ಪುಣೆ(ಅ.09): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯಕ್ಕೆ ಪುಣೆ ಮೈದಾನ ಸಜ್ಜಾಗಿದೆ. ಅ.10 ರಿಂದ ಆರಂಭಗೊಳ್ಳಲಿರುವ 2ನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಟೀಂ ಇಂಡಿಯಾ ಕಾತರಗೊಂಡಿದೆ. ಇತ್ತ ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿರುವ ಸೌತ್ ಆಫ್ರಿಕಾ ಕಠಿಣ ಹೋರಾಟ ನೀಡಲು ತಯಾರಿ ಮಾಡಿಕೊಂಡಿದೆ. ಪುಣೆ ಪಿಚ್ ಭಾರತಕ್ಕೆ ಆಘಾತ ನೀಡಿದ ಊದಾಹರಣೆಗಳೂ ಇವೆ. ಹೀಗಾಗಿ ಎಚ್ಚರಿಕೆಯಿಂದ ಕಣಕ್ಕಿಳಿಯಲು ಟೀಂ ಇಂಡಿಯಾ ನಿರ್ಧರಿಸಿದೆ.

ಇದನ್ನೂ ಓದಿ: ಅಶ್ವಿನ್, ಜಡೇಜಾಗೆ ಮೊದಲ ಆದ್ಯತೆ; ವರಸೆ ಬದಲಿಸಿದ ಕೊಹ್ಲಿ!

ಮೊದಲ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ 2ನೇ ಪಂದ್ಯದಲ್ಲೂ ಗೆಲುವಿಗೆ ರಣತಂತ್ರ ರೂಪಿಸಿದೆ. 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ 2ನೇ ಪಂದ್ಯಕ್ಕೆ ಬದಲಾವಣೆ ಮಾಡುತ್ತಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಪುಣೆ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಟೀಂ ಇಂಡಿಯಾ;

ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ಹುನಮಾ ವಿಹಾರಿ ವೃದ್ಧಿಮಾನ್ ಸಾಹ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ