ಕಠಿಣ ಅಭ್ಯಾಸ ನಡೆಸಿದವು. ಇಲ್ಲಿನ ಮೊಟೇರಾ ಕ್ರೀಡಾಂಗಣದಲ್ಲಿ ಕ್ವಾರ್ಟರ್ ಫೈನಲ್, ಸೆಮಿಫೈನಲ್ ಹಾಗೂ ಫೈನಲ್ ನಡೆಯಲಿದೆ. ಮಂಗಳವಾರ ಮೊದಲ ಕ್ವಾರ್ಟರ್‌ನಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ಪಂಜಾಬ್ ವಿರುದ್ಧ ಸೆಣಸಲಿದೆ.
ಮುಷ್ತಾಕ್ ಅಲಿ ಟ್ರೋಫಿ: ಉತ್ತರ ಪ್ರದೇಶವನ್ನು ಬಗ್ಗುಬಡಿದ ಕರ್ನಾಟಕ
ನಾಕೌಟ್ ಪಂದ್ಯಕ್ಕೆ ಹಾಲಿ ಚಾಂಪಿಯನ್ ಕರ್ನಾಟಕ ಸೇರಿದಂತೆ ಪಂಜಾಬ್, ತಮಿಳುನಾಡು, ಹಿಮಾಚಲ ಪ್ರದೇಶ, ಹರ್ಯಾಣ, ಬರೋಡ, ಬಿಹಾರ ಹಾಗೂ ರಾಜಸ್ಥಾನ ತಂಡಗಳು ಅರ್ಹತೆಗಿಟ್ಟಿಸಿಕೊಂಡಿವೆ.
ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಆಫ್ಘನ್
ಅಬುಧಾಬಿ: ರಹಮತ್ ಶಾ (103*) ಹಾಗೂ ಹಸಮತುಲ್ಲಾ (82) ಅದ್ಭುತ ಆಟದ ನೆರವಿನಿಂದ ಆಫ್ಘಾನಿಸ್ತಾನ, ಐರ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗೆಲುವು ಸಾಧಿಸಿ, 3 ಪಂದ್ಯಗಳ ಏಕದಿನ ಸರಣಿಯನ್ನು 2-0ಯಿಂದ ಗೆದ್ದಿದೆ. ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 259 ರನ್‌ಗಳಿಸಿತು. ಆಫ್ಘನ್ 45.2 ಓವರಲ್ಲಿ ಗುರಿ ತಲುಪಿತು.
ಸ್ಕೋರ್:
ಐರ್ಲೆಂಡ್ 259/9
ಆಫ್ಘನ್ 260/3.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 25, 2021, 9:24 AM IST