ಟೀಂ ಇಂಡಿಯಾ ಸ್ಟಾರ್ ವೇಗಿ IPL 2020 ಆಡೋದು ಅನುಮಾನ.!
ಟೀಂ ಇಂಡಿಯಾದ ಯುವ ವೇಗಿ ದೀಪಕ್ ಚಹರ್ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದು, ಬಹುತೇಕ ಮುಂಬರುವ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..
ನವವದೆಹಲಿ[ಡಿ.25]: ಭಾರತ ತಂಡದ ವೇಗದ ಬೌಲರ್ ದೀಪಕ್ ಚಹರ್ 2020ರ ಐಪಿಎಲ್‌ನಲ್ಲಿ ಆಡುವುದು ಅನುಮಾನವೆನಿಸಿದೆ. ವೆಸ್ಟ್‌ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಗುರಿಯಾದ ದೀಪಕ್, 3ನೇ ಹಾಗೂ ನಿರ್ಣಾಯಕ ಪಂದ್ಯವನ್ನು ತಪ್ಪಿಸಿಕೊಂಡಿದ್ದರು.
ದೀಪಕ್ ಚಹಾರ್ ಇಂಜುರಿ; ಟೀಂ ಇಂಡಿಯಾ ಸೇರಿಕೊಂಡ RCB ವೇಗಿ!
ಶ್ರೀಲಂಕಾ ವಿರುದ್ಧ ಟಿ20 ಹಾಗೂ ಆಸ್ಪ್ರೇಲಿಯಾ ವಿರುದ್ಧ ಏಕದಿನ ಸರಣಿಯಿಂದ ಹೊರಬಿದ್ದಿರುವ ದೀಪಕ್, ಸಂಪೂರ್ಣವಾಗಿ ಗುಣಮುಖರಾಗಲು 3ರಿಂದ 4 ತಿಂಗಳು ಬೇಕಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ.ಪ್ರಸಾದ್ ಸೋಮವಾರ ಸ್ಪಷ್ಟಪಡಿಸಿದರು. ಒಂದೊಮ್ಮೆ ದೀಪಕ್ ಸಮಯಕ್ಕೆ ಸರಿಯಾಗಿ ಗುಣಮುಖರಾದರೂ, ಐಪಿಎಲ್‌ನ ಆರಂಭಿಕ ಕೆಲ ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಹ್ಯಾಟ್ರಿಕ್ ಹೀರೋ ತಂಗಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!
ಚೆನ್ನೈ ಸೂಪರ್ ಕಿಂಗ್ಸ್‌ನ ಪ್ರಮುಖ ವೇಗಿ ಎನಿಸಿರುವ ದೀಪಕ್ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. 13ನೇ ಆವೃತ್ತಿಯ ಐಪಿಎಲ್ ಮಾರ್ಚ್ 28ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ.
2010-11ನೇ ಸಾಲಿನಲ್ಲಿ ರಣಜಿ ಟೂರ್ನಿಗೆ ಪದಾರ್ಪಣೆ ಮಾಡಿದ ಚಹರ್, 10 ರನ್ ನೀಡಿ 8 ವಿಕೆಟ್ ಕಬಳಿಸುವ ಮೂಲಕ ತಮ್ಮ ಚೊಚ್ಚಲ ಪಮದ್ಯವನ್ನು ಸ್ಮರಣೀಯವಾಗಿಸಿಕೊಂಡಿದ್ದರು. ಇನ್ನು ಬಾಂಗ್ಲಾದೇಶ ವಿರುದ್ಧ ನಾಗ್ಪುರದಲ್ಲಿ ನಡೆದ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಕೇವಲ 7 ರನ್ ನೀಡಿ ಹ್ಯಾಟ್ರಿಕ್ ಸಹಿತ 6 ವಿಕೆಟ್ ಕಬಳಿಸಿದ್ದರು. ಈ ಪಂದ್ಯವನ್ನು ಭಾರತ 30 ರನ್’ಗಳಿಂದ ಜಯಿಸಿತ್ತು. ಇದರ ಜತೆಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್’ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನ್ನುವ ಗೌರವಕ್ಕೂ ದೀಪಕ್ ಭಾಜನರಾಗಿದ್ದರು.