ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್, ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ೨೫ ವರ್ಷದ ಪ್ರಿಯಾ ಸರೋಜಾ, ಮಚಲಿಶಹರ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ರಿಂಕು ಸಿಂಗ್, ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ.
ನವದೆಹಲಿ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಹಾಗೂ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ರಿಂಕು ಸಿಂಗ್, ಇದೀಗ ಹೊಸ ಇನ್ನಿಂಗ್ಸ್ ಆಡಲು ಸಜ್ಜಾಗಿದ್ದಾರೆ. ತೀರಾ ಕಡುಬಡನತದಿಂದ ಮೇಲೆ ಬಂದಿರುವ ರಿಂಕು ಸಿಂಗ್, ಇದೀಗ ಅತಿ ಕಿರಿಯ ಸಂಸದೆಯಾಗಿ ಗುರುತಿಸಿಕೊಂಡಿರುವ ಸಮಾಜವಾದಿ ಪಕ್ಷದ ಪ್ರಿಯಾ ಸರೋಜಾ ಅವರ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.
ಪ್ರಿಯಾ ಸರೋಜಾ ಸಮಾಜವಾದಿ ಪಕ್ಷದ ಲೋಕಸಭಾ ಸಂಸದೆಯಾಗಿದ್ದಾರೆ. ಇದೀಗ ರಿಂಕು ಸಿಂಗ್, ಉತ್ತರ ಪ್ರದೇಶದ ಮಚಲಿಶಹರ್ ಸಂಸದೆ ಪ್ರಿಯಾ ಸರೋಜಾ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರಿಂಕು ಸಿಂಗ್ ಕಳೆದ ಎರಡು ವರ್ಷಗಳಿಂದ ಭಾರತ ಟಿ20 ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ.
ಕೇವಲ 25 ವರ್ಷಕ್ಕೆ ಸಂಸದೆಯಾಗಿರುವ ಪ್ರಿಯಾ ಸರೋಜಾ:
ಸುಂದರವಾಗಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಯುವ ನಾಯಕಿ ಪ್ರಿಯಾ ಸರೋಜಾ ಕೇವಲ 25 ವರ್ಷಕ್ಕೆ ಲೋಕಸಭಾ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮಚಲಿ ಶಹರ್‌ನಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾ ಸರೋಜಾ ಸ್ಪರ್ಧಿಸಿದ್ದರು. ಪ್ರಿಯಾ ಸರೋಜಾ ಅವರ ತಂದೆ ತೂಫಾನಿ ಸರೋಜಾ ಅವರಿ 1999, 2003 ಹಾಗೂ 2009ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿದ್ದರು. ಅಖಿಲೇಶ್ ಯಾದವ್ ಹಾಗೂ ತೂಫಾನಿ ಸರೋಜಾ ಅವರ ತಂತ್ರಗಾರಿಕೆಯ ಸಹಾಯದಿಂದ ಪ್ರಿಯಾ ಸರೋಜಾ, ಬಿಜೆಪಿ ಸ್ಪರ್ಧಿಯನ್ನು ಸೋಲಿಸಿ ಲೋಕಸಭಾ ಸದಸ್ಯರಾಗಿ ನೇಮಕವಾಗಿದ್ದರು. ಪ್ರಿಯಾ ಸರೋಜಾ 23 ನವೆಂಬರ್ 1998ರಲ್ಲಿ ಜನಿಸಿರುವ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡ್ತಾರಾ ಜಸ್ಪ್ರೀತ್ ಬುಮ್ರಾ?
ಕೆಕೆಆರ್‌ನ ನಂಬಿಗಸ್ಥ ಕ್ರಿಕೆಟಿಗ ರಿಂಕು ಸಿಂಗ್:
ರಿಂಕು ಸಿಂಗ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಅಂತ್ಯಂತ ನಂಬಿಗಸ್ಥ ಕ್ರಿಕೆಟಿಗನಾಗಿ ಗುರುತಿಸಿಕೊಂಡಿದ್ದಾರೆ. 2023ರ ಐಪಿಎಲ್ ಟೂರ್ನಿಯಲ್ಲಿ ರಿಂಕು ಸಿಂಗ್ ಗುಜರಾತ್ ಟೈಟಾನ್ಸ್‌ನ ಯಶ್ ದಯಾಳ್‌ಗೆ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸುವ ಮೂಲಕ ಗಮನ ಸೆಳೆದಿದ್ದರು. ಇದರ ಬೆನ್ನಲ್ಲೇ ರಿಂಕು ಸಿಂಗ್ ದಿನ ಬೆಳಗಾಗುವಷ್ಟರಲ್ಲಿ ಕ್ರಿಕೆಟ್ ಅಭಿಮಾನಿಗಳ ಮನೆಮಾತಾಗಿದ್ದರು. ಇದೀಗ 2025ರ ಐಪಿಎಲ್ ಟೂರ್ನಿಗೂ ಮುನ್ನ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಯು ರಿಂಕು ಸಿಂಗ್ ಅವರನ್ನು 13 ಕೋಟಿ ರುಪಾಯಿ ನೀಡಿ ರೀಟೈನ್ ಮಾಡಿಕೊಂಡಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಿಂಕು ಸಿಂಗ್ ಕೆಕೆಆರ್ ತಂಡದ ಕ್ಯಾಪ್ಟನ್ ಆದರೂ ಅಚ್ಚರಿಯಿಲ್ಲ ಎನ್ನುವಂತಹ ಮಾತುಗಳು ಕೇಳಿ ಬರುತ್ತಿವೆ.
