'ಹಂಗೆಲ್ಲಾ ಮಾಡೋಕೆ ನಾನೇನು ಹುಚ್ಚನಾ..?' ಏಷ್ಯಾಕಪ್ ಫೈನಲ್‌ಗೂ ಮುನ್ನ ಗಿಲ್‌ಗೆ ಮೇಲೆ ಕಿಡಿಕಾರಿದ ರೋಹಿತ್ ಶರ್ಮಾ..!

ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ
ಪ್ರಶಸ್ತಿಗಾಗಿ ಕೊಲಂಬೊದಲ್ಲಿಂದು ಭಾರತ-ಶ್ರೀಲಂಕಾ ಫೈಟ್
ಫೈನಲ್‌ಗೂ ಮುನ್ನ ಗಿಲ್ ಮೇಲೆ ಕಿಡಿಕಾರಿದ ರೋಹಿತ್ ಶರ್ಮಾ

Team India Captain Rohit Sharma Shouts At Shubman Gill Ahead Of Asia Cup Final kvn

ಕೊಲಂಬೊ(ಸೆ.17): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇದೀಗ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಸಜ್ಜಾಗಿದೆ. ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್, ನೇಪಾಳ ಹಾಗೂ ಪಾಕಿಸ್ತಾನ ಎದುರು ಭರ್ಜರಿ ಶತಕದ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಷ್ಟೇ ಅಲ್ಲದೇ ರೋಹಿತ್ ಶರ್ಮಾ, ಟೂರ್ನಿಗೆ ಸಹ ಆತಿಥ್ಯ ವಹಿಸಿರುವ ಶ್ರೀಲಂಕಾ ಎದುರು ಜವಾಬ್ದಾರಿಯುತ 53 ರನ್ ಸಿಡಿಸಿದರೆ, ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಶುಭ್‌ಮನ್ ಗಿಲ್ ಆಕರ್ಷಕ ಶತಕ ಸಿಡಿಸಿ ಲಯಕ್ಕೆ ಮರಳಿದ್ದರು.

ಇದೀಗ ಕೊಲಂಬೊದ ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿಂದು ಭಾರತ ಹಾಗೂ ಶ್ರೀಲಂಕಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಭಾರತ ಹಾಗೂ ಶ್ರೀಲಂಕಾ ಏಷ್ಯಾಕಪ್‌ನ ಫೈನಲ್‌ನಲ್ಲಿ ಎದುರಾಗುತ್ತಿರುವುದು ಇದು 8ನೇ ಬಾರಿ. ಈ ವರೆಗಿನ 7 ಫೈನಲ್‌ ಮುಖಾಮುಖಿಗಳ ಪೈಕಿ 1988, 1990-91, 1995, 2010ರಲ್ಲಿ ಭಾರತ ಚಾಂಪಿಯನ್‌ ಆಗಿದೆ. 1994, 2004 ಹಾಗೂ 2008ರಲ್ಲಿ ಭಾರತವನ್ನು ಸೋಲಿಸಿ ಲಂಕಾ ಪ್ರಶಸ್ತಿ ಗೆದ್ದಿದೆ. ಏಷ್ಯಾಕಪ್ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಆರಂಭಿಕ ಜತೆಗಾರ ಶುಭ್‌ಮನ್ ಗಿಲ್ ವಿರುದ್ದ ನಾಯಕ ರೋಹಿತ್ ಶರ್ಮಾ, ಕಿಡಿಕಾರಿದ್ದು, ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಹಲವು ಕ್ರಿಕೆಟ್ ಸ್ಟಾರ್ಸ್‌ ಆಡೋದು ಅನುಮಾನ!

ಹೌದು, ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಫೈನಲ್ ಪಂದ್ಯದ ಕಾದಾಟಕ್ಕೂ ಮುನ್ನ ದಿನ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಮೇಲೆ ತಾಳ್ಮೆ ಕಳೆದುಕೊಂಡು ಕೂಗಾಡಿದ ಘಟನೆ ಬೆಳಕಿಗೆ ಬಂದಿದೆ. ಟೀಂ ಹೋಟೆಲ್‌ನ  ಎಲಿವೇಟರ್‌ ಬಳಿ, ಶುಭ್‌ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಬಳಿ ಬಂದು ಏನೋ ಹೇಳಿದ್ದಾರೆ. ಆಗ ರೋಹಿತ್ ಶರ್ಮಾ, 'ಅದೆಲ್ಲಾ ಆಗಲ್ಲಾ, ಹಂಗೆಲ್ಲಾ ಮಾಡೋಕೆ ನಾನೇನು ಹುಚ್ಚನಾ' ಎಂದು ಹಿಟ್‌ಮ್ಯಾನ್ ಆಕ್ರೋಶ ಹೊರಹಾಕಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

Asia Cup 2023: ಏಷ್ಯಾ ಕಿರೀಟಕ್ಕೆ ಭಾರತ vs ಲಂಕಾ ಫೈಟ್..!

ನಾಳೆ ಮೀಸಲು ದಿನ

ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಮೀಸಲು ದಿನವಾಗಿ ನಿಗದಿಪಡಿಸಲಾಗಿದೆ. ಭಾನುವಾರ ಮಳೆಯಿಂದಾಗಿ ಪಂದ್ಯ ಮುಗಿಯದಿದ್ದರೆ, ಅಂದರೆ ಮೊದಲ ಇನ್ನಿಂಗ್ಸ್‌ ಮುಗಿದು 2ನೇ ಇನ್ನಿಂಗ್ಸಲ್ಲಿ ಕನಿಷ್ಠ 20 ಓವರ್‌ ಆಟವೂ ಸಾಧ್ಯವಾಗದೆ ಇದ್ದರೆ ಆಗ ಸೋಮವಾರ ಪಂದ್ಯ ಮುಂದುವರಿಯಲಿದೆ.

ಸಂಭವನೀಯ ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ವಿರಾಟ್‌ ಕೊಹ್ಲಿ, ಕೆ ಎಲ್ ರಾಹುಲ್‌, ಇಶಾನ್‌ ಕಿಶನ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್/ವಾಷಿಂಗ್ಟನ್‌ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಯಾದವ್.

ಶ್ರೀಲಂಕಾ: ಪೆರೇರಾ, ನಿಸ್ಸಾಂಕ, ಮೆಂಡಿಸ್‌, ಸಮರವಿಕ್ರಮ, ಅಸಲಂಕ, ಧನಂಜಯ, ಶಾನಕ(ನಾಯಕ), ವೆಲ್ಲಲಗೆ, ಹೇಮಂತ, ರಜಿತ, ಪತಿರನ.

ಪಂದ್ಯ: ಮಧ್ಯಾಹ್ನ 3ಕ್ಕೆ, 
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್‌
 

Latest Videos
Follow Us:
Download App:
  • android
  • ios