ಬ್ರಿಸ್ಬೇನ್‌(ಫೆ.21): ಭಾರತ ಹಾಗೂ ಪಾಕಿಸ್ತಾನ ನಡುವಿನ ಅಭ್ಯಾಸ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.   ಫೆ.21 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಭಾನುವಾರ ಭಾರತ ತಂಡ, ಪಾಕಿಸ್ತಾನ ಸವಾಲನ್ನು ಎದುರಿಸಲಿದೆ. 

ಇದನ್ನೂ ಓದಿ: ಅಂಡರ್ 19 ವಿಶ್ವಕಪ್: ನಮ್ಮ ಹುಡುಗರು ಪಾಕ್ ಬಗ್ಗುಬಡಿದಿದ್ದು ಹೇಗೆ..?

ಇತ್ತೀಚೆಗಷ್ಟೇ ಮುಕ್ತಾಯವಾಗಿದ್ದ ತ್ರಿಕೋನ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದರೂ ಭಾರತ ತಂಡ, ಫೈನಲ್‌ನಲ್ಲಿ ಆಸ್ಪ್ರೇಲಿಯಾ ಎದುರು ಸೋಲುಂಡಿತ್ತು. ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಎದುರು ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಪಡೆ ಕಣಕ್ಕಿಳಿಯುತ್ತಿದೆ. 

ಇದನ್ನೂ ಓದಿ: ಡೇವಿಸ್ ಕಪ್: ಪಾಕ್‌ ವಿರುದ್ಧ ಭಾರತ ಕ್ಲೀನ್‌ ಸ್ವೀಪ್‌.

ಯುವ ಆಟಗಾರ್ತಿಯರ ಬಲವಿರುವ ಪಾಕಿಸ್ತಾನ, ಭಾರತಕ್ಕೆ ಪ್ರಬಲ ಪೈಪೋಟಿ ನೀಡುವ ಹುಮ್ಮಸ್ಸಿನಲ್ಲಿದೆ. ಭಾರತ ಮಹಿಳಾ ತಂಡ ಮಂಗಳವಾ ನಡೆಯುವ ಮತ್ತೊಂದು ಅಭ್ಯಾಸ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡವನ್ನು ಎದುರಿಸಲಿದೆ.

ಪಂದ್ಯ ಬೆಳಗ್ಗೆ, 9.30ಕ್ಕೆ ಆರಂಭವಾಗಲಿದೆ.