* ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ಗೆ ಕ್ಷಣಗಣನೆ ಆರಂಭ* ಟೀಂ ಇಂಡಿಯಾ ಕೂಡಿಕೊಂಡ ಕನ್ನಡದ ವೇಗಿ ಪ್ರಸಿದ್ಧ್ ಕೃಷ್ಣ* ನಾಲ್ಕನೇ ಟೆಸ್ಟ್‌ ಸೆಪ್ಟೆಂಬರ್ 02ರಿಂದ ಆರಂಭ

ಲಂಡನ್‌(ಸೆ.02): ಕರ್ನಾಟಕದ ಯುವ ವೇಗದ ಬೌಲರ್‌ ಪ್ರಸಿದ್ಧ್ ಕೃಷ್ಣ ಮೊದಲ ಬಾರಿಗೆ ಭಾರತ ಟೆಸ್ಟ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್‌ ವಿರುದ್ಧದ 4ನೇ ಟೆಸ್ಟ್‌ಗೆ ಪ್ರಸಿದ್ದ್‌ರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಅವರು ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ನಿರೀಕ್ಷೆ ಇದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯವು ಗುರುವಾರ(ಸೆ.02)ದಿಂದ ಆರಂಭವಾಗಲಿದೆ

25 ವರ್ಷದ ಪ್ರಸಿದ್ಧ್ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಹಾಗೂ ಇಂಗ್ಲೆಂಡ್‌ ಪ್ರವಾಸದಲ್ಲಿ ಮೀಸಲು ಆಟಗಾರರಾಗಿ ಭಾರತ ತಂಡದಲ್ಲಿದ್ದರು. ‘ತಂಡದ ಆಡಳಿತದ ಕೋರಿಕೆಯ ಮೇರೆಗೆ ಪ್ರಸಿದ್ಧ್‌ರನ್ನು ಆಯ್ಕೆ ಸಮಿತಿಗೆ ಮುಖ್ಯ ತಂಡಕ್ಕೆ ಸೇರ್ಪಡೆಗೊಳಿಸಿದೆ’ ಎಂದು ಬಿಸಿಸಿಐ ತಿಳಿಸಿದೆ. ಪ್ರಸಿದ್ಧ್‌ 9 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದು, 34 ವಿಕೆಟ್‌ ಕಬಳಿಸಿದ್ದಾರೆ. ಇದೇ ವರ್ಷ ಮಾರ್ಚ್‌ನಲ್ಲಿ ಭಾರತ ಏಕದಿನ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು.

ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ ವೀರೂ-ದಾದಾ; ಸೆಹ್ವಾಗ್‌ ಮಾತಿಗೆ ಬಿದ್ದು ಬಿದ್ದು ನಕ್ಕ ಸೌರವ್‌..!

Scroll to load tweet…

ಇಂಗ್ಲೆಂಡ್ ವಿರುದ್ದದ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೂರು ಪಂದ್ಯಗಳು ಮುಕ್ತಾಯವಾಗಿದ್ದು, ಉಭಯ ತಂಡಗಳು 1-1ರ ಸಮಬಲ ಸಾಧಿಸಿವೆ. ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಲಾರ್ಡ್ಸ್‌ ನಡೆದ ಎರಡನೇ ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿದರೆ, ಲೀಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯವನ್ನು ಇಂಗ್ಲೆಂಡ್ ಜಯಿಸಿತ್ತು. ಹೀಗಾಗಿ ಇನ್ನುಳಿದ ಎರಡು ಟೆಸ್ಟ್‌ ಪಂದ್ಯಗಳಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.