Asianet Suvarna News Asianet Suvarna News

ಟಿ20 ವಿಶ್ವಕಪ್‌ನಲ್ಲಿ ನಾನು ಫಿನಿಶರ್ ಆಗಬೇಕೆಂದ ದಿನೇಶ್ ಕಾರ್ತಿಕ್‌

* ಟಿ20 ವಿಶ್ವಕಪ್ ಟೂರ್ನಿಗೆ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ ದಿನೇಶ್ ಕಾರ್ತಿಕ್

* 2019ರ ಏಕದಿನ ವಿಶ್ವಕಪ್ ಸೆಮಿಫೈನಲ್‌ ಬಳಿಕ ತಂಡದಿಂದ ಹೊರಬಿದ್ದಿರುವ ಕಾರ್ತಿಕ್

* ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಲ್ಲಿ ಡಿಕೆ

Team India Cricketer Dinesh Karthik aim to play for the country in T20 World Cup as a finisher kvn
Author
New Delhi, First Published Jun 5, 2021, 3:34 PM IST

ನವದೆಹಲಿ(ಜೂ.05): ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಮುನ್ನವೇ ದಿನೇಶ್ ಕಾರ್ತಿಕ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಆದರೆ ಕಳಪೆ ಫಾರ್ಮ್‌ ಹಾಗೂ ಧೋನಿಯ ಗಮನಾರ್ಹ ಪ್ರದರ್ಶನದಿಂದಾಗಿ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುವವರೆಗೂ ದಿನೇಶ್ ಕಾರ್ತಿಕ್ ಬೆಂಚ್ ಕಾಯಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. 

ಇನ್ನು 2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಿನೇಶ್‌ ಕಾರ್ತಿಕ್ ಸ್ಥಾನ ಪಡೆದಿದ್ದರಾದರೂ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದರು. ಮಹತ್ವದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್‌ ವೈಫಲ್ಯ ಅನುಭವಿಸಿದ್ದರಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಮುಂಬರುವ 2021 ಹಾಗೂ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾಗೆ ಕಮ್‌ಬ್ಯಾಕ್‌ ಮಾಡುವ ಕನಸು ಕಾಣುತ್ತಿದ್ದಾರೆ. ಇದಷ್ಟೇ ಅಲ್ಲದೇ ತಾವು ಟೀಂ ಇಂಡಿಯಾದ ಫಿನಿಶರ್ ಆಗಿ ಗುರುತಿಸಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ 3 ದಿನ ಭಾರತ ಕ್ರಿಕೆಟಿಗರ ಪರಸ್ಪರ ಭೇಟಿಗೆ ನಿಷೇಧ

ದಿನೇಶ್ ಕಾರ್ತಿಕ್ 2018ರಲ್ಲಿ ಲಂಕಾದಲ್ಲಿ ನಡೆದ ನಿದಾಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ ಕೇವಲ 8 ಎಸೆತಗಳಲ್ಲಿ ಅಜೇಯ 29 ರನ್‌ ಚಚ್ಚುವ ಮೂಲಕ ಭಾರತ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇದಾದ ಐಪಿಎಲ್ ಹಾಗೂ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಕಾರ್ತಿಕ್ ಮ್ಯಾಚ್ ಫಿನಿಶರ್ ಆಗಿ ಹೊರಹೊಮ್ಮಿದ್ದಾರೆ.

ನಮಗೆಷ್ಟು ವಯಸ್ಸಾಗಿದೆ ಎನ್ನುವುದು ಮುಖ್ಯವಲ್ಲ, ಬದಲಾಗಿ ಎಷ್ಟು ಫಿಟ್ ಇದ್ದೇವೆ ಎನ್ನುವುದು ಸಾಕಷ್ಟು ಮಹತ್ವವಾಗುತ್ತದೆ. ನಾವು ಫಿಟ್ ಆಗಿದ್ದರೆ ಇನ್ನೂ ಟೀಂ ಇಂಡಿಯಾವನ್ನು ಪ್ರತಿನಿಧಿಸಬಹುದು. ನನ್ನ ಮುಂದಿನ ಗುರಿ ಏನಿದ್ದರೂ ಟಿ20 ವಿಶ್ವಕಪ್ ಟೂರ್ನಿ ಆಡುವುದಾಗಿದೆ. ಮುಂದಿನ ಎರಡು ವರ್ಷ ಸತತ ಎರಡು ಟಿ20 ವಿಶ್ವಕಪ್ ಟೂರ್ನಿಗಳು ಜರುಗಲಿವೆ. ಫಿಟ್ ಆಗಿ ಎಲ್ಲವೂ ಅಂದುಕೊಂಡಂತೆ ಸಾಗಿದರೆ ನಾನು ಭಾರತದಲ್ಲಿ ಮತ್ತೆ ಫಿನಿಶರ್ ಪಾತ್ರದಲ್ಲಿ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದು ಕ್ರಿಕೆಟ್ ನೆಕ್ಸ್ಟ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios