ಪಲ್ಲಕೆಲ್ಲೆ, ಕೊಲಂಬೊದಲ್ಲಿ ಭಾರತ vs ಲಂಕಾ ಸರಣಿ..!

ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಲಂಕಾ ಎರಡು ಪ್ರಮುಖ ಸ್ಟೇಡಿಯಂನಲ್ಲಿ ಈ ಕ್ರಿಕೆಟ್ ಸರಣಿ ನಡೆಯಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

Team India to play three match T20I and ODI series against Sri Lanka in Pallekele and Colombo kvn

ನವದೆಹಲಿ: ಭಾರತ ಹಾಗೂ ಶ್ರೀಲಂಕಾ ನಡುವೆ ಜುಲೈ, ಆಗಸ್ಟ್‌ನಲ್ಲಿ ನಡೆಯಲಿರುವ ಸೀಮಿತ ಓವರ್ ಸರಣಿಗಳಿಗೆ ಆತಿಥ್ಯ ನಿಗದಿಯಾಗಿದೆ. ಗುರುವಾರ ಬಿಸಿಸಿಐ ಈ ಬಗ್ಗೆ ಪ್ರಕಟಣೆ ನೀಡಿದ್ದು, ಜುಲೈ 26,27 ಹಾಗೂ 29 ರಂದು ನಡೆಯಲಿರುವ ಟಿ20 ಪಂದ್ಯಗಳಿಗೆ ಪಲ್ಲೆಕೆಲ್ಲೆ ಆತಿಥ್ಯ ವಹಿಸಲಿದೆ. 

ಇನ್ನು ಆ.1, 4 ಹಾಗೂ 7 ರಂದು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ. ಭಾರತ ತಂಡದ ನೂತನ ಕೋಚ್ ಗೌತಮ್ ಗಂಭೀರ್‌ಗೆ ಇದು ಮೊದಲ ಸರಣಿ ಆಗಲಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ. ಸರಣಿಗೆ ಭಾರತ ತಂಡ ಇನ್ನಷ್ಟೇ ಪ್ರಕಟಗೊಳ್ಳಬೇಕಿದ್ದು, ರೋಹಿತ್, ಕೊಹ್ಲಿ ಸೇರಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ಸಿಗಲಿದೆ ಎಂದು ತಿಳಿದುಬಂದಿದೆ. ಏಕದಿನ ಸರಣಿಯಲ್ಲಿ ರಾಹುಲ್, ಟಿ20 ಸರಣಿಯಲ್ಲಿ ಹಾರ್ದಿಕ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

ವಿಂಬಲ್ಡನ್‌ ಫೈನಲ್‌ಗೆ ಲಗ್ಗೆಯಿಟ್ಟ ಜ್ಯಾಸ್ಮಿನ್‌ ಪೌಲಿನಿ!

ಭಾರತಕ್ಕೆ ಡೊಶ್ಚಾಟೆ ಸಹಾಯಕ ಕೋಚ್?

ನೆದರ್ಲೆಂಡ್‌ನ ಮಾಜಿ ಕ್ರಿಕೆಟಿಗ ಡ್ಯಾನ್ ಟೆನ್ ಡೊಶ್ಚಾಟೆರನ್ನು ಭಾರತ ತಂಡದ ಸಹಾಯಕ ಕೋಚ್ ಆಗಿ ನೇಮಿಸುವಂತೆ ನೂತನ ಕೋಚ್ ಗೌತಮ್ ಗಂಭೀರ್ ಬಿಸಿಸಿಐಗೆ ಮನವಿ ಸಲ್ಲಿಸಿದ್ದಾರೆ. ಎನ್ನಲಾಗಿದೆ. ಡೊಶ್ಚಾಟೆ ಕೆಕೆಆರ್ ತಂಡದಲ್ಲಿ ಹಲವು ವರ್ಷ ಆಡಿದ್ದರು. ಬಳಿಕ ತಂಡದ ಫೀಲ್ಡಿಂಗ್ ಕೋಚ್ ಆಗಿದ್ದರು.

ಪಾಕ್‌ನಿಂದ ಚಾಂಪಿಯನ್ಸ್‌ ಟ್ರೋಫಿ ಸ್ಥಳಾಂತರಿಸಲು ಐಸಿಸಿ ಮೇಲೆ ಬಿಸಿಸಿಐ ಒತ್ತಡ

ನವದೆಹಲಿ: 2025ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಚಾಂಪಿಯನ್ಸ್‌ ಟ್ರೋಫಿ ಏಕದಿನ ಟೂರ್ನಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ) ಮೇಲೆ ಬಿಸಿಸಿಐ ಒತ್ತಡ ಹೇರುತ್ತಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಟೂರ್ನಿಯನ್ನು ಶ್ರೀಲಂಕಾ ಅಥವಾ ಯುಎಇನಲ್ಲಿ ನಡೆಸಲು ಬಿಸಿಸಿಐ ಮನವಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಅಂತಿಮಗೊಳಿಸಿದ್ದು, ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಡೆಸುವುದಾಗಿ ಹೇಳಿದೆ.

ವಿನಯ್ ಕುಮಾರ್ ಬೇಡ, ಈ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಗಂಭೀರ್‌ಗೆ ಬಿಸಿಸಿಐ ಸಲಹೆ..!

ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಟೂರ್ನಿ ಸ್ಥಳಾಂತರಕ್ಕೆ ಒತ್ತಡ ಹೇರಲಾಗುತ್ತಿದೆ ಎಂದು ಗೊತ್ತಾಗಿದೆ.

Latest Videos
Follow Us:
Download App:
  • android
  • ios