ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಗೆಲ್ಲಲು 111 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ, ಮೊದಲ ಓವರ್‌ನಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಕೊಹ್ಲಿ ಮುಂಬೈ ಮೂಲದ ವೇಗಿ ಸೌರಭ್ ನೇತ್ರಾವಲ್ಕರ್ ಬೌಲಿಂಗ್‌ನಲ್ಲಿ ಕೊಹ್ಲಿ ಶೂನ್ಯ ಸುತ್ತಿ ವಿಕೆಟ್ ಕೀಪರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ನ್ಯೂಯಾರ್ಕ್‌: ಆರ್ಶದೀಪ್ ಸಿಂಗ್ ಮಾರಕ ಬೌಲಿಂಗ್ ಹಾಗೂ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಅವರ ಸಮಯೋಚಿತ ಜತೆಯಾಟದ ನೆರವಿನಿಂದ ಆತಿಥೇಯ ಯುಎಸ್‌ಎ ತಂಡದ ಎದುರು 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 'ಎ' ಗುಂಪಿನಲ್ಲಿ ಮೊದಲ ತಂಡವಾಗಿ ಸೂಪರ್ 8 ಹಂತಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯಲ್ಲಿ ಭಾರತ ಹ್ಯಾಟ್ರಿಕ್ ಗೆಲುವು ಸಾಧಿಸಿದರೆ, ಆತಿಥೇಯ ಯುಎಸ್‌ಎ ತಂಡವು ಟೂರ್ನಿಯಲ್ಲಿ ಮೊದಲ ಸೋಲಿನ ಕಹಿ ಅನುಭವಿಸಿದೆ. 

ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಗೆಲ್ಲಲು 111 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ, ಮೊದಲ ಓವರ್‌ನಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಕೊಹ್ಲಿ ಮುಂಬೈ ಮೂಲದ ವೇಗಿ ಸೌರಭ್ ನೇತ್ರಾವಲ್ಕರ್ ಬೌಲಿಂಗ್‌ನಲ್ಲಿ ಕೊಹ್ಲಿ ಶೂನ್ಯ ಸುತ್ತಿ ವಿಕೆಟ್ ಕೀಪರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ನಾಯಕ ರೋಹಿತ್ ಶರ್ಮಾ ಕೂಡಾ ಕೇವಲ 3 ರನ್ ಗಳಿಸಿ ನೇತ್ರಾವಲ್ಕರ್‌ಗೆ ಎರಡನೇ ಬಲಿಯಾದರು. ಟೀಂ ಇಂಡಿಯಾ 10 ರನ್ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರು ಪೆವಿಲಿಯನ್ ಸೇರಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 18 ರನ್ ಗಳಿಸಿ ಅಲಿ ಖಾನ್‌ಗೆ ವಿಕೆಟ್ ಒಪ್ಪಿಸಿದರು.

Scroll to load tweet…

"ಓರ್ವ ನಾಲಾಯಕ್ ಮಾತ್ರ...": ಮತ್ತೊಮ್ಮೆ ಮಾಜಿ ಕ್ರಿಕೆಟಿಗನ ಮೇಲೆ ಬೆಂಕಿಯುಗುಳಿದ ಭಜ್ಜಿ..!

ದುಬೆ-ಸೂರ್ಯ ಗೆಲುವಿನ ಜತೆಯಾಟ: ಕೇವಲ 39 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ 4ನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಹಾಗೂ ಶಿವಂ ದುಬೆ 65 ಎಸೆತಗಳನ್ನು ಎದುರಿಸಿ ಮುರಿಯದ 67 ರನ್‌ಗಳ ಜತೆಯಾಟವಾಡುವ ಮೂಲಕ ಇನ್ನೂ 10 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಸೂರ್ಯಕುಮಾರ್ ಯಾದವ್ 49 ಎಸೆತಗಳನ್ನು ಎದುರಿಸಿ ತಲಾ 2 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಬಾರಿಸಿದರು. ಇದು ಟಿ20 ಕ್ರಿಕೆಟ್‌ನಲ್ಲಿ ಸೂರ್ಯ ಬಾರಿಸಿದ 50ನೇ ಅರ್ಧಶತಕ ಎನಿಸಿತು. ಇನ್ನು ಸೂರ್ಯಕುಮಾರ್ ಯಾದವ್‌ಗೆ ಉತ್ತಮ ಸಾಥ್ ನೀಡಿದ ಶಿವಂ ದುಬೆ 35 ಎಸೆತಗಳನ್ನು ಎದುರಿಸಿ ತಲಾ ಒಂದು ಬೌಂಡರಿ ಹಾಗೂ ಸಿಕ್ಸರ್ ಸಹಿತ ಅಜೇಯ 31 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆರ್ಶದೀಪ್ ಸಿಂಗ್ ಬೆಂಕಿ ಬೌಲಿಂಗ್; ಮೂರಂಕಿ ಮೊತ್ತ ಗಳಿಸಲು ತಿಣುಕಾಡಿದ ಅಮೆರಿಕ..!

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಯುಎಸ್‌ಎ ತಂಡವು ಆರ್ಶದೀಪ್ ಸಿಂಗ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಆರ್ಶದೀಪ್ ಸಿಂಗ್ 9 ರನ್ ನೀಡಿ 4 ವಿಕೆಟ್ ಪಡೆಯುವ ಮೂಲಕ ಯುಎಸ್‌ಎ ತಂಡವನ್ನು ನಿಗದಿತ 20 ಓವರ್‌ಗಳಲ್ಲಿ 8 ಕಳೆದುಕೊಂಡು 110 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.