* ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಟೀಂ ಇಂಡಿಯಾ* ಹೆಡ್‌ ಕೋಚ್‌ ರವಿಶಾಸ್ತ್ರಿ ಒಪ್ಪಂದಾವಧಿ ಅಂತ್ಯ* ಭಾವನಾತ್ಮಕ ಅಪ್ಪುಗೆಯ ಮೂಲದ ಶಾಸ್ತ್ರಿಗೆ ವಿದಾಯ ಕೋರಿದ ಕೊಹ್ಲಿ

ನವದೆಹಲಿ(ನ.10): ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ರವಿಶಾಸ್ತ್ರಿ (Ravi Shastri) ಒಪ್ಪಂದಾವಧಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಭಿಯಾನ ಅಂತ್ಯವಾಗುವುದರೊಂದಿಗೆ ಮುಕ್ತಾಯವಾಗಿದೆ. ಸೂಪರ್‌ 12 ಹಂತದಲ್ಲಿ ಭಾರತ ಪಾಲಿನ ಕೊನೆಯ ಪಂದ್ಯವಾದ ನಮೀಬಿಯಾ ವಿರುದ್ದದ ಪಂದ್ಯದ ಬಳಿಕ ಟೀಂ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ ಭಾವನಾತ್ಮಕ ಅಪ್ಪುಗೆಯ ಮೂಲಕ ಕೋಚ್ ರವಿಶಾಸ್ತ್ರಿಯನ್ನು ಬೀಳ್ಕೊಟ್ಟಿದ್ದಾರೆ. ಈ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

View post on Instagram

2021ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಸೂಪರ್‌ 12 ಹಂತದಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ ಗ್ರೂಪ್ 2ನಲ್ಲಿ ಸ್ಥಾನ ಪಡೆದಿತ್ತು. ಆದರೆ ಮೊದಲೆರಡು ಪಂದ್ಯದಲ್ಲಿ ಕ್ರಮವಾಗಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ದ ಹೀನಾಯ ಸೋಲು ಕಾಣುವ ಮೂಲಕ ಸೆಮೀಸ್ ಅವಕಾಶವನ್ನು ಕೈಚೆಲ್ಲಿತ್ತು. ಭಾರತದ ಅಭಿಯಾನ ಕೊನೆಗೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಹೆಡ್ ಕೋಚ್ ರವಿಶಾಸ್ತ್ರಿ ಒಪ್ಪಂದಾವಧಿ ಕೂಡಾ ಅಂತ್ಯವಾಗಿದೆ. ಇದೇ ವೇಳೆ ಈ ಮೊದಲೇ ಘೋಷಿಸಿದಂತೆ ವಿರಾಟ್ ಕೊಹ್ಲಿ ಸಹ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಸಿದ್ದಾರೆ. ಇನ್ನು ಮುಂದೆ ವಿರಾಟ್ ಕೊಹ್ಲಿ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

T20 World Cup: Ind vs Pak ದಾಖಲೆಯ ಸಂಖ್ಯೆಯಲ್ಲಿ ಇಂಡೋ-ಪಾಕ್ ಟಿ20 ಪಂದ್ಯ ವೀಕ್ಷಣೆ..!

ಈಗಾಗಲೇ ರವಿಶಾಸ್ತ್ರಿ ಸ್ಥಾನಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ (Rahul Dravid) ಆಯ್ಕೆಯಾಗಿದ್ದಾರೆ. ನವೆಂಬರ್ 17ರಿಂದ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ ಆರಂಭವಾಗಲಿರುವ ಟಿ20 ಸರಣಿಯಿಂದಲೇ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. 

ಕಳೆದ ಕೆಲವು ವರ್ಷಗಳಿಂದ ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಜೋಡಿ ಹಲವಾರು ಸ್ಮರಣೀಯ ಸರಣಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ 4 ವರ್ಷಗಳ ಅವಧಿಯಲ್ಲಿ ಈ ಜೋಡಿ ಭಾರತ ಕ್ರಿಕೆಟ್ ತಂಡದ ಹಲವು ಐತಿಹಾಸಿಕ ಗೆಲುವುಗಳಿಗೆ ಸಾಕ್ಷಿಯಾಗಿದೆ. ನಮೀಬಿಯಾ ಎದುರಿನ ಪಂದ್ಯ ಮುಕ್ತಾಯದ ಬಳಿಕ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿ ತಂಡದ ಹೆಡ್‌ ಕೋಚ್ ರವಿಶಾಸ್ತ್ರಿಯನ್ನು ಬಿಗಿದಪ್ಪಿ ಭಾವನಾತ್ಮಕವಾಗಿ ವಿದಾಯ ಕೋರಿದ್ದಾರೆ. ಈ ಕ್ಷಣ ನೆಟ್ಟಿಗರ ಮನ ಗೆದ್ದಿದೆ. 

Scroll to load tweet…
Scroll to load tweet…
Scroll to load tweet…
Scroll to load tweet…

ಯುಎಇನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪ್ರದರ್ಶನ ಅಷ್ಟೇನೂ ಉತ್ತಮವಾಗಿರಲಿಲ್ಲ. ಮೊದಲೆರಡು ಪಂದ್ಯ ಸೋತ ಬಳಿಕ ಉಳಿದ 3 ಪಂದ್ಯಗಳಲ್ಲಿ ವಿರಾಟ್ ಪಡೆ ಗೆಲುವು ಸಾಧಿಸಿದರೂ ಸಹಾ ಸೆಮೀಸ್‌ಗೇರಲು ವಿಫಲವಾಗಿತ್ತು. ಇದೀಗ ಬುಧವಾರ(ನ.10) ಅಬುಧಾಬಿಯಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ಸವಾಲನ್ನು ಸ್ವೀಕರಿಸಲಿದೆ. ಇನ್ನು ನವೆಂಬರ್ 11ರಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಸಾಕ್ಷಿಯಾಗಲಿದೆ.

ಐಸಿಸಿ ಟ್ವಿಟರ್‌ ಕವರ್‌ ಫೋಟೋದಲ್ಲಿ ವಿರಾಟ್ ಕೊಹ್ಲಿ

ದುಬೈ: ಭಾರತದ ಟಿ20 ನಾಯಕತ್ವ ತೊರೆದಿರುವ ವಿರಾಟ್‌ ಕೊಹ್ಲಿ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ) ಸಾಮಾಜಿಕ ತಾಣದಲ್ಲಿ ವಿಶೇಷವಾಗಿ ಗೌರವ ಸಲ್ಲಿಸಿದೆ. ವಿರಾಟ್ ಕೊಹ್ಲಿ ಸೋಮವಾರ ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಕೊನೆಯ ಬಾರಿಗೆ ಭಾರತ ಟಿ20 ನಾಯಕರಾಗಿ ಕಾರ‍್ಯನಿರ್ವಹಿಸಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ಫೀಲ್ಡಿಂಗ್‌ ಮಾಡುತ್ತಿರುವ ಫೋಟೋವನ್ನು ಮಂಗಳವಾರ ಐಸಿಸಿ ತನ್ನ ಟ್ವಿಟರ್‌ ಖಾತೆಯ ಕವರ್‌ ಫೋಟೋವಾಗಿ ಬಳಸಿ ಗೌರವ ಸಲ್ಲಿಸಿದೆ.