Asianet Suvarna News Asianet Suvarna News

ಹಾರ್ದಿಕ್-ನತಾಶಾ ಎಂಗೇಜ್‌ಮೆಂಟ್: ಅಚ್ಚರಿ ವ್ಯಕ್ತಪಡಿಸಿದ ಕೊಹ್ಲಿ

ಟೀಂ ಇಂಡಿಯಾ ಪ್ಲೇ ಬಾಯ್ ಹಾರ್ದಿಕ್ ಪಾಂಡ್ಯ ಕೊನೆಗೂ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರ ತಿಳಿದು, ನಾಯಕ ವಿರಾಟ್ ಕೊಹ್ಲಿ ಅಚ್ಚರಿ ವ್ಯಕ್ತಪಡಿಸುತ್ತಲೇ ಶುಭ ಕೋರಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ.

Team India Captain Virat Kohli gives amazing reaction on Hardik Natasa engagement
Author
New Delhi, First Published Jan 2, 2020, 12:08 PM IST
  • Facebook
  • Twitter
  • Whatsapp

"

ನವದೆಹಲಿ[ಜ.02]: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಗೆಳತಿ ನತಾಶಾ ಸ್ಟ್ಯಾಂಕೋವಿಚ್ ಅವರೊಂದಿಗೆ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈವಾಹಿಕ ದಾಂಪತ್ಯಕ್ಕೆ ಕಾಲಿಡಲು ರೆಡಿಯಾದ ಜೋಡಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶುಭ ಹಾರೈಸಿದ್ದಾರೆ.

ಸದ್ದಿಲ್ಲದೆ ಮುಗಿಯಿತು ಹಾರ್ದಿಕ್ ಪಾಂಡ್ಯ ಎಂಗೇಜ್‌ಮೆಂಟ್!

ಹಾರ್ದಿಕ್ ಪಾಂಡ್ಯ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ಪೋಸ್ಟ್‌ಗೆ ನಾಯಕ ಕೊಹ್ಲಿ, ಹಾರ್ದಿಕ್‌ಗೆ ಅಭಿನಂದನೆಗಳು. ಇದೊಂದು ಅದ್ಭುತ ಸರ್ಫ್ರೈಸ್. ದೇವರು ಒಳ್ಳೆಯದ್ದು ಮಾಡಲಿ ಎಂದು ಕಮೆಂಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಹಾರ್ದಿಕ್ ಪಾಂಡ್ಯ 2020ರ ಮೊದಲ ದಿನವೇ ನತಾಶಾ ಸ್ಟ್ಯಾಂಕೋವಿಚ್ ಅವರೊಂದಿಗೆ ಎಂಗೇಜ್‌ಮೆಂಟ್ ಮಾಡಿಕೊಂಡು ಎಲ್ಲರೂ ತಬ್ಬಿಬ್ಬುಗೊಳ್ಳುವಂತೆ ಮಾಡಿದ್ದರು. ದುಬೈನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದು ಸೆಲಿಬ್ರಿಟಿಗಳು, ಅವರ ಅಭಿಮಾನಿಗಳು ಶುಭ ಕೋರಿದ್ದಾರೆ.

ವಂಚನೆ ಪ್ರಕರಣ; ಭಾರತದ ಕ್ರಿಕೆಟಿಗ ಅಮಾನತು

ಬೆನ್ನು ನೋವಿನ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿರುವ ಹಾರ್ದಿಕ್ ಪಾಂಡ್ಯ, ಈ ತಿಂಗಳಾಂತ್ಯಕ್ಕೆ ನ್ಯೂಜಿಲೆಂಡ್ ಪ್ರವಾಸದ ವೇಳೆಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. ಕಳೆದ ವರ್ಷದ ಸೆಪ್ಟೆಂಬರ್’ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭಾರತ ಪರ ಕಡೆಯದಾಗಿ ಕಾಣಿಸಿಕೊಂಡಿದ್ದರು. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ವೇಳೆಗೆ ಸಂಪೂರ್ಣ ಫಿಟ್ ಆಗಲಿದ್ದಾರೆ ಎನ್ನುವುದು ಟೀಂ ಇಂಡಿಯಾ ಆಯ್ಕೆ ಸಮಿತಿಯ ಲೆಕ್ಕಾಚಾರವಾಗಿದೆ.

Team India Captain Virat Kohli gives amazing reaction on Hardik Natasa engagement

ಪಾಂಡ್ಯ ಗರ್ಲ್ ಫ್ರೆಂಡ್ ನತಾಶಾ ಸ್ಟ್ಯಾಂಕೋವಿಚ್ ಬಾಲಿವುಡ್‌ನ ಇಮ್ರಾನ್ ಹಶ್ಮಿ ನಟನೆಯ ’ದ ಬಾಡಿ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇನ್ನು 8ನೇ ಆವೃತ್ತಿಯ ಹಿಂದಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು. 

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios