ರಾಜ್‌ಕೋಟ್(ಆ.12)‌: ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಮಾಸ್ಕ್‌ ಧರಿಸದೇ ಕಾರಿನಲ್ಲಿ ಸಂಚರಿಸಿ, ಪ್ರಶ್ನಿಸಿದ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದಾರೆ. 

ಪತಿ ರವೀಂದ್ರ ಜಡೇಜಾ ಜೊತೆ ಸೋಮವಾರ ರಾತ್ರಿ ಕಾರಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ರವೀಂದ್ರ ಜಡೇಜಾ ಮಾಸ್ಕ್‌ ಧರಿಸಿದ್ದರು. ಆದರೆ, ರಿವಾಬಾ ಮಾಸ್ಕ್‌ ಧರಿಸಿರಲಿಲ್ಲ. 

ಕಿಶನ್‌ ಪಾರಾ ಚೌಕ್‌ನಲ್ಲಿ ಕಾರನ್ನು ತಡೆದ ಕಾನ್‌ಸ್ಟೇಬಲ್‌ ಸೋನಲ್‌ ಗೊಸಾಯಿ ಜೊತೆ ರಿವಾಬಾ ತೀವ್ರ ವಾಗ್ವಾದ ನಡೆಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿಕೊಂಡಿಲ್ಲ ಎಂದು ಡಿಸಿಪಿ ಮನೋಹರ್‌ ಸಿನ್ಹ ಜಡೇಜಾ ತಿಳಿಸಿದ್ದಾರೆ.

ಖ್ಯಾತ ಕ್ರಿಕೆಟ್ ಅಂಕಿ-ಅಂಶ ತಜ್ಞ ಎಚ್.ಆರ್. ಗೋಪಾಲಕೃಷ್ಣ 75ರ ಸಂಭ್ರಮ

ಸದ್ಯದಲ್ಲಿಯೇ ರವೀಂದ್ರ ಜಡೇಜಾ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಕೂಡಿಕೊಳ್ಳಲಿದ್ದಾರೆ. 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಚೆನ್ನೈ ಸೂಪರ್‌ ಕಿಂಗ್ಸ್ ತಂಡ ನಾಲ್ಕನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದಾರೆ.