ಕೋಲ್ಕತಾ(ನ.19): ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಗೂ 130 ರನ್ ಗೆಲುವು ಸಾಧಿಸಿದ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾದಿಸಿದೆ. ಇದೀಗ  2ನೇ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡೋ ಲೆಕ್ಕಾಚಾರದಲ್ಲಿದೆ. 2ನೇ ಹಾಗೂ ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ಕೋಲ್ಕತಾಗೆ ಆಗಮಿಸಿದೆ.

ಇದನ್ನೂ ಓದಿ: ಟೆಸ್ಟ್ ರ‍್ಯಾಂಕಿಂಗ್‌: ಟಾಪ್‌ 10ಗೆ ಲಗ್ಗೆಯಿಟ್ಟ ಶಮಿ..!

ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯ ಹಗಲು ರಾತ್ರಿ ನಡೆಯಲಿದೆ. ಇದೇ ಮೊದಲ ಭಾರಿಗೆ ಭಾರತ ಡೇ ಅಂಡ್ ನೈಟ್ ಟೆಸ್ಟ್ ಆಯೋಜಿಸಿದೆ. ನವೆಂಬರ್ 22 ರಿಂದ 26ರ ವರೆಗೆ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಭಾರತ ಹಾಗೂ  ಬಾಂಗ್ಲಾದೇಶ ಪಿಂಕ್ ಬಾಲ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದೆ.

 

ಇದನ್ನೂ ಓದಿ: ಶೀಘ್ರದಲ್ಲಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾಗೆ ವಾಪಸ್!

ಡೆ ಅಂಡ್ ನೈಟ್ ಟೆಸ್ಟ್ ಪಂದ್ಯಕ್ಕೆ ಬಂಗಾಳ ಕ್ರಿಕೆಟ್ ಸಂಸ್ಥೆ ಎಲ್ಲಾ ತಯಾರಿ ಮಾಡಿಕೊಂಡಿದೆ. ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಮಾರ್ಗದರ್ಶನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಲು ಕಾರ್ಯಕ್ರಮ ಸಿದ್ಧವಾಗಿದೆ.