ನವದೆಹಲಿ[ನ.07]: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ, ನ.22ರಿಂದ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ-ಬಾಂಗ್ಲಾದೇಶ ನಡುವಿನ ಹಗಲು-ರಾತ್ರಿ ಟೆಸ್ಟ್ ನಲ್ಲಿ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಈ ಐತಿಹಾಸಿಕ ಪಂದ್ಯದಲ್ಲಿ ಧೋನಿ ಕಾಮೆಂಟ್ರಿ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ಭಾರತ vs ಬಾಂಗ್ಲಾದೇಶ ಡೇ & ಟೆಸ್ಟ್ ಪಂದ್ಯಕ್ಕೆ ಮೋದಿ, ಸಚಿನ್?

ಆದರೆ ಧೋನಿ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲು ಬಿಸಿಸಿಐನ ಸ್ವಹಿತಾಸಕ್ತಿ ನಿಯಮ ಅಡ್ಡಿಯಾಗಲಿದೆ. ಧೋನಿ, ಬಿಸಿಸಿಐ ಕೇಂದ್ರ ಗುತ್ತಿಗೆ ಹೊಂದಿದ್ದು ಸೀಮಿತ ಓವರ್ ಮಾದರಿಯಲ್ಲಿ ಇನ್ನೂ ಆಡುತ್ತಿದ್ದಾರೆ. ಹೀಗಾಗಿ ಅವರು ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಮುಗಿಯಿತಾ ದಿಗ್ಗಜ ಕ್ರಿಕೆಟಿಗನ ಕರಿಯರ್; ಕಮೆಂಟರಿಯತ್ತ ಮುಖ ಮಾಡಿದ ಧೋನಿ!

ಧೋನಿ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್’ನಿಂದ ದೂರವೇ ಉಳಿದಿದ್ದಾರೆ. ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಧೋನಿ ವಿಶ್ರಾಂತಿ ಬಯಸಿದ್ದರು. ಇನ್ನು ಬಾಂಗ್ಲಾದೇಶ ವಿರುದ್ಧದ ಸರಣಿಗೆ ಧೋನಿ ಆಯ್ಕೆಯಾಗಿರಲಿಲ್ಲ. ಹೀಗಾಗಿ ಧೋನಿ ಕ್ರಿಕೆಟ್ ಭವಿಷ್ಯ ಏನು ಎನ್ನುವುದರ ಬಗ್ಗೆ ಯಾರಿಗೂ ಸ್ಪಷ್ಟತೆ ಸಿಕ್ಕಿಲ್ಲ.