T20 World Cup 2024: ಭಾರತ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
ಭಾರತ ತಂಡ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿದ್ದು, 4 ಅಂಕದೊಂದಿಗೆ ಗುಂಪು 1ರಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಆಸೀಸ್ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದರೂ, ಆಫ್ಘನ್ ವಿರುದ್ಧದ ಸೋಲು ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ.
ಗ್ರಾಸ್ ಐಲೆಟ್(ಸೇಂಟ್ ಲೂಸಿಯಾ): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಪಂದ್ಯದಲ್ಲಿಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಸೆಮೀಸ್ ಪ್ರವೇಶಿಸುವ ನಿಟ್ಟಿನಲ್ಲಿ ಉಭಯ ತಂಡಗಳ ಪಾಲಿಗೆ ಮಹತ್ವದ ಪಂದ್ಯ ಎನಿಸಿಕೊಂಡಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಡ್ಯಾರೆನ್ ಸ್ಯಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಆಸ್ಟ್ರೇಲಿಯಾ ತಂಡದ ಪಾಲಿಗೆ ಇದು ಒಂದು ರೀತಿ ಕ್ವಾರ್ಟರ್ ಫೈನಲ್ ರೀತಿ ಎನಿಸಿಕೊಂಡಿದೆ. ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆಸ್ಟನ್ ಏಗರ್ ಬದಲಿಗೆ ಮಿಚೆಲ್ ಸ್ಟಾರ್ಕ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲೂ ಕಣಕ್ಕಿಳಿದಿದೆ.
ಭಾರತ ತಂಡ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿದ್ದು, 4 ಅಂಕದೊಂದಿಗೆ ಗುಂಪು 1ರಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಆಸೀಸ್ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದರೂ, ಆಫ್ಘನ್ ವಿರುದ್ಧದ ಸೋಲು ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ, ಅನಾಯಾಸವಾಗಿ ಗ್ರೂಪ್ 1ರಲ್ಲಿ ಅಗ್ರಸ್ಥಾನಿಯಾಗಿ ಸೆಮೀಸ್‌ಗೇರಲಿದೆ. ಇನ್ನು ಆಸ್ಟ್ರೇಲಿಯಾ ಸೋತರೂ ಸೆಮೀಸ್‌ಗೇರಬಹುದು. ಇದು ಸಾಧ್ಯವಾಗಬೇಕಿದ್ದರೇ, ಆಪ್ಘಾನಿಸ್ತಾನ ಎದುರು ಬಾಂಗ್ಲಾದೇಶ ತಂಡವು ಗೆಲುವು ಸಾಧಿಸಬೇಕಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ ನೋಡಿ
ಭಾರತ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಅಕ್ಷರ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಅರ್ಶ್‌ದೀಪ್ ಸಿಂಗ್.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರ್ಯಾವಿಸ್ ಹೆಡ್, ಮಿಚೆಲ್ ಮಾರ್ಷ್(ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯ್ನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಜಲ್‌ವುಡ್
ಪಂದ್ಯ ಆರಂಭ: ರಾತ್ರಿ 8 ಗಂಟೆಗೆ, ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಹಾಟ್‌ಸ್ಟಾರ್.
ಪಿಚ್ ರಿಪೋರ್ಟ್
ಸೇಂಟ್ ಲೂಸಿಯಾ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿ. ಇಲ್ಲಿ ದೊಡ್ಡ ಮೊತ್ತ ದಾಖಲಾದ ಉದಾಹರಣೆಯೇ ಹೆಚ್ಚು. ಈ ಬಾರಿ ವಿಶ್ವಕಪ್‌ನಲ್ಲಿ ಇಲ್ಲಿ ನಡೆದ 5 ಪಂದ್ಯಗಳಲ್ಲಿ 6 ಬಾರಿ 180+ ರನ್ ದಾಖಲಾಗಿವೆ. ಹೀಗಾಗಿ ಮತ್ತೊಮ್ಮೆ ಬೃಹತ್ ಮೊತ್ತದ ಪಂದ್ಯ ನಿರೀಕ್ಷಿಸಬಹುದು.