ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರಾಹುಲ್‌ಗೆ ಉಪನಾಯಕ ಪಟ್ಟ!
ಕೊರೋನಾ ವೈರಸ್‌ನಿಂದ ಸ್ಥಗಿತಗೊಂಡಿದ್ದ ಕ್ರಿಕೆಟ್ ಟೂರ್ನಿ ಐಪಿಎಲ್‌ನೊಂದಿಗೆ ಆರಂಭಗೊಂಡಿದೆ. ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ಟೆಸ್ಟ್, ಏಕದಿನ ಹಾಗೂ ಟಿ20 ತಂಡ ಪ್ರಕಟಸಿದೆ. ರೋಹಿತ್ ಶರ್ಮಾ ಬದಲು, ಕೆಎಲ್ ರಾಹುಲ್‌ಗೆ ಉಪನಾಯಕ ಪಟ್ಟ ನೀಡಲಾಗಿದೆ
ಮುಂಬೈ(ಅ.26): ಐಪಿಎಲ್ ಟೂರ್ನಿ ರೋಚಕ ಘಟ್ಟ ತಲುಪಿದೆ. ಲೀಗ್ ಹಂತದ ಪಂದ್ಯಗಳು ಅಂತಿಮ ಹಂತದಲ್ಲಿವೆ. ಇದರ ಬೆನ್ನಲ್ಲೇ ಬಿಸಿಸಿಐ ಇದೀಗ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಿಸಿದೆ. ಈ ಬಾರಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್‌ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಟೀಂ ಇಂಡಿಯಾ ಆಸೀಸ್ ಪ್ರವಾಸಕ್ಕೆ ನ್ಯೂ ಸೌತ್ ವೇಲ್ಸ್ ಒಪ್ಪಿಗೆ.
ಟಿ20 ಹಾಗೂ ಏಕದಿನ ತಂಡಕ್ಕೆ ಕೆಎಲ್ ರಾಹುಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದ ಉಪನಾಯಕ ಪಟ್ಟ ಎಂದಿನಂತೆ ಅಜಿಂಕ್ಯ ರಹಾನೆಗೆ ನೀಡಲಾಗಿದೆ. ಇಂಜುರಿಗೆ ತುತ್ತಾಗಿರುವ ರೋಹಿತ್ ಶರ್ಮಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ಇನ್ನು ವೇಗಿ ಇಶಾಂತ್ ಶರ್ಮಾ ಹಾಗೂ ರೋಹಿತ್ ಶರ್ಮಾ ಫಿಟ್ನೆಸ್ ಕುರಿತು ಬಿಸಿಸಿಐ ಪರಿಶೀಲನೆ ನಡೆಸಲಿದೆ ಎಂದು ಆಯ್ಕೆ ಸಮಿತಿ ಹೇಳಿದೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.