"ರಜೆ ಇದೆ, ಆದ್ರೂ...?": ವಿರಾಟ್ ಕೊಹ್ಲಿ ವರ್ಕೌಟ್ ಬಗ್ಗೆ ಹೇಳಿದ್ದೇನು? ವಿಡಿಯೋ ವೈರಲ್
ರಜೆ ದಿನದಲ್ಲೂ ವರ್ಕೌಟ್ ಮಾಡುವುದನ್ನು ಮಿಸ್ ಮಾಡದ ಕೊಹ್ಲಿ
ಫಿಟ್ನೆಸ್ ವಿಚಾರದಲ್ಲಿ ಸದಾ ಮಾಡೆಲ್ ಆಗಿರುವ ಟೀಂ ಇಂಡಿಯಾ ನಾಯಕ
ಏಷ್ಯಾಕಪ್ ಟೂರ್ನಿಯು ಅಕ್ಟೋಬರ್ 30ರಿಂದ ಆರಂಭ
ನವದೆಹಲಿ(ಆ.17): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಜಗತ್ತಿನ ಅತ್ಯಂತ ಶಿಸ್ತುಬದ್ಧ ಸ್ಪೋರ್ಟ್ಸ್ ಪರ್ಸನ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಈ ಕಾರಣಕ್ಕಾಗಿಯೇ ವಿರಾಟ್ ಕೊಹ್ಲಿ, ಜಗತ್ತಿನ ಹಲವು ಯುವ ಕ್ರೀಡಾಪಟುಗಳ ಪಾಲಿಗೆ ಸ್ಪೂರ್ತಿಯ ಚಿಲುಮೆ ಎನಿಸಿದ್ದಾರೆ. ಓರ್ವ ದೊಡ್ಡ ಆಟಗಾರನ ಸಾಮರ್ಥ್ಯವೇನೆಂದರೆ, ವಿವಿಧ ಅಡೆತಡೆಗಳು ಹಾಗೂ ಗೊಂದಲದ ಹೊರತಾಗಿಯೂ ತನ್ನನ್ನು ತಾನು ಗುರಿಯತ್ತ ಕೇಂದ್ರೀಕರಿಸಿಕೊಳ್ಳುವುದಾಗಿದೆ. ಅಂತಹ ಸಾಮರ್ಥ್ಯ ವಿರಾಟ್ ಕೊಹ್ಲಿಗಿದೆ. ಆಗಸ್ಟ್ 15ರಂದು ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತೊಮ್ಮೆ ಎಂದಿನಂತೆ ವರ್ಕೌಟ್ ಮಾಡಿದ್ದಾರೆ. ಅದರಲ್ಲೇನು ವಿಶೇಷ ಅಂತೀರಾ?. ಇಡೀ ದೇಶವೇ ಆಗಸ್ಟ್ 15ರ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು. ಅಂದು ಬಹುತೇಕ ಮಂದಿ ರಜೆ ದಿನವನ್ನು ಎಂಜಾಯ್ ಮಾಡಿದ್ದಾರೆ. ಆದರೆ ರಜಾ ದಿನದಲ್ಲೂ ವಿರಾಟ್ ಕೊಹ್ಲಿ ತಮ್ಮ ಎಂದಿನ ವರ್ಕೌಟ್ ದಿನಚರಿಯನ್ನು ಮಿಸ್ ಮಾಡದೇ ಬೆವರು ಹರಿಸಿದ್ದಾರೆ.
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ತಾವು ವರ್ಕೌಟ್ ಮಾಡುತ್ತಿರುವ ವಿಡಿಯೋ ಜತೆಗೆ "ರಜೆ ದಿನವಾಗಿದ್ದರೇನಂತೆ, ನಾವು ಓಡಲೇಬೇಕು" ಎಂದು ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವ ವಿಡಿಯೋ ಜತೆ ಬರೆದುಕೊಂಡಿದ್ದಾರೆ.
ಮಾಜಿ ನಾಯಕ ವಿರಾಟ್ ಕೊಹ್ಲಿ, ಕೊನೆಯ ಬಾರಿಗೆ ವೆಸ್ಟ್ ಇಂಡೀಸ್ ಎದುರಿನ ಮೊದಲ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದಾದ ಬಳಿಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಐರ್ಲೆಂಡ್ ಎದುರಿನ ಟಿ20 ಸರಣಿಗೂ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಆಗಸ್ಟ್ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಕೊಹ್ಲಿ, ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿಯು ಇನ್ನೂ ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಹೆಸರಿಸಿಲ್ಲ.
ಭಾರತದ 84,330 ಕೋಟಿ ಆಸ್ತಿ ಒಡತಿಯ ಕಂಪೆನಿ ಜತೆ ಕ್ರಿಕೆಟ್ ಆಸ್ಟ್ರೇಲಿಯಾ ಟೈಯಪ್..!
ಇನ್ನು ಏಷ್ಯಾಕಪ್ ಟೂರ್ನಿಯ ಬಗ್ಗೆ ಹೇಳುವುದಾದರೇ, ಟೂರ್ನಿಯಲ್ಲಿ 6 ತಂಡಗಳು ಪಾಲ್ಗೊಳ್ಳುತ್ತಿದ್ದು, 3 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ ತಂಡವು 'ಎ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಪಾಕಿಸ್ತಾನ ಹಾಗೂ ನೇಪಾಳ ತಂಡಗಳು ಕೂಡಾ ಸ್ಥಾನ ಪಡೆದಿವೆ. ಇನ್ನು 'ಬಿ' ಗುಂಪಿನಲ್ಲಿ ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ತಂಡಗಳು ಸ್ಥಾನ ಪಡೆದಿವೆ.
ಮುಂಬರುವ ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿಯ ಏಷ್ಯಾಕಪ್ ಟೂರ್ನಿಯನ್ನು 50 ಓವರ್‌ಗಳ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ಆತಿಥ್ಯದ ಹಕ್ಕು ಪಡೆದುಕೊಂಡಿದೆ. ಆದರೆ ಭಾರತ ಕ್ರಿಕೆಟ್ ತಂಡವು, ಪಾಕಿಸ್ತಾನ ಪ್ರವಾಸ ಮಾಡಲು ನಿರಾಕರಿಸಿದ ಕಾರಣ, ಹೈಬ್ರೀಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲಾಗಿದೆ. ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಪಾಕಿಸ್ತಾನದಲ್ಲಿ 4 ಪಂದ್ಯಗಳು ನಡೆದರೆ, ಶ್ರೀಲಂಕಾದಲ್ಲಿ 9 ಪಂದ್ಯಗಳು ನಡೆಯಲಿವೆ.
ಇವರೇ ನೋಡಿ ಲಂಕಾ ದಿಗ್ಗಜ ಕ್ರಿಕೆಟಿಗನ ಬ್ಯೂಟಿಫುಲ್ ಪತ್ನಿ..! ಲವ್ ಸ್ಟೋರಿ ತುಂಬಾ ಇಂಟ್ರೆಸ್ಟಿಂಗ್
ಟೂರ್ನಿ ಮಾದರಿ ಹೇಗೆ?
6 ತಂಡಗಳನ್ನು ತಲಾ 3 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ನೇಪಾಳ ‘ಎ’ ಗುಂಪಿನಲ್ಲಿದ್ದು, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ‘ಬಿ’ ಗುಂಪಿನಲ್ಲಿವೆ. ಗುಂಪು ಹಂತದಲ್ಲಿ ಪ್ರತಿ ತಂಡ ಇನ್ನುಳಿದ 2 ತಂಡದ ವಿರುದ್ಧ ಒಮ್ಮೆ ಸೆಣಸಲಿದೆ. ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆವ ತಂಡಗಳು ಸೂಪರ್-4 ಹಂತಕ್ಕೇರಲಿವೆ. ಸೂಪರ್-4ನಲ್ಲಿ ಪ್ರತಿ ತಂಡ ಇನ್ನುಳಿದ 3 ತಂಡದ ವಿರುದ್ಧ ಒಮ್ಮೆ ಆಡಲಿದ್ದು, ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆಯುವ ತಂಡಗಳು ಫೈನಲ್‌ಗೇರಲಿವೆ.
ಏಷ್ಯಾಕಪ್ ಟೂರ್ನಿಯ ವೇಳಾಪಟ್ಟಿ ಹೀಗಿದೆ ನೋಡಿ: