* ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ* ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಪ್ರದರ್ಶನ ತೋರಿವ ವಿಶ್ವಾಸದಲ್ಲಿ ಕೊಹ್ಲಿ* ಟಾಪ್ 10ನೊಳಗೆ ಪಂತ್-ರೋಹಿತ್ ಶರ್ಮಾಗೂ ಸ್ಥಾನ
ದುಬೈ(ಜೂ.17): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಕೊಹ್ಲಿ ಸದ್ಯ 814 ರೇಟಿಂಗ್ ಅಂಕಗಳನ್ನು ಹೊಂದಿದ್ದು, ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ಅಂಕಗಳನ್ನು ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಜೂನ್ 18ರಿಂದ ಆರಂಭವಾಗವಾಗಲಿದ್ದು, ಪ್ರಶಸ್ತಿಗಾಗಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ. ರೋಹಿತ್ ಶರ್ಮಾ(747 ಅಂಕ) ಹಾಗೂ ರಿಷಭ್ ಪಂತ್ (747 ಅಂಕ) ಜಂಟಿ 6ನೇ ಸ್ಥಾನದಲ್ಲಿದ್ದು, ನಾಯಕ ಕೊಹ್ಲಿಯೊಂದಿಗೆ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತ, ಕಿವೀಸ್ ಸಿದ್ದತೆ ಹೇಗಿದೆ?
The latest @MRFWorldwide ICC Test Player Rankings are here!https://t.co/oCmEz90kev
— ICC (@ICC) June 16, 2021
ಆಸ್ಪ್ರೇಲಿಯಾದ ಸ್ಟೀವ್ ಸ್ಮಿತ್ (891 ಅಂಕ) ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್(886)ರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಆರ್.ಅಶ್ವಿನ್ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಲ್ರೌಂಡರ್‌ಗಳ ಪಟ್ಟಿಯಲ್ಲಿ ಜಡೇಜಾ ಹಾಗೂ ಅಶ್ವಿನ್ ಕ್ರಮವಾಗಿ 2 ಹಾಗೂ 4ನೇ ಸ್ಥಾನ ಕಾಯ್ದುಕೊಂಡಿದ್ದಾರೆ.
