ನವದೆಹಲಿ(ಜು.07): ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು(ಜು.07) 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದ ಮೂಲಕ ಮಹಿಗೆ ಹೃದಯಸ್ಪರ್ಷಿಯಾದ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್ ಮೂಲಕ ಧೋನಿಗೆ ಉತ್ತಮ ಆರೋಗ್ಯ ಹಾಗೂ ಸದಾಕಾಲ ಸಂತೋಷದಿಂದಿರಿ ಎಂದು ಕಿಂಗ್ ಕೊಹ್ಲಿ ಶುಭ ಕೊರಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಮಹಿ ಭಾಯಿ. ಸದಾಕಾಲ ಉತ್ತಮ ಆರೋಗ್ಯ ಹಾಗೂ ಸಂತೋಷದಿಂದಿರಿ. ದೇವರು ಒಳ್ಳೆಯದು ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

 
 
 
 
 
 
 
 
 
 
 
 
 

Happy b'day Mahi bhai. Wish you good health and happiness always. God bless you 🙏😃

A post shared by Virat Kohli (@virat.kohli) on Jul 6, 2020 at 9:30pm PDT

ವಿರಾಟ್ ಕೊಹ್ಲಿಗೂ ಮುನ್ನ ಹಲವು ಮಂದಿಗೆ CSK ನಾಯಕನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ರೋಹಿತ್ ಶರ್ಮಾ, ವಿರೇಂದ್ರ ಸೆಹ್ವಾಗ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಹಲವು ಕ್ರಿಕೆಟಿಗರು ಮಹಿ ಹುಟ್ಟುಹಬ್ಬಕ್ಕೆ ವಿನೂತನವಾಗಿ ಶುಭ ಕೋರಿದ್ದಾರೆ.

#Happy Birthday MSD - ಕ್ಯಾಪ್ಟನ್‌ ಕೂಲ್‌ ಬಗ್ಗೆ ಗೊತ್ತಿರದ ಸಂಗತಿಗಳಿವು

ಮೂರು ಐಸಿಸಿ ಟ್ರೋಫಿ ಗೆದ್ದುಕೊಟ್ಟ ಏಕೈಕ ನಾಯಕ ಎನಿಸಿಕೊಂಡಿರುವ ಧೋನಿ, ವಿಕೆಟ್‌ ಕೀಪಿಂಗ್‌ನಲ್ಲೂ ತಮಗ್ಯಾರು ಸಾಟಿಯಿಲ್ಲ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸುವ ಸಾಮರ್ಥ್ಯ ಧೋನಿಗಿದೆ. 2019ರ ಐಸಿಸಿ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಧೋನಿ ಕ್ರಿಕೆಟ್ ಭವಿಷ್ಯ ಸದ್ಯಕ್ಕಂತೂ ಚಿದಂಬರ ರಹಸ್ಯವಾಗಿಯೇ ಉಳಿದಿದೆ.