T20 World Cup Ind vs Aus ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
* ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
* ಭಾರತ ತಂಡದಲ್ಲಿ ಮೂರು ಬದಲಾವಣೆ
* ವಿರಾಟ್ ಕೊಹ್ಲಿಗೆ ವಿಶ್ರಾಂತಿ, ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕ
ದುಬೈ(ಅ.20): ಐಸಿಸಿ ಟಿ20 ವಿಶ್ವಕಪ್ (T20 World Cup) ಟೂರ್ನಿಯ ಅಭ್ಯಾಸ ಪಂದ್ಯದಲ್ಲಿಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಫಿಂಚ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ. ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ (Rohit Sharma) ಇಂದು ನಾಯಕರಾಗಿ ಟೀಂ ಇಂಡಿಯಾವನ್ನು (Team India) ಮುನ್ನಡೆಸುತ್ತಿದ್ದಾರೆ. ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಹಾಗೂ ವರುಣ್ ಚಕ್ರವರ್ತಿ ತಂಡ ಕೂಡಿಕೊಂಡಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡದಲ್ಲೂ ಸಹಾ ಬದಲಾವಣೆಗಳಾಗಿದ್ದು, ಜೋಶ್ ಹೇಜಲ್‌ವುಡ್, ಮಿಚೆಲ್ ಸೆಪ್ಸನ್ ಹಾಗೂ ಜೋಶ್ ಇಂಗ್ಲಿಸ್‌ಗೆ ವಿಶ್ರಾಂತಿ ನೀಡಲಾಗಿದೆ.
ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಎದುರು 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡು 188 ರನ್ ಬಾರಿಸಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಭಾರತ ತಂಡ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆ.ಎಲ್. ರಾಹುಲ್ (51) ಹಾಗೂ ಇಶಾನ್ ಕಿಶನ್ (70*) ಬ್ಯಾಟಿಂಗ್ ನೆರವಿನಿಂದ ಕೇವಲ 3 ವಿಕೆಟ್ ಕಳೆದುಕೊಂಡು ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತ್ತು.
T20 World Cup: ಭಾರತಕ್ಕಿಂದು ಆಸ್ಟ್ರೇಲಿಯಾ ವಿರುದ್ದ ಅಭ್ಯಾಸ ಪಂದ್ಯ
ಇನ್ನೊಂದೆಡೆ ಬಲಿಷ್ಠ ಆಸ್ಟ್ರೇಲಿಯಾ (Australia Cricket Team) ತಂಡವು ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ 3 ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡವು 7 ವಿಕೆಟ್ ಕಳೆದುಕೊಂಡು 158 ರನ್ ಬಾರಿಸಿತ್ತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ, ಸ್ಟೀವ್ ಸ್ಮಿತ್(35) ಹಾಗೂ ಮಾರ್ಕಸ್ ಸ್ಟೋಯ್ನಿಸ್(28) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್ ಕಳೆದುಕೊಂಡು ಒಂದು ಎಸೆತ ಬಾಕಿ ಇರುವಂತೆಯೇ ರೋಚಕ ಗೆಲುವು ದಾಖಲಿಸಿತ್ತು. ಐಪಿಎಲ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಾರ್ನಸ್ ಕಿವೀಸ್ ಎದುರಿನ ಪಂದ್ಯದಲ್ಲೂ ಶೂನ್ಯ ಸುತ್ತಿದ್ದರು. ಭಾರತ ವಿರುದ್ದ ವಾರ್ನರ್ ಅಬ್ಬರಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ತಂಡಗಳು ಹೀಗಿವೆ ನೋಡಿ:
ಆಸ್ಟ್ರೇಲಿಯಾ:
ಭಾರತ: