ದುಬೈ(ಆ.27): 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ದಂಪತಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

"

ಹೌದು, ಇದೀಗ ವಿರುಷ್ಕಾ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ವಿರಾಟ್ ಹಾಗೂ ಅನುಷ್ಕಾ ಮುದ್ದಾದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಇದರೊಂದಿಗೆ ಜನವರಿ 2021ರಲ್ಲಿ ನಾವು ಮೂರು ಮಂದಿ ಎಂದು ವಿರುಷ್ಕಾ ಜೋಡಿ ಟ್ವೀಟ್ ಮಾಡಿದ್ದಾರೆ.   

ಒಂದು ತಪ್ಪು ಇಡೀ ಟೂರ್ನಿಯನ್ನೇ ಹಾಳು ಮಾಡಬಹುದು ಎಚ್ಚರ ಎಂದ ನಾಯಕ ಕೊಹ್ಲಿ

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ 2017ರ ಡಿಸೆಂಬರ್‌ನಲ್ಲಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ದುಬೈಗೆ ತಲುಪಿದ್ದಾರೆ. ಇಂದಿನಿಂದ ಟೂರ್ನಿಗೆ ಪೂರ್ವಭಾವಿ ಅಭ್ಯಾಸ ನಡೆಸಲು ತಂಡ ಮೈದಾನಕ್ಕಿಳಿಯಲಿದೆ.