* ಐರ್ಲೆಂಡ್ ಎದುರು ಮೊದಲ ಟಿ20 ಪಂದ್ಯ ಗೆದ್ದು ಬೀಗಿದ ಟೀಂ ಇಂಡಿಯಾ*  ಮೊದಲ ಟಿ20 ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯದ ಸಂಜು ಸ್ಯಾಮ್ಸನ್* ಹೀಗಿದ್ದೂ ತನ್ನ ಸರಳತೆಯ ಮೂಲಕ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ವಿಕೆಟ್ ಕೀಪರ್ ಬ್ಯಾಟರ್

ಡಬ್ಲಿನ್(ಜೂ.28): ಭಾರತ ಹಾಗೂ ಐರ್ಲೆಂಡ್ (India vs Ireland) ತಂಡಗಳ ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಹಾರ್ದಿಕ್ ಪಾಂಡ್ಯ ನಾಯಕರಾದ ಮೊದಲ ಪಂದ್ಯದಲ್ಲೇ ಭಾರತಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಕೇರಳ ಮೂಲದ ವಿಕೆಟ್ ಕೀಪರ್‌ ಬ್ಯಾಟರ್ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಿದ್ದೂ ತನ್ನ ಸರಳ ನಡೆಯ ಮೂಲಕ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals) ತಂಡದ ನಾಯಕರಾಗಿರುವ ಸಂಜು ಸ್ಯಾಮ್ಸನ್ (Sanju Samson), ಐರ್ಲೆಂಡ್ ಎದುರಿನ ಎರಡು ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ತಂಡದಲ್ಲಿ ಈಗಾಗಲೇ ಇಶಾನ್ ಕಿಶನ್ (Ishan Kishan) ಹಾಗೂ ದಿನೇಶ್ ಕಾರ್ತಿಕ್ (Dinesh Karthik) ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಗುರುತಿಸಿಕೊಂಡಿರುವುದರಿಂದ, ಸಂಜು ಸ್ಯಾಮ್ಸನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಮೊದಲ ಟಿ20 ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಿದರೇ, ಇಶಾನ್ ಕಿಶನ್ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದಿದ್ದರು.

ಹೀಗಾಗಿ ಬೆಂಚ್ ಕಾಯಿಸುವಂತಾಗಿದ್ದ ಸಂಜು ಸ್ಯಾಮ್ಸನ್‌, ಮೊದಲ ಟಿ20 ಪಂದ್ಯದ ವೇಳೆ ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಗಳ ಜತೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಆಟೋಗ್ರಾಫ್ ನೀಡುವ ಮೂಲಕ ಅಭಿಮಾನಿಗಳಿಗೆ ಅವಿಸ್ಮರಣೀಯ ಗಿಫ್ಟ್ ನೀಡಿದರು. ಇದು ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

Scroll to load tweet…

ಇಶಾನ್ ಕಿಶನ್, ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟರ್‌ ಆಗಿ ಗಮನ ಸೆಳೆಯುತ್ತಿದ್ದಾರೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಮೊದಲ ಆಯ್ಕೆಯ ಆರಂಭಿಕರೆನಿಸಿಕೊಂಡಿದ್ದು, ಇಶಾನ್ ಕಿಶನ್‌ ಬ್ಯಾಕ್‌ಅಪ್ ಓಪನರ್ ಆಗಿ ಸ್ಥಾನ ಪಡೆಯುವ ಸಾಧ್ಯತೆಯಿದೆ. 

Ind vs IRE: ಸರಣಿ ಗೆಲುವಿನ ತವಕದಲ್ಲಿ ಟೀಂ ಇಂಡಿಯಾ

ಇನ್ನು ಸಂಜು ಸ್ಯಾಮ್ಸನ್‌, ಭಾರತ ಪರ ಕೊನೆಯ ಬಾರಿಗೆ ಶ್ರೀಲಂಕಾ ಎದುರು ಕಣಕ್ಕಿಳಿದಿದ್ದರು. ಈ ವರ್ಷಾರಂಭದಲ್ಲಿ ಫೆಬ್ರವರಿಯಲ್ಲಿ ಧರ್ಮಶಾಲಾದಲ್ಲಿ ನಡೆದ ಲಂಕಾ ಎದುರಿನ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಸಂಜು ಸ್ಯಾಮ್ಸನ್ ಭಾರತ ಕ್ರಿಕೆಟ್ ತಂಡದ ಪರ 13 ಟಿ20 ಪಂದ್ಯಗಳನ್ನಾಡಿ 121.67ರ ಸ್ಟ್ರೈಕ್‌ರೇಟ್‌ನಲ್ಲಿ 174 ರನ್ ಬಾರಿಸಿದ್ದಾರೆ.