* 41ನೇ ವಸಂತಕ್ಕೆ ಕಾಲಿಟ್ಟ ಹರ್ಭಜನ್ ಸಿಂಗ್* ಭಾರತ ಪರ 711 ವಿಕೆಟ್ ಕಬಳಿಸಿರುವ ಅನುಭವಿ ಸ್ಪಿನ್ನರ್* ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ಪರ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮೊದಲ ಬೌಲರ್

ನವದೆಹಲಿ(ಜು.03): ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಹರ್ಭಜನ್‌ ಸಿಂಗ್ ಇಂದು ತಮ್ಮ 41 ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಟಿ20 ಹಾಗೂ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಭಜ್ಜಿ ಹುಟ್ಟು ಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರಲಾರಂಭಿಸಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ಪರ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಮೊದಲ ಬೌಲರ್, ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ಸ್ಪಿನ್ನರ್ ಹರ್ಭಜನ್ ಸಿಂಗ್‌ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬಿಸಿಸಿಐ ಟ್ವೀಟ್‌ ಮೂಲಕ ಶುಭ ಕೋರಿದೆ. ಇನ್ನು ಮೂರು ಮಾದರಿಯ ಕ್ರಿಕೆಟ್‌ ಸೇರಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಎರಡನೇ ಬೌಲರ್, ಟಿ20 ಹಾಗೂ ಏಕದಿನ ವಿಶ್ವಕಪ್ ವಿಜೇತ ಭಜ್ಜಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಐಸಿಸಿ ಟ್ವೀಟ್‌ ಮೂಲಕ ಜನ್ಮ ದಿನದ ಶುಭ ಕೋರಿದೆ.

Scroll to load tweet…
Scroll to load tweet…

ಕೊಹ್ಲಿ ಪ್ರತಿ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗೆ 5 ಕೋಟಿ ರುಪಾಯಿ ಗಳಿಕೆ..!

ಇದಷ್ಟೇ ಅಲ್ಲದೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ವಿವಿಎಸ್‌ ಲಕ್ಷ್ಮಣ್‌, ವಿರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಹಿರಿ-ಕಿರಿಯ ಕ್ರಿಕೆಟಿಗರು ಹರ್ಭಜನ್ ಸಿಂಗ್ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣವಾದ ಟ್ವೀಟ್‌ ಮೂಲಕ ಶುಭ ಕೋರಿದೆ.

Scroll to load tweet…
Scroll to load tweet…
Scroll to load tweet…

ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಭಾರತ ಪರ 103 ಟೆಸ್ಟ್ ಪಂದ್ಯಗಳನ್ನಾಡಿ 417 ವಿಕೆಟ್ ಕಬಳಿಸಿದ್ದಾರೆ. ಇನ್ನು 236 ಏಕದಿನ ಪಂದ್ಯಗಳಿಂದ 269 ವಿಕೆಟ್ ಪಡೆದಿದ್ದಾರೆ. ಟಿ20 ಕ್ರಿಕೆಟ್‌ಗಳಲ್ಲಿ ಭಾರತ ಪರ 28 ಪಂದ್ಯಗಳನ್ನಾಡಿ 25 ವಿಕೆಟ್ ಪಡೆದಿದ್ದಾರೆ. ಒಟ್ಟಾರೆ 367 ಪಂದ್ಯಗಳನ್ನಾಡಿ ಹರ್ಭಜನ್ ಸಿಂಗ್ 711 ವಿಕೆಟ್ ಕಬಳಿಸಿದ್ದಾರೆ. ಇನ್ನು ಬ್ಯಾಟಿಂಗ್‌ನಲ್ಲಿ 3,569 ರನ್‌ ಬಾರಿಸಿದ್ದಾರೆ.

ಹರ್ಭಜನ್ ಸಿಂಗ್ 2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಗೆಲುವಿನಲ್ಲಿ ಅನುಭವಿ ಆಫ್‌ಸ್ಪಿನ್ನರ್ ಮಹತ್ವದ ಪಾತ್ರವನ್ನು ನಿಭಾಯಿಸಿದ್ದರು.