ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ, ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ವಿರಾಟ್ ಕೊಹ್ಲಿ 9 ಎಸೆತಗಳಲ್ಲಿ 9 ರನ್‌ಗಳಿಸಿ ರೀಸ್ ಟಾಪ್ಲೆಗೆ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ ಬ್ಯಾಟಿಂಗ್ ಕೇವಲ 40 ರನ್‌ಗಳಿಗೆ ಸೀಮಿತವಾಯಿತು. 

ಗಯಾನ: ಮಳೆ ಅಡಚಣೆಯ ನಡುವೆಯೂ ಸ್ಪೋಟಕ ಬ್ಯಾಟಿಂಗ್ ನಡೆಸಿದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಆಟದ ನೆರವಿನಿಂದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸವಾಲಿನ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದೆ.

ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ, ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ವಿರಾಟ್ ಕೊಹ್ಲಿ 9 ಎಸೆತಗಳಲ್ಲಿ 9 ರನ್‌ಗಳಿಸಿ ರೀಸ್ ಟಾಪ್ಲೆಗೆ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ ಬ್ಯಾಟಿಂಗ್ ಕೇವಲ 40 ರನ್‌ಗಳಿಗೆ ಸೀಮಿತವಾಯಿತು. 

T20 World Cup 2024 ಸೆಮಿಫೈನಲ್‌: ಭಾರತ ಎದುರು ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

Scroll to load tweet…

ಮತ್ತೆ ಆಸರೆಯಾದ ರೋಹಿತ್-ಸೂರ್ಯ: ಕೇವಲ 40 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ಮೂರನೇ ವಿಕೆಟ್‌ಗೆ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಆಸರೆಯಾದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ಜೋಡಿ, ಆ ಬಳಿಕ ಮೈಚಳಿ ಬಿಟ್ಟು ಬ್ಯಾಟ್ ಬೀಸಿತು. ಅಂತಿಮವಾಗಿ ಈ ಜೋಡಿ ಮೂರನೇ ವಿಕೆಟ್‌ಗೆ 50 ಎಸೆತಗಳನ್ನು ಎದುರಿಸಿ 73 ರನ್‌ಗಳ ಜತೆಯಾಟವಾಡಿತು. ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೇವಲ 39 ಎಸತೆಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 57 ರನ್ ಬಾರಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ 36 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ 13 ಎಸೆತಗಳಲ್ಲಿ 23 ರನ್ ಸಿಡಿಸಿದರೆ, ರವೀಂದ್ರ ಜಡೇಜಾ ಅಜೇಯ 17 ಹಾಗೂ ಅಕ್ಷರ್ ಪಟೇಲ್ 10 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.

ಇಂಗ್ಲೆಂಡ್ ಕ್ರಿಕೆಟ್ ತಂಡದ ಪರ ಕ್ರಿಸ್ ಜೋರ್ಡನ್ 3 ವಿಕೆಟ್ ಪಡೆದರೆ, ರೀಸ್ ಟಾಪ್ಲೆ, ಜೋಫ್ರಾ ಆರ್ಚರ್, ಸ್ಯಾಮ್ ಕರ್ರನ್, ಆದಿಲ್ ರಶೀದ್ ತಲಾ ಒಂದೊಂದು ವಿಕೆಟ್ ಪಡೆದರು.