* ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ* 150 ಮಿಲಿಯನ್‌ ಫಾಲೋವರ್ಸ್‌ ಹೊಂದಿದ ಆರ್‌ಸಿಬಿ ನಾಯಕ ಕೊಹ್ಲಿ* ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ ವ್ಯಕ್ತಿ ಫುಟ್ಬಾಲಿಗ ಕ್ರಿಸ್ಟಿಯಾನೋ ರೋನಾಲ್ಡೋ

ನವದೆಹಲಿ(ಸೆ.04): ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸಾಮಾಜಿಕ ತಾಣ ಇನ್‌ಸ್ಟಾಗ್ರಾಂನಲ್ಲಿ 15 ಕೋಟಿ ಹಿಂಬಾಲಕರನ್ನು ಹೊಂದಿರುವ ಭಾರತದ ಹಾಗೂ ಏಷ್ಯಾದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಜಾಗತಿಕ ಕ್ರೀಡಾ ತಾರೆಗಳ ಪೈಕಿ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ. 

ಈ ಮೊದಲು 7.5 ಕೋಟಿ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ ಏಷ್ಯಾದ ಮೊದಲಿಗ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದರು. ಇನ್‌ಸ್ಟಾಗ್ರಾಂ ಮಾತ್ರವಲ್ಲದೇ ವಿರಾಟ್ ಕೊಹ್ಲಿಗೆ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ ಹಾಗೂ ಫೇಸ್‌ಬುಕ್‌ಗಳಲ್ಲೂ ಕೋಟ್ಯಾಂತರ ಫಾಲೋವರ್ಸ್‌ಗಳಿದ್ದಾರೆ. ವಿರಾಟ್‌ಗೆ ಫೇಸ್‌ಬುಕ್‌ನಲ್ಲಿ 4.3 ಕೋಟಿ ಹಾಗೂ ಟ್ವಿಟರ್‌ನಲ್ಲಿ 4.8 ಕೋಟಿ ಫಾಲೋವರ್ಸ್‌ ಇದ್ದಾರೆ.

ಟೆಸ್ಟ್‌ ರ‍್ಯಾಂಕಿಂಗ್‌‌: ಜೋ ರೂಟ್‌ ನಂ.1, ಕೊಹ್ಲಿ ಹಿಂದಿಕ್ಕಿದ ರೋಹಿತ್‌!

Scroll to load tweet…

ಪೋರ್ಚುಗಲ್‌ನ ಫುಟ್ಬಾಲಿಗ ಕ್ರಿಸ್ಟಿಯಾನೋ ರೋನಾಲ್ಡೋ 33.7 ಕೋಟಿ ಹಿಂಬಾಲಕರೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಅರ್ಜೆಂಟೀನಾದ ಫುಟ್ಬಾಲಿಗ ಲಿಯೋನೆಲ್‌ ಮೆಸ್ಸಿ ಹಾಗೂ ಬ್ರೆಜಿಲ್‌ನ ಫುಟ್ಬಾಲಿಗ ನೇಯ್ಮಾರ್‌ ಕ್ರಮವಾಗಿ 26 ಕೋಟಿ ಹಾಗೂ 16 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ.