ಟೀಂ ಇಂಡಿಯಾ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ, ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬೌಲಿಂಗ್ ಶೈಲಿಯನ್ನು ಅನುಕರಣೆ ಮಾಡಿದ್ದಾರೆ. ಈ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿರಾಟ್ ಬೌಲಿಂಗ್ ಹೇಗಿತ್ತು ಅನ್ನೋದನ್ನು ನೀವೊಮ್ಮೆ ನೋಡಿಬಿಡಿ...

ಇಂದೋರ್[ಜ.07]: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಅನುಭವಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬೌಲಿಂಗ್ ಅನುಕರಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಹೌದು, ಭಾರತ-ಶ್ರೀಲಂಕಾ ನಡುವಿನ ಎರಡನೇ ಟಿ20 ಪಂದ್ಯ ಆರಂಭಕ್ಕೂ ಮುನ್ನ ವಾರ್ಮ್ ಅಪ್ ಮಾಡುವ ವೇಳೆ ಭಜ್ಜಿ ಎದುರೇ ಕೊಹ್ಲಿ ಬೌಲಿಂಗ್ ಶೈಲಿ ಅನುಕರಿಸುವ ಎಲ್ಲರೂ ನಗೆಗಡಲಲ್ಲಿ ತೇಲುವಂತೆ ಮಾಡಿದ್ದಾರೆ. ಆ ಬಳಿಕ ಕೊಹ್ಲಿ-ಹರ್ಭಜನ್ ಸಿಂಗ್ ಅಪ್ಪಿಕೊಂಡು ಸಂತೋಷ ವ್ಯಕ್ತಪಡಿಸಿದರು. 

Scroll to load tweet…

ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಇದಾದ ಬಳಿಕ ಟಾಸ್ ಪ್ರಕ್ರಿಯೆಯಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನುಳಿದ ಎರಡು ಪಂದ್ಯಗಳನ್ನು ಜಯಿಸುವ ತಂಡ ಸರಣಿ ಕೈವಶ ಮಾಡಿಕೊಳ್ಳಲಿದೆ.

Scroll to load tweet…

ಇಂದೋರ್’ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಶ್ರೀಲಂಕಾ 11 ಓವರ್ ಮುಕ್ತಾಯಕ್ಕೆ 2 ವಿಕೆಟ್ ಕಳೆದುಕೊಂಡು 75 ರನ್ ಬಾರಿಸಿದೆ.