ಐಸಿಸಿ ಟೆಸ್ಟ್ ರ್‍ಯಾಂಕಿಂಗ್: ಅಗ್ರ-10ರತ್ತ ಯಶಸ್ವಿ ಜೈಸ್ವಾಲ್ ದಾಪುಗಾಲು
22ರ ಜೈಸ್ವಾಲ್ ಬುಧವಾರ ಪ್ರಕಟಗೊಂಡ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ 3 ಸ್ಥಾನ ಏರಿಕೆ ಕಂಡು 12ನೇ ಸ್ಥಾನ ತಲುಪಿದ್ದಾರೆ. 69ನೇ ಸ್ಥಾನದೊಂದಿಗೆ ಸರಣಿ ಆರಂಭಗಿಸಿದ್ದ ಜೈಸ್ವಾಲ್, ಇಂಗ್ಲೆಂಡ್ ವಿರುದ್ಧದ ಸರಣಿಯ 4 ಪಂದ್ಯಗಳಲ್ಲಿ 2 ದ್ವಿಶತಕ ಸೇರಿ 655 ರನ್ ಕಲೆಹಾಕುವ ಮೂಲಕ ಒಟ್ಟು 57 ಸ್ಥಾನಗಳ ಪ್ರಗತಿ ಸಾಧಿಸಿದ್ದಾರೆ.
ನವದೆಹಲಿ(ಫೆ.29): ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಅಭೂತಪೂರ್ವ ಪ್ರದರ್ಶನದ ಮೂಲಕ ಭಾರೀ ಸದ್ದು ಮಾಡುತ್ತಿರುವ ಪ್ರತಿಭಾವಂತ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರ-10ರತ್ತ ದಾಪುಗಾಲಿಟ್ಟಿದ್ದಾರೆ. ಇನ್ನೊಂದೆಡೆ ರಾಂಚಿ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸಿದ ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ 3ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
22ರ ಜೈಸ್ವಾಲ್ ಬುಧವಾರ ಪ್ರಕಟಗೊಂಡ ನೂತನ ರ್‍ಯಾಂಕಿಂಗ್ ಪಟ್ಟಿಯಲ್ಲಿ 3 ಸ್ಥಾನ ಏರಿಕೆ ಕಂಡು 12ನೇ ಸ್ಥಾನ ತಲುಪಿದ್ದಾರೆ. 69ನೇ ಸ್ಥಾನದೊಂದಿಗೆ ಸರಣಿ ಆರಂಭಗಿಸಿದ್ದ ಜೈಸ್ವಾಲ್, ಇಂಗ್ಲೆಂಡ್ ವಿರುದ್ಧದ ಸರಣಿಯ 4 ಪಂದ್ಯಗಳಲ್ಲಿ 2 ದ್ವಿಶತಕ ಸೇರಿ 655 ರನ್ ಕಲೆಹಾಕುವ ಮೂಲಕ ಒಟ್ಟು 57 ಸ್ಥಾನಗಳ ಪ್ರಗತಿ ಸಾಧಿಸಿದ್ದಾರೆ.
ವಿರಾಟ್ ಕೊಹ್ಲಿ 9ನೇ ಸ್ಥಾನದಲ್ಲಿದ್ದು, ನಾಯಕ ರೋಹಿತ್ ಶರ್ಮಾ ಹಾಗೂ ರಿಷಭ್ ಪಂತ್ ಕ್ರಮವಾಗಿ 13 ಮತ್ತು 14ನೇ ಸ್ಥಾನಗಳಲ್ಲಿದ್ದಾರೆ. ಇದೇ ವೇಳೆ ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿನ ರೂವಾರಿ, ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ 31 ಸ್ಥಾನ ಏರಿಕೆ ಕಂಡು 69ನೇ ಸ್ಥಾನ ಪಡೆದಿದ್ದಾರೆ. ಸದ್ಯ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿದ್ದಾರೆ.
'ನಾನು ಈ ದುಬಾರಿ ಕಾರು ಕೊಳ್ಳುತ್ತೇನೆ ನೋಡ್ತಾ ಇರಿ..': ರೋಹಿತ್ ಶರ್ಮಾ ಪ್ರತಿಜ್ಞೆ ಸ್ಮರಿಸಿಕೊಂಡ ಬಾಲ್ಯದ ಕೋಚ್
ಇನ್ನು ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಜಸ್‌ಪ್ರೀತ್ ಬುಮ್ರಾ, ಆಲ್ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇನ್ನು ರಾಂಚಿ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಸದ್ಯ ಬುಮ್ರಾ ಹಾಗೂ ಅಶ್ವಿನ್ ನಡುವೆ ಕೇವಲ 21 ರೇಟಿಂಗ್ ಅಂಕಗಳ ವ್ಯತ್ಯಾಸವಿಯಷ್ಟೇ. ಇನ್ನು ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಾಡ ಮೂರನೇ ಸ್ಥಾನಕ್ಕೆ ಜಾರಿದ್ದರೆ, ಆಸ್ಟ್ರೇಲಿಯಾದ ವೇಗಿಗಳಾದ ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹೇಜಲ್‌ವುಡ್ ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.