Asianet Suvarna News Asianet Suvarna News

T20 World Cup 2021: ಸೌತ್ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್!

  • ಇಂಗ್ಲೆಂಡ್, ಸೌತ್ ಆಫ್ರಿಕಾ ನಡುವಿನ ಮಹತ್ವದ ಪಂದ್ಯ
  • ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
  • ಶಾರ್ಜಾದಲ್ಲಿ ನಡೆಯುತ್ತಿರುವ ಪಂದ್ಯ
T20 World Cup 2021 ENG vs SA England won toss and elect bowl first against South Africa ckm
Author
Bengaluru, First Published Nov 6, 2021, 7:07 PM IST
  • Facebook
  • Twitter
  • Whatsapp

ಶಾರ್ಜಾ(ನ.06):  ಸೋಲಿಲ್ಲದ ಸರದಾರ ಇಂಗ್ಲೆಂಡ್(England) ಹಾಗೂ ಸೆಮಿಫೈನಲ್ ಪ್ರವೇಶ ವಿಶ್ವಾಸದಲ್ಲಿರುವ ಸೌತ್ ಆಫ್ರಿಕಾ(South Africa) ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಈ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಇಂಜುರಿಗೆ ತುತ್ತಾಗಿರುವ ಟೈಮಲ್ ಮಿಲ್ಸ್ ಬದಲು ಮಾರ್ಕ್ ವುಡ್ ತಂಡ ಸೇರಿಕೊಂಡಿದ್ದಾರೆ. ಆದರೆ ಸೌತ್ ಆಫ್ರಿಕಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

T20 World Cup 2021| ಪಂದ್ಯದ ಜೊತೆ ಹೃದಯ ಗೆದ್ದ ಟೀಂ ಇಂಡಿಯಾ, ಸೋತ ತಂಡಕ್ಕೆ ಪ್ರೋತ್ಸಾಹ!

ಶಾರ್ಜಾ(Sharjah) ಮೈದಾನದಲ್ಲಿ ನಡೆದ 10 ಐಪಿಎಲ್ ಪಂದ್ಯದಲ್ಲಿ 7 ಪಂದ್ಯದಲ್ಲಿ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಇನ್ನು T20 World Cup 2021 ಟೂರ್ನಿಯಲ್ಲಿ ಆಡಿದ 7 ಪಂದ್ಯದಲ್ಲಿ 5 ಪಂದ್ಯದಲ್ಲಿ ಚೇಸಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಹೀಗಾಗಿ ಶಾರ್ಜಾ ಮೈದಾನದಲ್ಲಿ ಟಾಸ್(Toss) ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ತಂಡಕ್ಕೆ ಗೆಲುವಿನ ಅವಕಾಶ ಹೆಚ್ಚಿದೆ.

ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ಸಾಧಿಸಿದೆ. ಇದು ಸೌತ್ ಆಫ್ರಿಕಾ ಸೆಮಿಫೈನಲ್ ಕನಸಿಗೆ ತೀವ್ರ ಹಿನ್ನಡೆ ನೀಡಿದೆ. ಇಂದು ಇಂಗ್ಲೆಂಡ್ ವಿರುದ್ಧ ಭಾರಿ ಅಂತರದ ಗೆಲುವು ಸೌತ್ ಆಫ್ರಿಕಾಗೆ ಅನಿವಾರ್ಯವಾಗಿದೆ. ಸೌತ್ ಆಫ್ರಿಕಾ ತಂಡಕ್ಕೆ ಇಂಗ್ಲೆಂಡ್ ವಿರುದ್ಧ ಗೆಲುವು ಸುಲಭವಲ್ಲ. ಇತ್ತ ಇಂಗ್ಲೆಂಡ್ ಬಹುತೇಕ ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಂಡಿದೆ. ಇಂಗ್ಲೆಂಡ್ ಗೆಲುವು ಸಾಧಿಸಿದರೆ ಸೌತ್ ಆಫ್ರಿಕಾ ತಂಡದ ಸೆಮಿಫೈನಲ್ ಹೋರಾಟ ಅಂತ್ಯಗೊಳ್ಳಲಿದೆ.ಆಸ್ಟ್ರೇಲಿಯಾಗಿಂತ ಉತ್ತಮ ರನ್‌ರೇಟ್ ಪಡೆದುಕೊಳ್ಳಲು ಸೌತ್ ಆಫ್ರಿಕಾ 150 ರನ್ ಸಿಡಿಸಿದರೆ, ಇಂಗ್ಲೆಂಡ್ ತಂಡವನ್ನು 88 ರನ್‌ಗಳಿಗೆ ಕಟ್ಟಿಹಾಕಬೇಕು. ಕೇವಲ ಗೆಲುವಲ್ಲ ಭಾರಿ ಅಂತರದ ಗೆಲುವು ಸೌತ್ ಆಫ್ರಿಕಾ ತಂಡಕ್ಕೆ ಅವಶ್ಯಕವಾಗಿದೆ.

T20 World Cup: ಸ್ಕಾಟ್ಲೆಂಡ್ ಎದುರು ಅಬ್ಬರಿಸಿ ಆತಿಯಾ ಶೆಟ್ಟಿ ಜತೆಗಿನ ಪ್ರೀತಿ ಅನಾವರಣ ಮಾಡಿದ ರಾಹುಲ್

ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡ ಟಿ20 ಟೂರ್ನಿಯಲ್ಲಿ 21 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 11 ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದೆ. ಇನ್ನು 9 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಗೆಲುವು ಸಾಧಿಸಿದೆ. ಇನ್ನುಳಿದ ಒಂದು ಪಂದ್ಯ ಫಲಿತಾಂಶ ಕಾಣದೆ ರದ್ದಾಗಿದೆ.

ಜೋಸ್ ಬಟ್ಲರ್ ಉತ್ತಮ ಫಾರ್ಮ್‍ನಲ್ಲಿರುವುದು ಸೌತ್ ಆಫ್ರಿಕಾ ತಂಡದ ಚಿಂತೆಗೆ ಕಾರಣವಾಗಿದೆ. ಇತ್ತ ಸೌತ್ ಆಫ್ರಿಕಾ ಬ್ಯಾಟಿಂಗ್‌ನಲ್ಲಿ ಎಡವುತ್ತಿದೆ.  ಬ್ಯಾಟಿಂಗ್ ವೈಫಲ್ಯ ಮತ್ತೆ ಎದುರಾದರೆ ದಂಡ ತೆರಬೇಕಾಗುತ್ತದೆ. 

ಅಂಕಪಟ್ಟಿ:
ಮೊದಲ ಗುಂಪಿನಲ್ಲಿರುವ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ಹೋರಾಟಕ್ಕೆ ಅಭಿಮಾನಿಗಳು(Fans) ಕಾದುಕುಳಿತಿದ್ದಾರೆ.   ಇಂಗ್ಲೆಂಡ್ 4 ಪಂದ್ಯದಲ್ಲಿ 4ರಲ್ಲೂ ಗೆಲುವು ಸಾಧಿಸಿದೆ. ಹೀಗಾಗಿ 8 ಅಂಕದೊಂದಿದೆ ಮೊದಲ ಸ್ಥಾನದಲ್ಲಿದೆ. ಇನ್ನು ಸೌತ್ ಆಫ್ರಿಕಾ ಅಂಕಪಟ್ಟಿಯಲ್ಲಿ(Points Table) 3ನೇ ಸ್ಥಾನದಲ್ಲಿದೆ. 4 ಪಂದ್ಯದಲ್ಲಿ 3ರಲ್ಲಿ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಕೂಡ 4 ಪಂದ್ಯದಲ್ಲಿ 3 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ನೆಟ್‌ರೇಟ್ ಉತ್ತಮವಿರುವ ಕಾರಣ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

5 ಪಂದ್ಯದಲ್ಲಿ 2 ಗೆಲುವು ಸಾಧಿಸಿದ ಶ್ರೀಲಂಕಾ 4ನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ 5 ಹಾಗೂ 5 ಪಂದ್ಯ ಸೋತಿರುವ ಬಾಂಗ್ಲಾದೇಶ 6ನೇ ಸ್ಥಾನದಲ್ಲಿದೆ. ಶ್ರೀಲಂಕಾ, ವೆಸ್ಟ್ ಇಂಡೀಸ್ ಹಾಗೂ ಬಾಂಗ್ಲಾದೇಶ ಮೂರು ತಂಡಗಳು ಈಗಾಗಲೆ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ.

2ನೇ ಗುಂಪಿನಲ್ಲಿ  ಪಾಕಿಸ್ತಾನ ತಂಡ ಈಗಾಗಲೇ ಸೆಮಿಫೈನಲ್ ಪ್ರವೇಶ ಖಚಿತಪಡಿಸಿದೆ. 4 ಪಂದ್ಯ ಗೆದ್ದಿರುವ ಪಾಕಿಸ್ತಾನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ನ್ಯೂಜಿಲೆಂಡ್ 2ನೇ ಸ್ಥಾನದಲ್ಲಿದರೆ, ಭಾರತ 3ನೇ ಸ್ಥಾನದಲ್ಲಿದೆ. ಭಾರತದ ಸೆಮಿಫೈನಲ್ ಪ್ರವೇಶ, ನ್ಯೂಜಿಲೆಂಡ್ ಹಾಗೂ ಆಫ್ಘಾನಿಸ್ತಾನ ಪಂದ್ಯದ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.

Follow Us:
Download App:
  • android
  • ios