ಮೌಂಟ್ ಮೌಂಗನುಯಿ(ಫೆ.10): ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಆರಂಭಿಕ 2 ಪಂದ್ಯ ಸೋತೂ, ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ ಇದೀಗ ಅಂತಿಮ ಪಂದ್ಯ ಗೆದ್ದು ಸೋಲಿನ ಅಂತರ ಕಡಿಮೆ ಮಾಡಿಕೊಳ್ಳೋ ಲೆಕ್ಕಾಚಾರದಲ್ಲಿದೆ. 

ಇದನ್ನೂ ಓದಿ: ನಾನು ಔಟಾಗದಿದ್ದರೆ ಫಲಿತಾಂಶ ಬೇರೆಯದ್ದೇ ಆಗುತ್ತಿತ್ತು: ನವದೀಪ್ ಸೈನಿ.

ಆತಿಥೇಯ ನ್ಯೂಜಿಲೆಂಡ್ ಟಿ20 ಕ್ವೀನ್ ಸ್ವೀಪ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾತರಗೊಂಡಿದೆ. ಹೀಗಾಗಿ 3ನೇ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಭಾರತ ತಂಡದಲ್ಲಿ ಬದಲಾವಣೆ ಖಚಿತ. ಕನಿಷ್ಠ 2 ಬದಲಾವಣೆ  ಮಾಡಲು ಕೊಹ್ಲಿ ನಿರ್ಧರಿಸಿದ್ದಾರೆ. 

ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ಸರಣಿ ಸೋತಿದ್ದೆಲ್ಲಿ..?

ಮಧ್ಯಮ ಕ್ರಮಾಂಕದಲ್ಲಿ ಕೇದಾರ್ ಜಾಧವ್ ಬದಲು ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇನ್ನು ಶಾರ್ದೂಲ್ ಠಾಕೂರ್‌ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಶಮಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ವಿಶ್ರಾಂತಿಯ ಅಗತ್ಯವಿರುವ ಜಸ್ಪ್ರೀತ್ ಬುಮ್ರಾ ಹೊರಗುಳಿದರೂ ಅಚ್ಚರಿಯಿಲ್ಲ.

ಭಾರತ ಸಂಭವನೀಯ ತಂಡ ಇಲ್ಲಿದೆ:
ಪೃಥ್ವಿ ಶಾ, ಮಯಾಂಕ್ ಅಗರ್ವಾಲ್ ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಜಸ್ಪ್ರೀತ್ ಬುಮ್ರಾ