ಸಿಡ್ನಿ(ನ.25): ಭಾರತ ತಂಡ ಆಸ್ಪ್ರೇಲಿಯಾ ಪ್ರವಾಸದಲ್ಲಿ ನೂತನ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದ್ದು, ಜೆರ್ಸಿ 1992ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ಧರಿಸಿದ್ದ ಜೆರ್ಸಿಯನ್ನೇ ಹೋಲಲಿದೆ.

ಹೊಸ ಜೆರ್ಸಿ ತೊಟ್ಟು ತೆಗಿಸಿಕೊಂಡಿರುವ ಫೋಟೋವನ್ನು ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಟ್ವೀಟ್‌ ಮಾಡಿದ್ದಾರೆ. ಹೊಸ ಜೆರ್ಸಿ, ಹೊಸ ಪ್ರೇರಣೆಯೊಂದಿಗೆ ಟೂರ್ನಿಗೆ ಸಜ್ಜಾಗಿದ್ದೇವೆ ಎಂದು ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಟ್ವೀಟ್‌ ಮಾಡಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರು ಮೂಲದ ಎಂಪಿಎಲ್‌ ಸ್ಪೋರ್ಟ್ಸ್ ಸಂಸ್ಥೆ ಭಾರತ ಕ್ರಿಕೆಟ್ ತಂಡದ ನೂತನ ಜೆರ್ಸಿ ಪ್ರಾಯೋಜಕರಾಗಿ ಬಿಸಿಸಿಐನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಹೊಸ ಜೆರ್ಸಿ ಬಗ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ ಆಸೀಸ್‌ನಲ್ಲಿ ಅಬ್ಬರಿಸದಿದ್ರೆ, ಟೀಂ ಇಂಡಿಯಾಗೆ ಹೀನಾಯ ಸೋಲು ಖಚಿತ; ಕ್ಲಾರ್ಕ್

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾವು ಆಸ್ಟ್ರೇಲಿಯಾ ವಿರುದ್ಧ 3 ಏಕದಿನ, 3 ಟಿ20 ಹಾಗೂ 4 ಪಂದ್ಯಗಳ ಟೆಸ್ಟ್ ಸರಣಿಯಾಡಲಿದ್ದು, ಸೀಮಿತ ಓವರ್‌ಗಳ ಸರಣಿ ನವೆಂಬರ್ 27ರಿಂದ ಆರಂಭವಾಗಲಿದೆ, ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭವಾಗಲಿದೆ.