ಟೀಂ ಇಂಡಿಯಾದ ಅನುಭವಿ ಕ್ರಿಕೆಟಿಗ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ಗುಡ್‌ಬೈ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
"
ನವದೆಹಲಿ(ಆ.15): ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿ ಕೆಲವು ನಿಮಿಷ ಕಳೆಯುವುದರೊಳಗಾಗಿ ಭಾರತದ ಮತ್ತೋರ್ವ ಅನುಭವಿ ಬ್ಯಾಟ್ಸ್‌ಮನ್ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
ಹೌದು, ಟೀಂ ಇಂಡಿಯಾ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ಸಹಾ ಧೋನಿ ಹಾದಿಯನ್ನು ಹಿಂಬಾಲಿಸಿದ್ದು, ಇನ್‌ಸ್ಟಾಗ್ರಾಂ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದಾಗಿ ತಿಳಿಸಿದ್ದಾರೆ.
ನಿಮ್ಮ ಜತೆ ಆಡಿದ್ದು ಅದ್ಭುತ ಕ್ಷಣಗಳು. ನಿಮ್ಮ ಜತೆ ಆಡಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತದೆ. ನಾನು ನಿಮ್ಮ ಹಾದಿಯನ್ನೇ ಹಿಡಿಯುತ್ತಿದ್ದೇನೆ. ಧೋನಿ. Thank you India, Jai Hind ಎಂದು ಸುರೇಶ್ ರೈನಾ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಎಂ.ಎಸ್.ಧೋನಿ!
33 ವರ್ಷದ ಸುರೇಶ್ ರೈನಾ ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಿದ್ದತೆ ನಡೆಸುತ್ತಿದ್ದಾರೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರ ವರೆಗೆ ನಡೆಯಲಿದೆ.
ಸುರೇಶ್ ರೈನಾ ಜುಲೈ 2018ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಕಾಣಿಸಿಕೊಂಡಿದ್ದರು. ರೈನಾ ಟೀಂ ಇಂಡಿಯಾ ಪರ 18 ಟೆಸ್ಟ್, 226 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನಾಡಿದ್ದಾರೆ.
