ಪಾಕಿಸ್ತಾನ ಯುದ್ಧ ವಿಮಾನಗಳನ್ನ ಹಿಮ್ಮೆಟ್ಟಿಸುವ ವೇಳೆ ಪಾಕಿಸ್ತಾನದಲ್ಲಿ ಸೆರೆ ಸಿಕ್ಕ ಭಾರತದ ವಿಂಗ್ ಕಮಾಂಡರ್ ಬಿಡುಗಡಗೆ ಭಾರತದಲ್ಲಿ ಪೂಜೆ ನಡೆಯುತ್ತಿದೆ. ಟೀಂ ಇಂಡಿಯಾ ಕ್ರಿಕೆಟಿಗರು ಕಮಾಂಡರರ್ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಪ್ರಾರ್ಥಿಸಿದ್ದಾರೆ.
ಬೆಂಗಳೂರು(ಮಾ.01): ಭಾರತ ಹಾಗೂ ಪಾಕಿಸ್ತಾನ ನಡುವೆ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಪುಲ್ವಾಮಾ ದಾಳಿ ಬಳಿಕ ಭಾರತ ಉಗ್ರರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದರೆ, ಇತ್ತ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸೋ ಪ್ರಯತ್ನ ಮಾಡುತ್ತಿದೆ. ಪಾಕಿಸ್ತಾನ ಯುದ್ದವಿಮಾನಗಳನ್ನ ಹಿಮ್ಮೆಟ್ಟಿಸುವ ವೇಳೆ ಪಾಕಿಸ್ತಾನದಲ್ಲಿ ಸೆರೆ ಸಿಕ್ಕ ಭಾರತೀಯ ವಿಂಗ್ ಕಮಾಂಡರ್ ಬಿಡುಗಡೆಗೆ ದೇಶದೆಲ್ಲೆಡೆ ಪೂಜೆ ನಡೆಯುತ್ತಿದೆ. ಟೀಂ ಇಂಡಿಯಾ ಕ್ರಿಕೆಟಿಗರು ಭಾರತೀಯ ಯೋಧ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಪಾರ್ಥಿಸಿದ್ದಾರೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಹೈದರಾಬಾದ್ ಪಂದ್ಯಕ್ಕೆ ಹೆಚ್ಚಿನ ಭದ್ರತೆ!
ಸರ್ಕಾರದ ನಿರಂತರ ಪ್ರಯತ್ನ ಹಾಗೂ ಭಾರತೀಯರ ಪ್ರಾರ್ಥನೆಯಿಂದ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಇಂದು(ಮಾ.01) ಸೆರೆ ಸಿಕ್ಕ ಭಾರತೀಯ ವಿಂಗ್ ಕಮಾಂಡರ್ ಬಿಡುಗಡೆ ಮಾಡುವುದಾಗಿ ಸ್ಪಷ್ಟಪಡಿಸಿದಾರೆ.
