* ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿದ ಶಿಖರ್ ಧವನ್‌* ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲೇ ಮುಂದುವರೆದ ಕೊಹ್ಲಿ-ರೋಹಿತ್* ಯುಜುವೇಂದ್ರ ಚಹಲ್ 20ನೇ ಸ್ಥಾನಕ್ಕೆ ಲಗ್ಗೆಯಿಟ್ದಿದ್ದಾರೆ.

ದುಬೈ(ಜು.22): ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ 86 ರನ್‌ ಗಳಿಸಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌, ಐಸಿಸಿ ಏಕದಿನ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ 2 ಸ್ಥಾನಗಳ ಏರಿಕೆ ಕಂಡು 16ನೇ ಸ್ಥಾನ ಪಡೆದಿದ್ದಾರೆ. 

ಐಸಿಸಿ ನೂತನವಾಗಿ ಬಿಡುಗಡೆ ಮಾಡಿದ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಪಾಕಿಸ್ತಾನ ನಾಯಕ ಬಾಬರ್ ಅಜಂ ನಂ.1 ಸ್ಥಾನದಲ್ಲೇ ಭದ್ರವಾಗಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. 

ಲಂಕಾ ಮಣಿಸಿದ ಟೀಂ ಇಂಡಿಯಾ: ಡ್ರೆಸ್ಸಿಂಗ್‌ ರೂಂನಲ್ಲಿ ದ್ರಾವಿಡ್‌ ಆಡಿದ ಮಾತುಗಳಿವು!

Scroll to load tweet…

ಬೌಲರ್‌ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ 6ನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಯುಜುವೇಂದ್ರ ಚಹಲ್‌ 4 ಸ್ಥಾನಗಳ ಏರಿಕೆ ಕಂಡು 20ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಟಾಪ್‌ 5 ಪಟ್ಟಿಯಲ್ಲಿ ಭಾರತದ ಯಾವೊಬ್ಬ ಬೌಲರ್‌ ಸಹಾ ಸ್ಥಾನ ಪಡೆದಿಲ್ಲ. ಟ್ರೆಂಟ್ ಬೌಲ್ಟ್‌ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೆ, ಆಫ್ಘಾನಿಸ್ತಾನ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್‌ ಒಂದು ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಸಹಾ ಒಂದು ಸ್ಥಾನ ಮೇಲೇರಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬಾಂಗ್ಲಾ ಸ್ಪಿನ್ನರ್ ಮೆಹದಿ ಹಸನ್ ಎರಡು ಸ್ಥಾನ ಕುಸಿತ ಕಂಡು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ, ಮ್ಯಾಟ್ ಹೆನ್ರಿ ಐದನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ.