Asianet Suvarna News Asianet Suvarna News

T20 World Cup 2024 ಬಾಂಗ್ಲಾದೇಶ ಎದುರಿನ ಪಂದ್ಯಕ್ಕೆ ಬಲಿಷ್ಠ ಸಂಭಾವ್ಯ ಭಾರತ ಕ್ರಿಕೆಟ್ ತಂಡ ಪ್ರಕಟ; ಒಂದು ಮೇಜರ್ ಚೇಂಜ್?

ಈ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗದಲ್ಲೂ ಅದ್ಭುತ ಪ್ರದರ್ಶನ ತೋರುತ್ತಾ ಸೂಪರ್ 8 ಹಂತ ಪ್ರವೇಶಿಸಿದೆ. ಸತತ ಗೆಲುವುಗಳೊಂದಿಗೆ ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾಗೆ ಶಾಕ್ ನೀಡಲು ಬಾಂಗ್ಲಾದೇಶ ತಂಡವು ಎದುರು ನೋಡುತ್ತಿದೆ.

T20 World Cup 2024 Team India Probable Squad against Bangladesh one changes expected kvn
Author
First Published Jun 22, 2024, 11:24 AM IST

ಆ್ಯಂಟಿಗಾ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಪಂದ್ಯದಲ್ಲಿಂದು ಭಾರತ ಹಾಗೂ ನೆರೆಯ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಮಹತ್ವದ ಪಂದ್ಯಕ್ಕೆ ಇಲ್ಲಿನ ಸರ್. ವಿವಿನ್ ರಿಚರ್ಡ್‌ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಈ ಪಂದ್ಯ ಬಾಂಗ್ಲಾದೇಶ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದ್ದರೇ, ಸೆಮೀಸ್‌ ಪ್ರವೇಶಿಸುವ ನಿಟ್ಟಿನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪಾಲಿಗೆ ಮಹತ್ವದ ಪಂದ್ಯ ಎನಿಸಿಕೊಂಡಿದೆ.

ಈ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗದಲ್ಲೂ ಅದ್ಭುತ ಪ್ರದರ್ಶನ ತೋರುತ್ತಾ ಸೂಪರ್ 8 ಹಂತ ಪ್ರವೇಶಿಸಿದೆ. ಸತತ ಗೆಲುವುಗಳೊಂದಿಗೆ ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾಗೆ ಶಾಕ್ ನೀಡಲು ಬಾಂಗ್ಲಾದೇಶ ತಂಡವು ಎದುರು ನೋಡುತ್ತಿದೆ.

T20 World Cup 2024: ಇಂದು ಭಾರತ vs ಬಾಂಗ್ಲಾ ಸೂಪರ್‌-8 ಕದನ

ಆದರೆ ಟೀಂ ಇಂಡಿಯಾದ ಅದ್ಭುತ ಪ್ರದರ್ಶನದ ಹೊರತಾಗಿಯೂ ತಂಡದ ಇಬ್ಬರು ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿರುವ ಭಾರತ ಕ್ರಿಕೆಟ್ ತಂಡದ ಮ್ಯಾನೇಜ್‌ಮೆಂಟ್ ತಲೆನೋವು ಹೆಚ್ಚಿಸುವಂತೆ ಮಾಡಿದೆ. ಈ ಟಿ20 ವಿಶ್ವಕಪ್‌ನಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮನಸ್ಸು ಮಾಡಿದ್ದರು. ಆದರೆ ಈ ನಡೆಯಿಂದ ಟೀಂ ಇಂಡಿಯಾಗೆ ಯಶಸ್ಸು ಸಿಕ್ಕಿದ್ದಕ್ಕಿಂತ ವೈಪಲ್ಯ ಎದುರಾಗಿದ್ದೇ ಹೆಚ್ಚು.

ಅದೃಷ್ಟವಶಾತ್ ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್, ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಆಟ ಪ್ರದರ್ಶಿಸಿದ್ದರಿಂದ ಯಾವುದೇ ಅಪಾಯವಿಲ್ಲದೇ ಟೀಂ ಇಂಡಿಯಾ ಗೆಲುವಿನ ದಡ ಸೇರುತ್ತಿದೆ. ಇನ್ನು ಶಿವಂ ದುಬೆ ತಮಗೆ ಸಿಕ್ಕ ಅವಕಾಶವನ್ನು  ಪದೇ ಪದೇ ಉಪಯೋಗಿಸಿಕೊಳ್ಳಲು ಎಡವುತ್ತಿದ್ದಾರೆ.

ಭಾರತವೂ ಸೇರಿದಂತೆ ಈ 4 ತಂಡಗಳು ಸೆಮೀಸ್‌ಗೇರಲಿವೆ: ಅಚ್ಚರಿಯ ಭವಿಷ್ಯ ನುಡಿದ ಡೇಲ್ ಸ್ಟೇನ್..!

ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್ ಮೊನಾಚಾದ ದಾಳಿ ನಡೆಸುತ್ತಿರುವುದರಿಂದ ಎದುರಾಳಿ ಬ್ಯಾಟರ್‌ಗಳು ರನ್ ಗಳಿಸಲು ಪರದಾಡುತ್ತಿದ್ದಾರೆ. ಅಕ್ಷರ್ ಪಟೇಲ್ ಹಾಗೂ ಜಡೇಜಾ ಶಿಸ್ತುಬದ್ದ ದಾಳಿ ಜತೆಗೆ ಕೆಳಕ್ರಮಾಂಕದಲ್ಲಿ ಬ್ಯಾಟಿಂಗ್‌ನಲ್ಲೂ ನೆರವಾಗುತ್ತಿದ್ದಾರೆ.

ಭಾರತ ಸಂಭಾವ್ಯ ತಂಡದಲ್ಲಿ ಒಂದು ಮೇಜರ್ ಚೇಂಜ್?

ಇನ್ನು ಮುಂದೆ ಮಹತ್ವದ ಪಂದ್ಯಗಳನ್ನು ಭಾರತ ಆಡಬೇಕಿರುವುದರಿಂದ ಇಂದಿನ ಪಂದ್ಯದಲ್ಲಿ ಭಾರತ ಮತ್ತೊಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಹೌದು, ಆರಂಭಿಕ ಜೋಡಿ ಎಡಗೈ ಹಾಗೂ ಬಲಗೈ ಕಾಂಬಿನೇಷನ್‌ನೊಂದಿಗೆ ಕಣಕ್ಕಿಳಿಯುವ ಉದ್ದೇಶದಿಂದ ಇಂದು, ಯಶಸ್ವಿ ಜೈಸ್ವಾಲ್‌ ಅವರಿಗೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ. ಹೀಗಾದಲ್ಲಿ ರೋಹಿತ್ ಶರ್ಮಾ ಜತೆಗೆ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದು, ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇನ್ನು ಒಂದು ವೇಳೆ ಯಶಸ್ವಿ ಜೈಸ್ವಾಲ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿದರೆ, ಶಿವಂ ದುಬೆ ಬೆಂಚ್ ಕಾಯಿಸಬೇಕಾಗುತ್ತದೆ. ಇದರ ಹೊರತಾಗಿ ಒಂದು ವೇಳೆ ಕೊಹ್ಲಿ ಹಾಗೂ ರೋಹಿತ್ ಮತ್ತೊಮ್ಮೆ ಇನಿಂಗ್ಸ್ ಆರಂಭಿಸಿದರೆ, ಶಿವಂ ದುಬೆ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಕ್ಕಿದರೂ ಅಚ್ಚರಿಯಿಲ್ಲ, 

ಸಂಭವನೀಯ ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್, ಶಿವಂ ದುಬೆ/ಸಂಜು ಸ್ಯಾಮ್ಸನ್‌/ಯಶಸ್ವಿ ಜೈಸ್ವಾಲ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್, ಅರ್ಶ್‌ದೀಪ್‌ ಸಿಂಗ್.

ಪಂದ್ಯ: ರಾತ್ರಿ 8 ಗಂಟೆಗೆ
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಹಾಟ್‌ಸ್ಟಾರ್‌.
 

Latest Videos
Follow Us:
Download App:
  • android
  • ios