ದುಬೈ(ಫೆ.09): ಭಾರತದ ಯುವ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಸೋಮವಾರ ಐಸಿಸಿ ‘ತಿಂಗಳ ಶ್ರೇಷ್ಠ ಕ್ರಿಕೆಟಿಗ’ ಪ್ರಶಸ್ತಿಗೆ ಭಾಜನರಾದರು. ಈ ಪ್ರಶಸ್ತಿ ಪಡೆದ ಮೊದಲ ಕ್ರಿಕೆಟಿಗ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. 

ಕಳೆದ ತಿಂಗಳು ಆಸ್ಪ್ರೇಲಿಯಾದಲ್ಲಿ 2 ಆಕರ್ಷಕ ಇನ್ನಿಂಗ್ಸ್‌ನಲ್ಲಿ ಪಂತ್‌ ಆಡಿದ್ದರು. ಸಿಡ್ನಿಯಲ್ಲಿ 97 ಹಾಗೂ ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಅಜೇಯ 89 ರನ್‌ ಗಳಿಸಿ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರೊಂದಿಗೆ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯನ್ನು ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು.

ಐಸಿಸಿ ತಿಂಗಳ ಶ್ರೇಷ್ಠ ಕ್ರಿಕೆಟಿಗ: ಪ್ರಶಸ್ತಿ ರೇಸ್‌ನಲ್ಲಿದ್ದಾರೆ ಮೂವರು ಕ್ರಿಕೆಟಿಗರು..!

ಮಹಿಳಾ ವಿಭಾಗದಲ್ಲಿ ದ.ಆಫ್ರಿಕಾದ ಶಬ್ನಿಂ ಇಸ್ಮಾಯಿಲ್‌ ತಿಂಗಳ ಶ್ರೇಷ್ಠ ಕ್ರಿಕೆಟರ್‌ ಪ್ರಶಸ್ತಿ ಜಯಿಸಿದ್ದಾರೆ. ಹಿರಿಯ ಪತ್ರಕರ್ತರು, ಮಾಜಿ ಆಟಗಾರರು, ಪ್ರಸಾರಕರು ಹಾಗೂ ಐಸಿಸಿ ಹಾಲ್‌ ಆಫ್‌ ಫೇಮ್‌ನ ಕೆಲ ಸದಸ್ಯರನ್ನೊಳಗೊಂಡ ಪ್ರಶಸ್ತಿ ಆಯ್ಕೆ ಸಮಿತಿ ಹಾಗೂ ಅಭಿಮಾನಿಗಳು ಆನ್‌ಲೈನ್‌ನಲ್ಲಿ ವೋಟಿಂಗ್‌ ನಡೆಸುವ ಮೂಲಕ ವಿಜೇತರನ್ನು ಆಯ್ಕೆ ಮಾಡಿದ್ದಾರೆ. ಪ್ರತಿ ತಿಂಗಳ 2ನೇ ಸೋಮವಾರ ವಿಜೇತರ ಹೆಸರನ್ನು ಐಸಿಸಿ ಘೋಷಿಸಲಿದೆ.