Asianet Suvarna News Asianet Suvarna News

ರೋಹಿತ್ ಭರ್ಜರಿ ಫಿಫ್ಟಿ: ಐರ್ಲೆಂಡ್ ಮಣಿಸಿ ಶುಭಾರಂಭ ಮಾಡಿದ ಭಾರತ

ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಗೆಲ್ಲಲು ಕೇವಲ 96 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಮಾರ್ಕ್ ಅದೈರ್ ಬೌಲಿಂಗ್‌ನಲ್ಲಿ ಬೆಂಜಮಿನ್ ವೈಟ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

T20 World Cup 2024 Rohit Sharma fifty power Team India thrash Ireland by 8 wickets kvn
Author
First Published Jun 5, 2024, 10:53 PM IST

ನ್ಯೂಯಾರ್ಕ್: ಬೌಲರ್‌ಗಳ ಸಂಘಟಿತ ಪ್ರದರ್ಶನ ಹಾಗೂ ನಾಯಕ ರೋಹಿತ್ ಶರ್ಮಾ ಬಾರಿಸಿದ ಅಜೇಯ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ, ಐರ್ಲೆಂಡ್ ಎದುರು 8 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡವು ಶುಭಾರಂಭ ಮಾಡಿದೆ.

ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಗೆಲ್ಲಲು ಕೇವಲ 96 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಮಾರ್ಕ್ ಅದೈರ್ ಬೌಲಿಂಗ್‌ನಲ್ಲಿ ಬೆಂಜಮಿನ್ ವೈಟ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಹಾರ್ದಿಕ್ ಪಾಂಡ್ಯ ಮಾರಕ ದಾಳಿ; ಸಾಧಾರಣ ಮೊತ್ತಕ್ಕೆ ಐರ್ಲೆಂಡ್ ಆಲೌಟ್

ಇನ್ನು ಎರಡನೇ ವಿಕೆಟ್‌ಗೆ ನಾಯಕ ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಕೇವಲ 44 ಎಸೆತಗಳಲ್ಲಿ ಮುರಿಯದ 54 ರನ್‌ಗಳ ಜತೆಯಾಟವಾಡಿದರು. ಐರ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ನಾಯಕ ರೋಹಿತ್ ಶರ್ಮಾ 37 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್ ಬಾರಿಸಿ ರಿಟೈರ್ಡ್‌ಹರ್ಟ್ ಆಗಿ ಪೆವಿಲಿಯನ್‌ಗೆ ವಾಪಾಸ್ಸಾದರು. ಇನ್ನು ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ ಕೇವಲ 26 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 36 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ದು ಬೌಲಿಂಗ್ ಮಾಡಿದ ಭರ್ಜರಿ ಆರಂಭವನ್ನೇ ಪಡೆಯಿತು. ಮೂರನೇ ಓವರ್‌ನಲ್ಲೇ ಆರ್ಶದೀಪ್ ಸಿಂಗ್, ಐರ್ಲೆಂಡ್ ಆರಂಭಿಕ ಬ್ಯಾಟರ್‌ಗಳಾದ ನಾಯಕ ಪೌಲ್ ಸ್ಟರ್ಲಿಂಗ್(2) ಹಾಗೂ ಆಂಡ್ರ್ಯೂ ಬಲ್ಬಿರ್ನ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಹ್ಯಾರಿ ಟೆಕ್ಟರ್ 4 ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಲಾರ್ಕನ್ 10 ಹಾಗೂ ಕುರ್ಟಿಸ್ ಕ್ಯಾಂಪರ್ 12 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು. 

ಇನ್ನು ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಗೆರಾತ್ ಡೆಲ್ನೆ 14 ಎಸೆತಗಳನ್ನು ಎದುರಿಸಿ 27 ರನ್ ಗಳಿಸಿ ರನೌಟ್ ಆದರು. ಜೋಶ್ವಾ ಲಿಟ್ಲ್ 14 ರನ್ ಗಳಿಸಿ ಕೊನೆಯಲ್ಲಿ ಉತ್ತಮ ಸಾಥ್ ನೀಡಿದರು.

ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ ಈ 6 ಟೀಂ ಇಂಡಿಯಾ ಕ್ರಿಕೆಟರ್ಸ್..!

ಟೀಂ ಇಂಡಿಯಾ ಸಂಘಟಿತ ದಾಳಿ: ಟೀಂ ಇಂಡಿಯಾ ಮೊದಲ ಓವರ್‌ನಿಂದಲೇ ಶಿಸ್ತುಬದ್ಧ ದಾಳಿ ನಡೆಸಿತು. ಹಾರ್ದಿಕ್ ಪಾಂಡ್ಯ 27 ರನ್ ನೀಡಿ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಹಾಗೂ ಆರ್ಶದೀಪ್ ಸಿಂಗ್ ತಲಾ ಎರಡು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು. ಇನ್ನು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು.

Latest Videos
Follow Us:
Download App:
  • android
  • ios