Asianet Suvarna News Asianet Suvarna News

ಇನ್‌ಸ್ಟಾ ಇನ್‌ಫ್ಲುಯೆನ್ಸರ್ ಜೊತೆ ಹಾರ್ದಿಕ್ ಪಾಂಡ್ಯ ಡೇಟಿಂಗ್? ವೈರಲ್ ವಿಡಿಯೋ ಸೃಷ್ಟಿಸಿದ ಅನುಮಾನ!

ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶಾ ಜೊತೆಯಾಗಿಲ್ಲ. ಡಿವೋರ್ಸ್ ಕುರಿತು ಅಧಿಕೃತ ಹೇಳಿಕೆಯನ್ನು ಇಬ್ಬರೂ ನೀಡಿಲ್ಲ. ಇದರ ನಡುವೆ ಹಾರ್ದಿಕ್ ಪಾಂಡ್ಯ ಇದೀಗ  ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಜೊತೆ ಡೇಟಿಂಗ್‌ನಲ್ಲಿದ್ದಾರ ಅನ್ನೋ ಅನುಮಾನಗಳು ಒಂದು ವೈರಲ್ ವಿಡಿಯೊದಿಂದ ಸೃಷ್ಟಿಯಾಗಿದೆ.
 

T20 World cup hero hardik pandya and Insta influencer video sparked speculation over dating ckm
Author
First Published Jul 10, 2024, 4:06 PM IST

ಬರೋಡ(ಜು.10) ಟಿ20 ವಿಶ್ವಕಪ್ ಗೆಲುವಿನ ಹೀರೋ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ಬ್ರೇಕ್ ಅಪ್ ರೂಮರ್ ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಸೆಲೆಬ್ರೆಟಿ ಜೋಡಿ ಅಧಿಕೃತ ಹೇಳಿಕೆ ನೀಡದಿದ್ದರೂ ಇವರಿಬ್ಬರು ಜೊತೆಯಾಗಿಲ್ಲ ಅನ್ನೋದು ಸ್ಪಷ್ಟ. ಇದರ ನಡುವೆ ಹಾರ್ದಿಕ್ ಪಾಂಡ್ಯ, ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಜೊತೆ ಡೇಟಿಂಗ್‌ನಲ್ಲಿದ್ದಾರ? ಅನ್ನೋ ಪ್ರಶ್ನೆಗಳು ಎದ್ದಿದೆ. ಇದಕ್ಕೆ ಕಾರಣ ಸೋಶಿಯಲ್  ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ.

ಪಿಎಸ್‌29 ಅನ್ನೋ ಇನ್‌ಸ್ಟಾಗ್ರಾಂ ಖಾತೆ ನಿರ್ವಹಿಸುತ್ತಿರುವ ಪ್ರಾಚಿ ಸೋಲಂಕಿ ಅನ್ನೋ ಇನ್‌ಫ್ಲುಯೆನ್ಸರ್ ದಿಢೀರ್ ಹಾರ್ದಿಕ್ ಪಾಂಡ್ಯ ಮನೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಜೊತೆ ಫೋಟೋ, ವಿಡಿಯೋ ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ, ವಿಶ್ವಕಪ್ ಹೀರೋ ಭೇಟಿಯಾದಾಗ ಎಂದು ವಿಡಿಯೋ ಹಂಚಿಕೊಂಡಿದ್ದಾರೆ. ಇಷ್ಟೇ ಅಲ್ಲ ಈ ಭೇಟಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ. ಆತ್ಮೀಯವಾಗಿ ಬರಮಾಡಿಕೊಂಡಿದ್ದಕ್ಕೆ ಹಾರ್ದಿಕ್ ಪಾಂಡ್ಯಗೆ ಧನ್ಯವಾದ ಎಂದು ಪ್ರಾಚಿ ಸೋಲಂಕಿ ಹೇಳಿದ್ದಾರೆ.

ಮಗನೊಂದಿಗೆ ವಿಶ್ವಕಪ್‌ ಗೆಲುವು ಆಚರಿಸಿಕೊಂಡ ಹಾರ್ದಿಕ್‌ ಪಾಂಡ್ಯ, ಪತ್ನಿ ನತಾಶಾ ಮಿಸ್‌!

ಟಿ 20 ವಿಶ್ವಕಪ್ ಟ್ರೋಫಿ ಗೆಲುವಿನ ಬಳಿಕ ಮನೆಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಕುಟುಂಬ ಸದಸ್ಯರೊಂದಿಗೆ ಸಂಭ್ರಮ ಆಚರಿಸಿದ್ದರು. ಈ ವೇಳೆ ನತಾಶ ಇರಲಿಲ್ಲ. ಇದೀಗ ಪ್ರಾಚಿ ನೇರವಾಗಿ ಹಾರ್ದಿಕ್ ಪಾಂಡ್ಯ ಮನೆಗೆ ತೆರಳಿ ಶುಭಾಶಯ ತಿಳಿಸಿದ್ದಾರೆ. ಇಷ್ಟೇ ಅಲ್ಲ ಹಾರ್ದಿಕ್ ಪಾಂಡ್ಯ ಹಾಗೂ ಕುಟುಂಬ ಸದಸ್ಯರ ಜೊತೆ ಹೆಚ್ಚು ಸಮಯ ಕಳೆದಿದ್ದಾರೆ. ಕ್ರುನಾಲ್ ಪಾಂಡ್ಯ ಸೇರಿದಂತೆ ಹಾರ್ದಿಕ್ ಕುಟುಂಬ ಸದಸ್ಯರ ಜೊತೆಗೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

 

 
 
 
 
 
 
 
 
 
 
 
 
 
 
 

A post shared by Prachi Solanki (@ps_29)

 

ಹಾರ್ದಿಕ್ ಪಾಂಡ್ಯ ಬಾಳಿನಿಂದ ನತಾಶ ದೂರವಾದ ಬಳಿಕ ಇದೀಗ ಹಾರ್ದಿಕ್ ಪಾಂಡ್ಯ ಇನ್‌ಸ್ಟಾ ಇನ್‌ಫ್ಲುಯೆನ್ಸರ್ ಜೊತೆ ಡೇಟಿಂಗ್‌ನಲ್ಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಕುರಿತು ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. ಅಭಿಮಾನಿಗಳು ಬಗೆ ಬಗೆಯ ಕಮೆಂಟ್ ಮಾಡಿದ್ದಾರೆ.  ಹಾರ್ದಿಕ್ ಪಾಂಡ್ಯ ಡೇಟಿಂಗ್ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿಗಳು ಲಭ್ಯವಿಲ್ಲ. 

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಅಲ್ರೌಂಡರ್ ಪ್ರದರ್ಶನ ಭಾರತ ತಂಡಕ್ಕೆ ಟ್ರೋಫಿ ಗೆಲ್ಲಿಸಿಕೊಟ್ಟಿತ್ತು. ಅದರಲ್ಲೂ ಫೈನಲ್ ಪಂದ್ಯದ ಅಂತಿಮ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ತೋರಿದ ಪ್ರಬುದ್ಧತೆ ಹಾಗೂ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಭಾರತಕ್ಕೆ ಟ್ರೋಫಿ ತಂದುಕೊಟ್ಟಿತ್ತು. ಗೆಲುವಿನ ಬಳಿಕ ಹಾರ್ದಿಕ್ ಪಾಂಡ್ಯ ಭಾವುಕರಾಗಿದ್ದರು. ಹಲವು ಟೀಕೆಗಳನ್ನು ಎದುರಿಸಬೇಕಾಯಿತು. ತಾಳ್ಮೆಯಿಂದ  ಎಲ್ಲವನ್ನೂ ಎದುರಿಸಿದ್ದೇನೆ. ನನ್ನಿಂದ ಇದು ಸಾಧ್ಯ ಎಂಬ ಆತ್ಮವಿಶ್ವಾಸದಲ್ಲಿ ಪಂದ್ಯ ಆಡಿದ್ದೇನೆ ಎಂದಿದ್ದರು.

.ಹಾರ್ದಿಕ್‌ ಪಾಂಡ್ಯ ಟಿ20ಯಲ್ಲಿ ವಿಶ್ವ ನಂ.1 ಆಲ್ರೌಂಡರ್‌..! ಈ ಸಾಧನೆ ಮಾಡಿದ ಮೊದಲ ಭಾರತೀಯ


 

 
 
 
 
 
 
 
 
 
 
 
 
 
 
 

A post shared by Prachi Solanki (@ps_29)

Latest Videos
Follow Us:
Download App:
  • android
  • ios