ಏಕದಿನ ತಂಡ ಕೂಡಿಕೊಳ್ಳುತ್ತಿದ್ದಂತೆಯೇ ಖಡಕ್ ವಾರ್ನಿಂಗ್ ಕೊಟ್ಟ ಅನುಭವಿ ಸ್ಪಿನ್ನರ್ ಅಶ್ವಿನ್..!
ಏಷ್ಯಾಕಪ್ ಟೂರ್ನಿಯಲ್ಲಿ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಗಾಯಗೊಂಡ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್‌ಗೆ ಭಾರತದ ಏಕದಿನ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಮಣೆ ಹಾಕಲಾಗಿದೆ. ಇದೀಗ ಆಸ್ಟ್ರೇಲಿಯಾ ಎದುರಿನ ಪಂದ್ಯಕ್ಕೂ ಮುನ್ನ ರವಿ ಅಶ್ವಿನ್ ಮನಬಿಚ್ಚಿ ಮಾತನಾಡಿರುವ ವಿಡಿಯೋವನ್ನು ಬಿಸಿಸಿಐ ಎಕ್ಸ್(ಟ್ವಿಟರ್)ನಲ್ಲಿ ಶೇರ್ ಮಾಡಿದೆ.
ಮೊಹಾಲಿ(ಸೆ.22): ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬರೋಬ್ಬರಿ 20 ತಿಂಗಳ ಬಳಿಕ ಭಾರತ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬರುವ ಅಕ್ಟೋಬರ್ 05ರಿಂದ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ತಂಡದಲ್ಲಿ ಸ್ಥಾನ ಪಡೆದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹೀಗಿರುವಾಗಲೇ ಏಕದಿನ ತಂಡ ಕೂಡಿಕೊಂಡ ರವಿಚಂದ್ರನ್ ಅಶ್ವಿನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಏಷ್ಯಾಕಪ್ ಟೂರ್ನಿಯಲ್ಲಿ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಗಾಯಗೊಂಡ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್‌ಗೆ ಭಾರತದ ಏಕದಿನ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಮಣೆ ಹಾಕಲಾಗಿದೆ. ಇದೀಗ ಆಸ್ಟ್ರೇಲಿಯಾ ಎದುರಿನ ಪಂದ್ಯಕ್ಕೂ ಮುನ್ನ ರವಿ ಅಶ್ವಿನ್ ಮನಬಿಚ್ಚಿ ಮಾತನಾಡಿರುವ ವಿಡಿಯೋವನ್ನು ಬಿಸಿಸಿಐ ಎಕ್ಸ್(ಟ್ವಿಟರ್)ನಲ್ಲಿ ಶೇರ್ ಮಾಡಿದೆ.
ಏಕದಿನ ವಿಶ್ವಕಪ್: ಟೀಂ ಇಂಡಿಯಾಗೆ ರವಿಚಂದ್ರನ್ ಅಶ್ವಿನ್ ಎಂಟ್ರಿ?
ಟೀಂ ಇಂಡಿಯಾ ಹೆಡ್‌ಕೋಚ್ ರಾಹುಲ್ ದ್ರಾವಿಡ್, ಅಶ್ವಿನ್, ಭಾರತ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಕುರಿತಂತೆ ಮಾತನಾಡಿದ್ದಾರೆ. ಭಾರತ ಕ್ರಿಕೆಟ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ. ನನಗೆ ತಂಡದಲ್ಲಿ ಆಡಲು ಅವಕಾಶ ಸಿಗಲಿ ಅಥವಾ ಸಿಗದೇ ಹೋಗಲಿ, ನಾನಂತೂ ತಂಡಕ್ಕೆ ನನ್ನಿಂದ ಏನನ್ನೂ ಕೊಡುಗೆ ನೀಡಲು ಸಾಧ್ಯವೇ ಸದಾ ಕಾಲ ಅದನ್ನು ಮಾಡಲು ಸಜ್ಜಾಗಿರುತ್ತೇನೆ" ಎಂದು ಅಶ್ವಿನ್ ಹೇಳಿದ್ದಾರೆ.
ಅಶ್ವಿನ್ ಭರ್ಜರಿ ಸಿದ್ಧತೆ: ವಿಶ್ವಕಪ್ ತಂಡಕ್ಕೆ ಸೇರಿಕೊಳ್ಳುವಂತೆ ಕರೆ ಬರಬಹುದು ಎನ್ನುವ ನಿರೀಕ್ಷೆ ಅಶ್ವಿನ್‌ಗೆ ಇತ್ತು ಎಂದು ಕಾಣುತ್ತದೆ. ಇದೇ ಕಾರಣದಿಂದಾಗಿ 10 ದಿನಗಳ ಹಿಂದೆ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಗೆ ಆಗಮಿಸಿ ಅಭ್ಯಾಸ ಆರಂಭಿಸಿದ್ದರು. ಸದ್ಯ ತಮಿಳುನಾಡು ಕ್ರಿಕೆಟ್ ಸಂಸ್ಥೆ ಅಯೋಜಿಸಿರುವ ಟೂರ್ನಿಯಲ್ಲಿ ಆಡುತ್ತಿರುವ ಅಶ್ವಿನ್, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ತಾವಿನ್ನೂ ಏಕದಿನ ತಂಡಕ್ಕೆ ಅವಶ್ಯಕ ಎನ್ನುವುದನ್ನು ಸಾಬೀತುಪಡಿಸಲು ಎದುರು ನೋಡುತ್ತಿದ್ದಾರೆ.
ಮೊದಲ ಏಕದಿನ ಪಂದ್ಯಕ್ಕೆ ತಂಡಗಳು ಹೀಗಿವೆ:
ಭಾರತ: ಇಶಾನ್ ಕಿಶನ್, ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಲ್ ರಾಹುಲ್(ನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಶ್, ಕ್ಯಾಮರೋನ್ ಗ್ರೀನ್, ಮಾರ್ಕಸ್ ಸ್ಟೋಯ್ನಿಸ್, ಪ್ಯಾಟ್ ಕಮಿನ್ಸ್, ಮ್ಯಾಥ್ಯೂ ಶಾರ್ಟ್, ಆಡಂ ಜಂಪಾ, ಶಾನ್ ಅಬ್ಬೋಟ್.