ಆಸ್ಟ್ರೇಲಿಯಾ ವಿರುದ್ಧ ಕೊನೇ 2 ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ರಾಹುಲ್‌ಗೆ ಶಾಕ್!
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಬಾರ್ಡರ್ ಗಾವಸ್ಕರ್ ಟ್ರೋಫಿಯ ಕೊನೆಯ ಎರಡು ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ರಾಷ್ಟ್ರೀಯ ಆಯ್ಕೆ ಸಮಿತಿ ಭಾರತ ತಂಡವನ್ನು ಪ್ರಕಟಿಸಿದೆ. ಬರೋಬ್ಬರಿ 9 ವರ್ಷಗಳ ಬಳಿಕ ಜೈದೇವ್ ಉನಾದ್ಕತ್ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ.
ಬೆಂಗಳೂರು (ಫೆ. 19): ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ರಾಷ್ಟ್ರೀಯ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿದೆ. ಕೊನೆಯ ಎರಡು ಪಂದ್ಯಕ್ಕೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳಪೆ ಫಾರ್ಮ್‌ನಲ್ಲಿರುವ ಕೆಎಲ್ ರಾಹುಲ್‌ರನ್ನು ತಂಡದಲ್ಲಿ ಮುಂದುವರಿಸಲಾಗಿದೆ. ಆದರೆ, ಅವರ ಹೆಸರಲ್ಲಿದ್ದ ಉಪನಾಯಕ ಪಟ್ಟವನ್ನು ಕಿತ್ತು ಹಾಕಲಾಗಿದೆ. ಇನ್ನು ವೈಯಕ್ತಿಕ ಕಾರಣಗಳಿಗಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮ ಲಭ್ಯರಿಲ್ಲ. ಅವರ ಬದಲಿಗೆ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಉಪನಾಯಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಾರ್ಡರ್ ಗಾವಸ್ಕರ್ ಟೆಸ್ಟ್ ಸರಣಿಯ ತಂಡದ್ಲಿ ಆಯ್ಕೆ ಸಮಿತಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಬಿಸಿಸಿಐ ಪ್ರಕಟಣೆಯ ಪ್ರಕಾರ ಕೆಎಲ್ ರಾಹುಲ್ ಅವರನ್ನು ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ರೋಹಿತ್ ಶರ್ಮ ಅವರ ಉಪನಾಯಕರಾಗಿ ಕೆಎಲ್ ರಾಹುಲ್ ಅವರನ್ನು ಬಿಸಿಸಿಐ ನೇಮಿಸಿತ್ತು. ರಾಹುಲ್ ಅವರ ಕಳಪೆ ಫಾರ್ಮ್ ಕಾರಣಕ್ಕೆ ಬಿಸಿಸಿಐ ಈ ನಿರ್ಧಾರ ಮಾಡಿರುವ ಸಾಧ್ಯತೆ ಇದೆ.
ರಣಜಿ ಟ್ರೋಫಿ ಫೈನಲ್ ಪಂದ್ಯಕ್ಕಾಗಿ 2ನೇ ಟೆಸ್ಟ್ ತಂಡದಿಂದ ರಿಲೀಸ್ ಆಗಿದ್ದ ಜೈದೇವ್ ಉನಾದ್ಕತ್ ತಂಡಕ್ಕೆ ವಾಪಸಾಗಿದ್ದಾರೆ. ಅದರೊಂದಿಗೆ ಏಕದಿನ ತಂಡದಲ್ಲೂ ಅವರು ಸ್ಥಾನ ಪಡೆದುಕೊಂಡಿದ್ದಾರೆ. 2013ರ ನವೆಂಬರ್‌ನಲ್ಲಿ ಅವರು ಕೊನೆಯ ಬಾರಿಗೆ ಭಾರತ ತಂಡದ ಪರವಾಗಿ ಏಕದಿನ ಪಂದ್ಯ ಆಡಿದ್ದರು. ಮೊಣಕಾಲು ಸರ್ಜರಿಯ ನಂತರ ಐದು ತಿಂಗಳ ಬಳಿಕ ಟೆಸ್ಟ್ ತಂಡಕ್ಕೆ ವಾಪಸಾಗಿದ್ದ ಆಲ್ರೌಂಡರ್ ರವೀಂದ್ರ ಜಡೇಜಾ, ಏಕದಿನ ತಂಡಕ್ಕೂ ವಾಪಸಾಗಿದ್ದಾರೆ. ಇನ್ನೊಂದೆಡೆ ಜಸ್‌ಪ್ರೀತ್ ಬುಮ್ರಾ ಬೆನ್ನುನೋವಿನ ಕಾರಣಕ್ಕೆ ತಂಡದಿಂದ ಹೊರಬಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ 2 ಪಂದ್ಯಗಳು ಕ್ರಮವಾಗಿ ಇಂದೋರ್ ಹಾಗೂ ಅಹಮದಾಬಾದ್‌ನಲ್ಲಿ ನಡೆಯಲಿದೆ. 3ನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ 5ರವರೆಗೆ ನಡೆಯಲಿದ್ದರೆ, 4ನೇ ಟೆಸ್ಟ್ ಪಂದ್ಯ 9-13ರವರೆಗೆ ನಡೆಯಲಿದೆ. ಮಾರ್ಚ್ 17 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು. ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದ್ದರೆ, 2ನೇ ಪಂದ್ಯ ಮಾರ್ಚ್ 19 ರಂದು ವೈಜಾಗ್‌ನಲ್ಲಿ ಹಾಗೂ 3ನೇ ಏಕದಿನ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ.
Ranji Trophy: ಬಂಗಾಳ ಮಣಿಸಿ ಸೌರಾಷ್ಟ್ರ ರಣಜಿ ಟ್ರೋಫಿ ಚಾಂಪಿಯನ್..!
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್‌ಗೆ ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (WK), ಇಶಾನ್ ಕಿಶನ್ (wk), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜೈದೇವ್ ಉನಾದ್ಕತ್.
Delhi Test: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ನೆಟ್ಟ ವಿರಾಟ್ ಕೊಹ್ಲಿ..!
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್ , ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜೈದೇವ್ ಉನಾದ್ಕತ್.