ರಾಜ್‌ಕೋಟ್(ಜ.16): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯವನ್ನು ಅಭಿಮಾನಿಗಳು ಎದುರನೋಡುತ್ತಿದ್ದಾರೆ. ಕಾರಣ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಬರೋಬ್ಬರಿ 15 ವರ್ಷಗಳ ಬಳಿಕ 10 ವಿಕೆಟ್ ಸೋಲು ಕಂಡ ಟೀಂ ಇಂಡಿಯಾ, ಬಲಿಷ್ಠ ತಂಡದ ವಿರುದ್ಧ ಮಕಾಡೆ ಮಲಗಿತ್ತು. ಇದೀಗ 2ನೇ ಪಂದ್ಯದಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಲು ಕೊಹ್ಲಿ ಬಾಯ್ಸ್ ಸಜ್ಜಾಗಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾಗೆ ಕಹಿಯಾದ ಸಂಕ್ರಾತಿ ಹಬ್ಬ; ಕೊಹ್ಲಿ ಸೈನ್ಯಕ್ಕೆ ಹೀನಾಯ ಸೋಲು!

ಡೇವಿಡ್ ವಾರ್ನರ್ ಹಾಗೂ ಆ್ಯರೋನ್ ಫಿಂಚ್ ಆಕರ್ಷಕ ಶತಕದಿಂದ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆಯಿತು. ಇದೀಗ ಸರಣಿ ಉಳಿಸಿಕೊಳ್ಳಲು ಈ ಪಂದ್ಯ ಭಾರತದ ಪಾಲಿಗೆ ಮಹತ್ವದ್ದಾಗಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ. ಕಾರಣ ವಿಕೆಟ್ ಕೀಪರ್ ರಿಷಬ್ ಪಂತ್ ಇಂಜುರಿಗೆ ತುತ್ತಾಗಿರುವ ಕಾರಣ, ಬದಲಾವಣೆ ಅನಿವಾರ್ಯವಾಗಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ: ಕೊಹ್ಲಿ ಟೀಕಿಸಿದ ಫ್ಯಾನ್ಸ್!

ಮೊದಲ ಪಂದ್ಯದಲ್ಲಿ ರಿಷಬ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ 2ನೇ ಪಂದ್ಯದಲ್ಲಿ ರಾಹುಲ್ ಸಂಪೂರ್ಣ ವಿಕೆಟ್ ಕೀಪರ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆ ಹೆಚ್ಚಾಗಿದೆ. ಹೀಗಾದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಮನೀಶ್ ಪಾಂಡೆ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ.  ಕಳೆದ ಪಂದ್ಯದಲ್ಲಿ ದುಬಾರಿಯಾದ ಶಾರ್ದೂಲ್ ಠಾಕೂರ್ ಬದಲು ನವದೀಪ್ ಸೈನಿ ಸೇರಿಕೊಳ್ಳುವ ಸಾಧ್ಯತೆ ಇದೆ.

ಭಾರತ ಸಂಭವನೀಯ ತಂಡ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಜಸ್ಪ್ರೀತ್ ಬುಮ್ರಾ