ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಗೈರು?
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ನವೆಂಬರ್ 22ರಿಂದ ಆರಂಭಗೊಳ್ಳಲಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಒಂದು ಪಂದ್ಯಕ್ಕೆ ಭಾರತದ ನಾಯಕ ರೋಹಿತ್ ಶರ್ಮಾ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಈಗಾಗಲೇ ಈ ಬಗ್ಗೆ ಬಿಸಿಸಿಐ ಅಧಿಕಾರಿಗಳ ಜೊತೆ ರೋಹಿತ್ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಈ ಪಂದ್ಯದಿಂದ 37 ವರ್ಷದ ರೋಹಿತ್ ಶರ್ಮಾ ವೈಯುಕ್ತಿಕ ಕಾರಣದಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ. ಅದರೆ ಈ ಕುರಿತಂತೆ ಬಿಸಿಸಿಐ ಇದುವರೆಗೂ ಯಾವುದೇ ಅಧಿಕೃತ ಅಪ್‌ಡೇಟ್ಸ್ ನೀಡಿಲ್ಲ.
ಇಂದಿನಿಂದ ರಣಜಿ ಟ್ರೋಫಿ ಟೂರ್ನಿ ಆರಂಭ: ಕರ್ನಾಟಕದ ಎದುರು ಮಧ್ಯ ಪ್ರದೇಶಕ್ಕೆ ಆರಂಭಿಕ ಆಘಾತ
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತವರಿನಲ್ಲಿ ನಡೆದ ಬಾಂಗ್ಲಾದೇಶ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿ ಬೀಗಿತ್ತು. ಇದೀಗ ಟೀಂ ಇಂಡಿಯಾ, ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ.
ಭಾರತ ತಂಡವು ಕಳೆದೆರಡು ಬಾರಿ ಆಸ್ಟ್ರೇಲಿಯಾ ಪ್ರವಾಸ ಮಾಡಿದಾಗಲೂ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಜಯಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಹ್ಯಾಟ್ರಿಕ್ ಸಾಧಿಸಲು ಸಜ್ಜಾಗಿದೆ. ಪರ್ತ್ ಟೆಸ್ಟ್ ಬಳಿಕ ಡಿಸೆಂಬರ್ 06ರಿಂದ ಅಡಿಲೇಡ್ ಓವಲ್ ಮೈದಾನದಲ್ಲಿ ಪಿಂಕ್ ಬಾಲ್ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಡಿಸೆಂಬರ್ 14ರಿಂದ ಗಾಬಾದಲ್ಲಿ ಮೂರನೇ ಟೆಸ್ಟ್ ಪಂದ್ಯವು ನಡೆದರೆ, ಡಿಸೆಂಬರ್ 26ರಿಂದ ಐತಿಹಾಸಿಕ ಮೆಲ್ಬೊರ್ನ್ ಸ್ಟೇಡಿಯಂನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ನಡೆಯಲಿದೆ. ಇನ್ನು ಜನವರಿ 03ರಿಂದ ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವು ನಡೆಯಲಿದೆ.
ಮತ್ತೊಬ್ಬ ಪಾಕ್ ಕ್ರಿಕೆಟಿಗನ ಪ್ರೀತಿ ಬಲೆಗೆ ಬಿದ್ದ ಭಾರತದ ಪೂಜಾ ಬೊಮನ್; ಲವ್ ಪ್ರಪೋಸ್ ಪೋಸ್ಟ್ ವೈರಲ್!
ಆಸ್ಟ್ರೇಲಿಯಾ ನೆಲದಲ್ಲಿ ರೋಹಿತ್ ಶರ್ಮಾ ಇದುವರೆಗೂ 7 ಟೆಸ್ಟ್ ಪಂದ್ಯಗಳನ್ನಾಡಿದ್ದು, 3 ಅರ್ಧಶತಕ ಸಹಿತ 31.38ರ ಬ್ಯಾಟಿಂಗ್ ಸರಾಸರಿಯಲ್ಲಿ 408 ರನ್ ಬಾರಿಸಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಆಸೀಸ್ ಎದುರಿನ ಮೊದಲ ಟೆಸ್ಟ್‌ಗೆ ಗೈರಾದರೆ ಕೆ ಎಲ್ ರಾಹುಲ್ ಅಥವಾ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸುವ ಸಾಧ್ಯತೆಯಿದೆ.