Asianet Suvarna News Asianet Suvarna News

Ind vs WI: ವಿಂಡೀಸ್‌ ಎದುರಿನ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾ ಶಾಕ್‌..!

* ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಗೂ ಮುನ್ನ ಭಾರತ ಕ್ರಿಕೆಟ್‌ ತಂಡಕ್ಕೆ ಶಾಕ್

* 3 ಪಂದ್ಯಗಳ ಟಿ20 ಸರಣಿಯು ಫೆಬ್ರವರಿ 16ರಿಂದ ಆರಂಭ

* ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾದ ಮೂರನೇ ಕ್ರಿಕೆಟಿಗ ಸುಂದರ್ 

Team India All Rounder Washington Sundar ruled out of West Indies T20Is due to Injury kvn
Author
Bengaluru, First Published Feb 15, 2022, 12:44 PM IST

ಕೋಲ್ಕತಾ(ಫೆ.15): ವೆಸ್ಟ್‌ ಇಂಡೀಸ್‌ ವಿರುದ್ದದ ಏಕದಿನ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿ ಬೀಗುತ್ತಿರುವ ರೋಹಿತ್ ಶರ್ಮಾ (Rohit Sharma) ವಿರುದ್ದ ಟೀಂ ಇಂಡಿಯಾ(Team India), ಇದೀಗ ಟಿ20 ಸರಣಿಗೆ ಸಜ್ಜಾಗಿದೆ. ವೆಸ್ಟ್‌ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದ ಭಾರತ ತಂಡದಿಂದ ಆಲ್ರೌಂಡರ್‌ ವಾಷಿಂಗ್ಟನ್‌ ಸುಂದರ್‌ (Washington Sundar) ಹೊರಬಿದ್ದಿದ್ದಾರೆ. ಸುಂದರ್‌ ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಇನ್ನು ಇನ್ನು ಮೂರು ವಾರಗಳ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. 

ವಾಷಿಂಗ್ಟನ್ ಸುಂದರ್ ವೆಸ್ಟ್ ಇಂಡೀಸ್‌ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ಮಾಡುವ ವೇಳೆ ಎಡಗಾಲು ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಸುಂದರ್ ಬದಲಿಗೆ ಕುಲ್ದೀಪ್ ಯಾದವ್‌(Kuldeep Yadav) ಭಾರತ ಕ್ರಿಕೆಟ್‌ ತಂಡ ಕೂಡಿಕೊಂಡಿದ್ದಾರೆ ಎಂದು ಬಿಸಿಸಿಐ (BCCI) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  ವೆಸ್ಟ್ ಇಂಡೀಸ್ ವಿರುದ್ದದ 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಬುಧವಾರ ನಡೆಯಲಿದ್ದು, ಬಳಿಕ ಫೆಬ್ರವರಿ 18 ಹಾಗೂ 20ಕ್ಕೆ ಮತ್ತೆರಡು ಪಂದ್ಯಗಳು ನಡೆಯಲಿವೆ.

ವಾಷಿಂಗ್ಟನ್‌ ಸುಂದರ್ ವೆಸ್ಟ್ ಇಂಡೀಸ್‌ ವಿರುದ್ದದ ಟಿ20 ಸರಣಿಯಿಂದ ಹೊರಬಿದ್ದ ಮೂರನೇ ಕ್ರಿಕೆಟಿಗ ಎನಿಸಿದ್ದಾರೆ. ಈ ಮೊದಲು ಟೀಂ ಇಂಡಿಯಾ ಉಪನಾಯಕ ಕೆ.ಎಲ್. ರಾಹುಲ್‌ (KL Rahul) ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ (Axar Patel) ಸಹಾ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ರಾಹುಲ್‌ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇನ್ನು ಕೋವಿಡ್‌ನಿಂದ ಗುಣಮುಖರಾಗಿರುವ ಅಕ್ಷರ್ ಪಟೇಲ್‌ ಬೆಂಗಳೂರಿನಲ್ಲಿರುವ ಎನ್‌ಸಿಎದಲ್ಲಿರುವ  ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

IPL Auction 2022: ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ರಾಜ್ಯದ 16 ಆಟಗಾರರು ಭಾಗಿ..!

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ (IPL Mega Auction) ವಾಷಿಂಗ್ಟನ್ ಸುಂದರ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 8.75 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. 

ವೆಸ್ಟ್ ಇಂಡೀಸ್ ವಿರುದ್ದದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯಿ, ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಕುಲ್ದೀಪ್ ಯಾದವ್.

ನಿವೃತ್ತಿ ಬಗ್ಗೆ ಇನ್ನೂ ಯೋಚಿಸಿಲ್ಲ : ವೃದ್ದಿಮಾನ್‌ ಸಾಹ

ನವದೆಹಲಿ: ಟೀಂ ಇಂಡಿಯಾದಿಂದ ಬಹುತೇಕ ಹೊರಬಿದ್ದಿದ್ದಾರೆ ಎನ್ನಲಾಗುತ್ತಿರುವ ವಿಕೆಟ್‌ ಕೀಪರ್‌ ಬ್ಯಾಟರ್‌ ವೃದ್ಧಿಮಾನ್‌ ಸಾಹ(Wriddhiman Saha), ಸದ್ಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ಅವರು, ‘ರಣಜಿ ಟ್ರೋಫಿ (Ranji Trophy) ಆಡದಿರಲು ನಾನು ಬಂಗಾಳ ಕ್ರಿಕೆಟ್‌ ಸಂಸ್ಥೆಗೆ ವೈಯಕ್ತಿಕ ಕಾರಣ ನೀಡಿದ್ದೇನೆ. ನಾನು ಈಗಲೂ ಭಾರತ ತಂಡದ ಭಾಗವಾಗಿರುವುದರಿಂದ ಹೆಚ್ಚೇನೂ ಹೇಳಲು ಸಾಧ್ಯವಿಲ್ಲ. ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾಗುತ್ತೇನೋ ಗೊತ್ತಿಲ್ಲ. ಈ ಬಾರಿ ರಣಜಿ ಆಡದಿದ್ದರೂ ಮುಂದೆ ಆಡಬಹುದು. ಆದರೆ ಭವಿಷ್ಯದ ಬಗ್ಗೆ ಗೊತ್ತಿಲ್ಲ. ನಿವೃತ್ತಿ ಬಗ್ಗೆ ಇನ್ನೂ ಯೋಚಿಸಿಲ್ಲ’ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಐಪಿಎಲ್ (IPL) ಆಟಗಾರರ ಮೆಗಾ ಹರಾಜಿನ ಮೊದಲ ದಿನ ವೃದ್ದಿಮಾನ್ ಸಾಹ ಆನ್‌ಸೋಲ್ಡ್ ಆಗಿದ್ದರು. ಇದಾದ ಬಳಿಕ ಎರಡನೇ ದಿನ ನಡೆದ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ಫ್ರಾಂಚೈಸಿಯು 1.9 ಕೋಟಿ ರುಪಾಯಿ ನೀಡಿ ಸಾಹ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.

Follow Us:
Download App:
  • android
  • ios