ಆಸ್ಟ್ರೇಲಿಯಾದಲ್ಲಿ ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ!

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಅಭ್ಯಾಸ ಪಂದ್ಯವನ್ನಾಡಲು ಆಲೋಚನೆಯನ್ನು ಟೀಂ ಇಂಡಿಯಾ ಕೈಬಿಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

Team India cancels intra squad match before Australia Tests here is why kvn

ನವದೆಹಲಿ: ಇದೇ ತಿಂಗಳು 22ರಿಂದ ಆಸ್ಟ್ರೇಲಿಯಾ ವಿರುದ್ಧ ಆರಂಭಗೊಳ್ಳಲಿರುವ 5 ಪಂದ್ಯಗಳ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಗೂ ಮುನ್ನ ನಿಗದಿಯಾಗಿದ್ದ ಭಾರತ ‘ಎ’ ತಂಡದ ವಿರುದ್ಧದ 3 ದಿನಗಳ ಅಭ್ಯಾಸ ಪಂದ್ಯವನ್ನು ಆಡದಿರಲು ಭಾರತ ತಂಡ ನಿರ್ಧರಿಸಿದೆ. 

ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ‘ಎ’ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನು ಬಿಸಿಸಿಐ ಆಯೋಜಿಸಿತ್ತು. ಆದರೆ ಕೋಚ್‌ ಗೌತಮ್‌ ಗಂಭೀರ್‌ ಹಾಗೂ ನಾಯಕ ರೋಹಿತ್‌ ಶರ್ಮಾ, ನೆಟ್ಸ್‌ ಅಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದಾಗಿ ತಿಳಿದುಬಂದಿದೆ. ಸದ್ಯ ಭಾರತ ‘ಎ’ ತಂಡದಲ್ಲಿರುವ ಕೆಲ ಆಟಗಾರರು ಟೆಸ್ಟ್‌ ಸರಣಿಗೂ ಉಳಿದುಕೊಳ್ಳಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಮುಂಬೈ ಟೆಸ್ಟ್‌ನಲ್ಲಿ ಜಡೇಜಾ ಮಾರಕ ದಾಳಿ; ಸಾಧಾರಣ ಮೊತ್ತಕ್ಕೆ ಕಿವೀಸ್ ಆಲೌಟ್!

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನವೆಂಬರ್ 22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಪರ್ತ್ ಟೆಸ್ಟ್‌ ಬಳಿಕ ಡಿಸೆಂಬರ್ 06ರಿಂದ ಅಡಿಲೇಡ್ ಓವಲ್ ಮೈದಾನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಡಿಸೆಂಬರ್ 14ರಿಂದ ಗಾಬಾದಲ್ಲಿ ಮೂರನೇ ಟೆಸ್ಟ್ ಪಂದ್ಯವು ನಡೆದರೆ, ಡಿಸೆಂಬರ್ 26ರಿಂದ ಐತಿಹಾಸಿಕ ಮೆಲ್ಬೊರ್ನ್ ಸ್ಟೇಡಿಯಂನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಜನವರಿ 03ರಿಂದ ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವು ನಡೆಯಲಿದೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ ತಂಡ:

ರೋಹಿತ್‌ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್‌, ಅಭಿಮನ್ಯು ಈಶ್ವರನ್‌, ಶುಭ್‌ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಕೆ.ಎಲ್‌.ರಾಹುಲ್‌, ರಿಷಭ್‌ ಪಂತ್‌, ಸರ್ಫರಾಜ್‌ ಖಾನ್‌, ಧೃವ್‌ ಜುರೆಲ್‌, ಆರ್.ಅಶ್ವಿನ್‌, ರವೀಂದ್ರ ಜಡೇಜಾ, ಮೊಹಮದ್‌ ಸಿರಾಜ್‌, ಆಕಾಶ್‌ದೀಪ್‌, ಪ್ರಸಿದ್ಧ್‌ ಕೃಷ್ಣ, ಹರ್ಷಿತ್‌ ರಾಣಾ, ನಿತೀಶ್‌ ರೆಡ್ಡಿ, ವಾಷಿಂಗ್ಟನ್‌ ಸುಂದರ್‌.

ಸಾಯಿ, ಪಡಿಕ್ಕಲ್ ಭಾರತ 'ಎ'ಗೆ ಆಸರೆ

ಮೆಕಾಮ್: ಯುವ ತಾರೆಯರಾದ ಸಾಯಿ ಸುದರ್ಶನ್ ಹಾಗೂ ದೇವದತ್ ಪಡಿಕ್ಕಲ್‌ ಆಕರ್ಷಕ ಬ್ಯಾಟಿಂಗ್ ನೆರವಿನಿಂದ, ಆಸ್ಟ್ರೇಲಿಯಾ 'ಎ' ವಿರುದ್ಧದ ಮೊದಲ 4 ದಿನಗಳ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆ. ಮೊದಲ ಇನ್ನಿಂಗ್ನಲ್ಲಿ ಕೇವಲ 107 ರನ್‌ಗೆ ಆಲೌಟ್ ಆಗಿದ್ದ ಭಾರತ 'ಎ', ಬಳಿಕ ಆಸ್ಟ್ರೇಲಿಯಾ 'ಎ' ತಂಡವನ್ನು 195 ರನ್‌ಗೆ ಕಟ್ಟಿಹಾಕಿತು. ಮುಕೇಶ್ ಕುಮಾರ್ 6, ಪ್ರಸಿದ್ಧ ಕೃಷ್ಣ 3 ವಿಕೆಟ್ ಕಬಳಿಸಿದರು.

ಐಪಿಎಲ್ ರೀಟೈನ್ ಬಳಿಕ ಅತಿಹೆಚ್ಚು ಸ್ಯಾಲರಿ ಹೈಕ್ ಪಡೆದ ಟಾಪ್ 7 ಆಟಗಾರರಿವರು! ಈ ಪಟ್ಟಿಯಲ್ಲಿದ್ದಾನೆ ಆರ್‌ಸಿಬಿ ಆಟಗಾರ

88 ರನ್‌ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಭಾರತ 'ಎ', 30 ರನ್‌ ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಸುದರ್ಶನ್ ಹಾಗೂ ಪಡಿಕ್ಕಲ್‌ ಹೋರಾಟದ ನೆರವಿನಿಂದ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾಯಿತು. ಸಾಯಿ ಸುದರ್ಶನ್ 200 ಎಸೆತಗಳನ್ನು ಎದುರಿಸಿ 103 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ದೇವದತ್  ಪಡಿಕ್ಕಲ್ 199 ಎಸೆತಗಳನ್ನು ಎದುರಿಸಿ 88 ರನ್ ಗಳಿಸಿ ಟೋಡ್ ಮರ್ಫಿಗೆ ವಿಕೆಟ್ ಒಪ್ಪಿಸಿದರು. ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 312 ರನ್ ಗಳಿಸಿ ಸರ್ವಪತನ ಕಂಡಿತು. ಈ ಮೂಲಕ ಆಸ್ಟ್ರೇಲಿಯಾ 'ಎ' ತಂಡಕ್ಕೆ 225 ರನ್‌ಗಳ ಸವಾಲಿನ ಗುರಿ ನೀಡಿದೆ.
 

Latest Videos
Follow Us:
Download App:
  • android
  • ios