T20 World Cup ಕಿವೀಸ್ ಮಣಿಸಿ ಸೆಮೀಸ್ ಆಸೆ ಜೀವಂತವಾಗಿರಿಸಿಕೊಂಡ ಇಂಗ್ಲೆಂಡ್..!

ನ್ಯೂಜಿಲೆಂಡ್ ಎದುರು ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್‌
ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ಜೋಸ್ ಬಟ್ಲರ್ ಪಡೆ
ಸೆಮೀಸ್‌ಗೇರುವ ಅವಕಾಶ ಉಳಿಸಿಕೊಂಡ ಇಂಗ್ಲೆಂಡ್

T20 World Cup England All Round Performance helps 20 runs win over New Zealand and keep Semis hope alive kvn

ಬ್ರಿಸ್ಬೇನ್(ನ.01): ಜೋಸ್ ಬಟ್ಲರ್, ಅಲೆಕ್ಸ್ ಹೇಲ್ಸ್ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡವು, ನ್ಯೂಜಿಲೆಂಡ್ ವಿರುದ್ದ 20 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಜೋಸ್ ಬಟ್ಲರ್ ಪಡೆಯುವ ಸೆಮೀಸ್‌ಗೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಇಂಗ್ಲೆಂಡ್ ನೀಡಿದ್ದ 180 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಇಲ್ಲಿನ ಗಾಬಾ ಮೈದಾನದಲ್ಲಿ ಇಂಗ್ಲೆಂಡ್‌ ನೀಡಿದ್ದ ಸವಾಲಿನ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಡೆವೊನ್ ಕಾನ್‌ವೇ 9 ಎಸೆತಗಳನ್ನು ಎದುರಿಸಿ ಕೇವಲ 3 ರನ್ ಗಳಿಸಿ ಕ್ರಿಸ್ ವೋಕ್ಸ್‌ಗೆ ವಿಕೆಟ್ ಒಪ್ಪಿಸಿದರೆ, ಫಿನ್ ಅಲೆನ್ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಹೀಗಾಗಿ ನ್ಯೂಜಿಲೆಂಡ್ ತಂಡವು 28 ರನ್‌ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದ್ದರು. ಇನ್ನು ಮೂರನೇ ವಿಕೆಟ್‌ಗೆ ಜತೆಯಾದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಕಳೆದ ಪಂದ್ಯದ ಗೆಲುವಿನ ಹೀರೋ ಗ್ಲೆನ್ ಫಿಲಿಫ್ಸ್ 91 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ನಾಯಕ ಕೇನ್‌ ವಿಲಿಯಮ್ಸನ್‌ 40 ಎಸೆತಗಳಲ್ಲಿ 40 ರನ್ ಬಾರಿಸಿ ವಿಕೆಟ್‌ ಒಪ್ಪಿಸಿದರು. ವಿಲಿಯಮ್ಸನ್‌ ಮಂದಗತಿಯಲ್ಲಿ ರನ್‌ ಗಳಿಸಿಕೊಂಡು ತಂಡದ ಪಾಲಿಗೆ ಮುಳುವಾಗಿ ಪರಿಣಮಿಸಿತು.

ಗ್ಲೆನ್ ಫಿಲಿಫ್ಸ್‌ ಏಕಾಂಗಿ ಹೋರಾಟ: ಕಳೆದ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸುವ ಮೂಲಕ ಏಕಾಂಗಿಯಾಗಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಗ್ಲೆನ್ ಫಿಲಿಫ್ಸ್‌ ಮತ್ತೊಮ್ಮೆ ಭರ್ಜರಿ ಅರ್ಧಶತಕ ಸಿಡಿಸಿ ಕಿವೀಸ್ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದ್ದರು. ಸಿಕ್ಕ ಜೀವದಾನವನ್ನು ಸದುಪಯೋಗ ಪಡಿಸಿಕೊಂಡ ಗ್ಲೆನ್ ಫಿಲಿಫ್ಸ್‌ ಕೇವಲ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಆಕರ್ಷಕ 62 ರನ್ ಬಾರಿಸಿ 18ನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿದ್ದರು. ಒಂದು ವೇಳೆ ಗ್ಲೆನ್ ಫಿಲಿಫ್ಸ್‌ ಕೊನೆಯವರೆಗೂ ಕ್ರೀಸ್‌ನಲ್ಲಿದ್ದರೇ ಫಲಿತಾಂಶ ಬೇರೆಯದ್ದೇ ಆಗುವ ಸಾಧ್ಯತೆಯಿತ್ತು.

T20 World Cup: ಬಟ್ಲರ್-ಹೇಲ್ಸ್‌ ಸ್ಪೋಟಕ ಬ್ಯಾಟಿಂಗ್, ಕಿವೀಸ್‌ಗೆ ಸವಾಲಿನ ಗುರಿ ನೀಡಿದ ಇಂಗ್ಲೆಂಡ್

ಇನ್ನು ಕೊನೆಯಲ್ಲಿ ಜೇಮ್ಸ್ ನೀಶಮ್(6), ಡೇರಲ್ ಮಿಚೆಲ್(3) ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದು ನ್ಯೂಜಿಲೆಂಡ್ ತಂಡದ ಪಾಲಿಗೆ ಹಿನ್ನೆಡೆಯಾಗಿ ಪರಿಣಮಿಸಿತು.

ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಮೊದಲ ವಿಕೆಟ್‌ಗೆ ಅಲೆಕ್ಸ್‌ ಹೇಲ್ಸ್‌ ಹಾಗೂ ನಾಯಕ ಜೋಸ್ ಬಟ್ಲರ್ ಜೋಡಿ 10.2 ಓವರ್‌ಗಳಲ್ಲಿ 81 ರನ್‌ಗಳ ಜತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು. ಇಂಗ್ಲೆಂಡ್ ಬೌಲರ್‌ಗಳ ಮೇಲೆ ಪವರ್‌ ಪ್ಲೇನಲ್ಲೇ ಸವಾರಿ ಮಾಡಿದ ಅಲೆಕ್ಸ್ ಹೇಲ್ಸ್‌ ಕೇವಲ 40 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಆಕರ್ಷಕ 52 ರನ್ ಬಾರಿಸಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಮಿಚೆಲ್ ಸ್ಯಾಂಟ್ನರ್ ಯಶಸ್ವಿಯಾದರು. ಇನ್ನು ಇದರ ಬೆನ್ನಲ್ಲೇ ಬ್ಯಾಟಿಂಗ್ ಬಡ್ತಿ ಪಡೆದು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೋಯಿನ್ ಅಲಿ ಹೆಚ್ಚು ಕಮಾಲ್ ಮಾಡಲು ಕಿವೀಸ್ ಬೌಲರ್‌ಗಳು ಅವಕಾಶ ಮಾಡಿಕೊಡಲಿಲ್ಲ. ಮೋಯಿನ್ ಅಲಿ ಕೇವಲ 5 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಮೊದಲ ವಿಕೆಟ್‌ಗೆ ಅಲೆಕ್ಸ್‌ ಹೇಲ್ಸ್‌ ಹಾಗೂ ನಾಯಕ ಜೋಸ್ ಬಟ್ಲರ್ ಜೋಡಿ 10.2 ಓವರ್‌ಗಳಲ್ಲಿ 81 ರನ್‌ಗಳ ಜತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು. ಇಂಗ್ಲೆಂಡ್ ಬೌಲರ್‌ಗಳ ಮೇಲೆ ಪವರ್‌ ಪ್ಲೇನಲ್ಲೇ ಸವಾರಿ ಮಾಡಿದ ಅಲೆಕ್ಸ್ ಹೇಲ್ಸ್‌ ಕೇವಲ 40 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಆಕರ್ಷಕ 52 ರನ್ ಬಾರಿಸಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಮಿಚೆಲ್ ಸ್ಯಾಂಟ್ನರ್ ಯಶಸ್ವಿಯಾದರು. 

ನೂರನೇ ಪಂದ್ಯ ಸ್ಮರಣೀಯವಾಗಿಸಿಕೊಂಡ ಬಟ್ಲರ್: ಹೌದು, ಇಂಗ್ಲೆಂಡ್ ಪರ ನೂರನೇ ಟಿ20 ಪಂದ್ಯವನ್ನಾಡಿದ ಜೋಸ್ ಬಟ್ಲರ್ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ತಮ್ಮ ನೂರನೇ ಟಿ20 ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆರಂಭದಲ್ಲಿ ಅಲೆಕ್ಸ್‌ ಹೇಲ್ಸ್‌ಗೆ ಉತ್ತಮ ಸಾಥ್ ನೀಡಿದ ಬಟ್ಲರ್, ಆ ಬಳಿಕ ತಮಗೆ ಸಿಕ್ಕ ಎರಡು ಜೀವದಾನವನ್ನು ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು.  ಜೋಸ್ ಬಟ್ಲರ್ 47 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಆಕರ್ಷಕ 73 ರನ್ ಬಾರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು.

ಇಂಗ್ಲೆಂಡ್ ಪರ ಗರಿಷ್ಠ ರನ್ ಸರದಾರ ಬಟ್ಲರ್: ಇಂಗ್ಲೆಂಡ್ ತಂಡದ ಪರ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನ್ನುವ ದಾಖಲೆಯನ್ನು ಜೋಸ್ ಬಟ್ಲರ್ ಇದೇ ಪಂದ್ಯದಲ್ಲಿ ನಿರ್ಮಿಸಿದರು. ಈ ಮೊದಲು ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್‌ 2458 ರನ್ ಬಾರಿಸಿದ್ದರು. ಆದರೆ ಇದೀಗ ಜೋಸ್ ಬಟ್ಲರ್, ಮಾರ್ಗನ್ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾದರು.

 

Latest Videos
Follow Us:
Download App:
  • android
  • ios