ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆಗಸ್ಟ್ 4 ರಿಂದ ಆರಂಬಗೊಳ್ಳಲಿದೆ 5 ಪಂದ್ಯದ ಸರಣಿ ಸರಣಿಗೂ ಮುನ್ನ ಕೊಹ್ಲಿ ಸೈನ್ಯಕ್ಕೆ ಹಿನ್ನಡೆ

ಲಂಡನ್(ಜು.05): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಈಗಾಗಲೇ ಆಂಗ್ಲರ ನಾಡಿನಲ್ಲಿ ಬೀಡುಬಿಟ್ಟಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಸೋಲು ಮರೆಯಲು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ವಿಶ್ವಾಸದಲ್ಲಿದೆ. ಆದರೆ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಇಂಜುರಿ ಸಮಸ್ಯೆ ಕಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಯ್ದ ಆಟಗಾರರನ್ನೊಳಗೊಂಡ ಕೌಂಟಿ ತಂಡದ ಜತೆ ಟೀಂ ಇಂಡಿಯಾ ಅಭ್ಯಾಸ ಪಂದ್ಯ

ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಗಿಲ್ ಸಂಪೂರ್ಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ವೈದ್ಯರು ಸೂಚನೆ ಪ್ರಕಾರ ಗಿಲ್‌ಗೆ 3 ತಿಂಗಳ ವಿಶ್ರಾಂತಿ ಅಗತ್ಯವಿದೆ. ಗಿಲ್ ಅನುಪಸ್ಥಿತಿ ಟೀಂ ಇಂಡಿಯಾಗೆ ಹಿನ್ನಡೆಯಾಗಿದೆ.

ಗಿಲ್ ತಂಡದಿಂದ ಹೊರಬಿದ್ದಿರುವ ಕಾರಣ ಟೀಂ ಮ್ಯಾನೇಜ್ಮೆಂಟ್ ಇಬ್ಬರು ಆರಂಭಿಕರನ್ನು ಇಂಗ್ಲೆಂಡ್‌ಗೆ ಕಳುಹಿಸುವಂತೆ ಬಿಸಿಸಿಐಗೆ ಮನವಿ ಮಾಡಿಕೊಂಡಿದೆ. ಇದೀಗ ಗಿಲ್ ಬದಲು ಯಾರು ತಂಡ ಸೇರಿಕೊಳ್ಳಲಿದ್ದಾರೆ ಅನ್ನೋ ಕುತೂಹಲ ಮನೆ ಮಾಡಿದೆ.

ಪೃಥ್ವಿ ಶಾ ಹಾಗೂ ದೇವದತ್ ಪಡಿಕ್ಕಲ್ ಇಬ್ಬರಿಗೂ ಬಿಸಿಸಿಐ ಆಹ್ವಾನ ನೀಡುವ ಸಾಧ್ಯತೆ ಇದೆ. ವಿಜಯ್ ಹಜಾರೆ ಟೂರ್ನಿಯಲ್ಲಿ ಇಬ್ಬರೂ ಕ್ರಿಕೆಟಿಗರು ಉತ್ತಮ ಪ್ರದರ್ಶನ ನೀಡಿದ್ದಾರೆ. ಪೃಥ್ವಿ ಶಾ ಈಗಾಗಲೇ ಟೀಂ ಇಂಡಿಯಾ ಪರ ಟೆಸ್ಟ್ ಆಡಿದ್ದಾರೆ. ಆದರೆ ಪಡಿಕ್ಕಲ್ ಇನ್ನೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿಲ್ಲ.