* ವೆಸ್ಟ್ ಇಂಡೀಸ್ ಎದುರಿನ ಸೀಮಿತ ಓವರ್‌ಗಳ ಸರಣಿಗೆ ವೇಳಾಪಟ್ಟಿ ಪ್ರಕಟ* ಜುಲೈ 22ರಿಂದ ಆರಂಭವಾಗಲಿದೆ ವೆಸ್ಟ್ ಇಂಡೀಸ್ ಎದುರಿನ ಸೀಮಿತ ಓವರ್‌ಗಳ ಸರಣಿ* ಕೊನೆ ಎರಡು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಅಮೆರಿಕ ಆತಿಥ್ಯ
ನವದೆಹಲಿ(ಮೇ.07): ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ (Team India) ಜುಲೈನಲ್ಲಿ ವೆಸ್ಟ್ ಇಂಡೀಸ್ ಪ್ರವಾಸವನ್ನು ಮಾಡಲಿದ್ದು, ವಿಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ (India Tour of West Indies) 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ವಿಂಡೀಸ್ ಪ್ರವಾಸವು ಜುಲೈ 22ರಿಂದ ಆರಂಭವಾಗಲಿದ್ದು, ವಿಂಡೀಸ್ ಪ್ರವಾಸದ ಕೊನೆ ಎರಡು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಅಮೆರಿಕ ಆತಿಥ್ಯವನ್ನು ವಹಿಸಲಿದೆ
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದ್ದು, ಜುಲೈ 22, 24 ಹಾಗೂ 27ರಂದು ಟ್ರಿನಿಡ್ಯಾಡ್‌ನ ಕ್ವೀನ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ. ಏಕದಿನ ಸರಣಿ ಮುಕ್ತಾಯವಾಗುತ್ತಿದ್ದಂತೆಯೆ ವೆಸ್ಟ್ ಇಂಡೀಸ್ ಎದುರು ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದ್ದು, ಮೊದಲ ಟಿ20 ಪಂದ್ಯವು ಜುಲೈ 29ರಿಂದ ಆರಂಭವಾಗಲಿದೆ. ಮೊದಲ ಟಿ20 ಪಂದ್ಯಕ್ಕೆ ಬ್ರಿಯನ್ ಚಾರ್ಲ್ಸ್ ಲಾರಾ ಮೈದಾನ ಆತಿಥ್ಯವನ್ನು ವಹಿಸಿದರೆ, ಆಗಸ್ಟ್ 01 ಹಾಗೂ 02ರಂದು ನಡೆಯಲಿರುವ ಎರಡು ಹಾಗೂ ಮೂರನೇ ಟಿ20 ಪಂದ್ಯಕ್ಕೆ ವಾರ್ನರ್ ಪಾರ್ಕ್ ಮೈದಾನ ಸಾಕ್ಷಿಯಾಗಲಿದೆ. ಇನ್ನು ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳು ಆಗಸ್ಟ್ 06 ಹಾಗೂ 07ರಂದು ಅಮೆರಿಕದ ಪ್ಲೋರಿಡಾದಲ್ಲಿ ಜರುಗಲಿವೆ.
ಈ ಮೊದಲು ಸಹಾ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಕಳೆದ ಮೂರು ಪ್ರವಾಸಗಳ ಪೈಕಿ ಎರಡು ಪ್ರವಾಸದಲ್ಲಿ ಅಮೆರಿಕ ನೆಲದಲ್ಲಿ ಟಿ20 ಪಂದ್ಯಗಳನ್ನಾಡಿದೆ. 2016ರಲ್ಲಿ ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ಅಮೆರಿಕದಲ್ಲಿ 2 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಇನ್ನು 2019ರಲ್ಲಿ 3 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳಿಗೆ ಅಮೆರಿಕ ಸಾಕ್ಷಿಯಾಗಿತ್ತು.
Ben Stokes ಒಂದೇ ಓವರ್‌ನಲ್ಲಿ 5 ಸಿಕ್ಸರ್ ಹಾಗೂ ಬೌಂಡರಿ ಬಾರಿಸಿ ದಾಖಲೆ ಬರೆದ ಸ್ಟೋಕ್ಸ್..!
ಐಪಿಎಲ್ ಟೂರ್ನಿ ಮುಕ್ತಾಯದ ಬಳಿಕ ಟೀಂ ಇಂಡಿಯಾ, ತವರಿನಲ್ಲಿಯೇ ದಕ್ಷಿಣ ಆಫ್ರಿಕಾ ಎದುರು 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಇದಾದ ಬಳಿಕ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ದ ಸರಣಿಯನ್ನಾಡಲಿದೆ. ಐರ್ಲೆಂಡ್ ಪ್ರವಾಸ ಮುಗಿಸಿದ ಬಳಿಕ ಟೀಂ ಇಂಡಿಯಾ, ಇಂಗ್ಲೆಂಡ್‌ಗೆ ಬಂದಿಳಿಯಲಿದ್ದು, ಈ ವೇಳೆ ಕಳೆದ ವರ್ಷದಲ್ಲಿ ಬಾಕಿ ಉಳಿದಿದ್ದ ಟೆಸ್ಟ್ ಸರಣಿಯ ಏಕೈಕ ಪಂದ್ಯ ಹಾಗೂ 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಐಪಿಎಲ್ ಟೂರ್ನಿ ಮುಕ್ತಾಯದ ಬಳಿಕ ಟೀಂ ಇಂಡಿಯಾ ತವರಿನಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಸರಣಿಗೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಕೆಲ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ.
