ಐಸಿಸಿ ನೂತನ ಟಿ20 ಶ್ರೇಯಾಂಕ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೆ.ಎಲ್. ರಾಹುಲ್ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

ದುಬೈ(ಏ.29): ಐಸಿಸಿ ನೂತನವಾಗಿ ಟಿ20 ರ‍್ಯಾಂಕಿಂಗ್‌ ಪಟ್ಟಿ ಪ್ರಕಟಿಸಿದ್ದು ಟೀಂ ಇಂಡಿಯಾ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ 5ನೇ ಸ್ಥಾನ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ 7ನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆದರೆ ಬೌಲಿಂಗ್‌ ಹಾಗೂ ಆಲ್‌ರೌಂಡರ್‌ಗಳ ವಿಭಾಗದಲ್ಲಿ ಭಾರತದ ಯಾವೊಬ್ಬ ಆಟಗಾರರು ಸ್ಥಾನ ಪಡೆದಿಲ್ಲ.

ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಆ್ಯರೋನ್ ಫಿಂಚ್ ಎರಡನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪಾಕಿಸ್ತಾನ ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್‌ ಬರೋಬ್ಬರಿ 5 ಸ್ಥಾನ ಮೇಲೇರಿ 10ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

Scroll to load tweet…

ಬ್ಯಾಟ್ಸ್‌ಮನ್‌ಗಳ ಟಾಪ್ 10 ಪಟ್ಟಿಯಲ್ಲಿ ಮಲಾನ್‌, ಫಿಂಚ್‌, ಅಜಂ, ಡೇವಿಡ್ ಕಾನ್ವೆ ಹಾಗೂ ಕೊಹ್ಲಿ ಕ್ರಮವಾಗಿ ಟಾಪ್ 5 ಪಟ್ಟಿಯೊಳಗಿದ್ದಾರೆ. ಇನ್ನುಳಿದಂತೆ ಡುಸೇನ್‌, ರಾಹುಲ್, ಮ್ಯಾಕ್ಸ್‌ವೆಲ್, ಗಪ್ಟಿಲ್ ಹಾಗೂ ರಿಜ್ವಾನ್ ಟಾಪ್ 10 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.

ಕೋವಿಡ್‌ ಭೀತಿ: ಐಸಿಸಿ ಟಿ20 ವಿಶ್ವಕಪ್‌ ಯುಇಎಗೆ ಶಿಫ್ಟ್‌?

ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ 5ನೇ ಸ್ಥಾನದಲ್ಲಿದ್ದರೆ, ರೋಹಿತ್‌ ಶರ್ಮಾ 7ನೇ ಸ್ಥಾನದಲ್ಲಿದ್ದಾರೆ. ಏಕದಿನ ರಾರ‍ಯಂಕಿಂಗ್‌ನಲ್ಲಿ ಕೊಹ್ಲಿ 2ನೇ ಸ್ಥಾನಕ್ಕೆ ಜಾರಿದ್ದು, ಪಾಕ್‌ನ ಬಾಬರ್‌ ಅಜಾಮ್‌ ಅಗ್ರಸ್ಥಾನದಲ್ಲಿದ್ದಾರೆ.