Asianet Suvarna News Asianet Suvarna News

ಸೈಕ್ಲಿಂಗ್ ಪೆಡಲ್ ತುಳಿಯಲಾರಂಭಿಸಿದ ರಿಷಭ್ ಪಂತ್..! ಟೀಂ ಇಂಡಿಯಾ ಪಾಲಿಗೆ ಗುಡ್ ನ್ಯೂಸ್

ಕಳೆದ ಜುಲೈ 21ರಂದು ಬಿಸಿಸಿಐ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಕೆ ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡಿತ್ತು. ಶ್ರೇಯಸ್ ಅಯ್ಯರ್ ಹಾಗೂ ಕೆ ಎಲ್ ರಾಹುಲ್ ಈಗಾಗಲೇ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಇಬ್ಬರು ಏಷ್ಯಾಕಪ್ ಟೂರ್ನಿಗೂ ಆಯ್ಕೆಯಾಗಿದ್ದಾರೆ.

Team India Wicket keeper Rishabh Pant Shares Video Of His Recovery From Injury kvn
Author
First Published Aug 29, 2023, 3:27 PM IST

ಬೆಂಗಳೂರು(ಆ.29): ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ನಿಧಾನವಾಗಿ ಚೇತರಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಹಾಕುತ್ತಿದ್ದಾರೆ. ಫಿಟ್ನೆಸ್ ಸಾಧಿಸಿ ಆದಷ್ಟು ಬೇಗ ತಂಡ ಕೂಡಿಕೊಳ್ಳಲು ಸ್ಪೋಟಕ ಬ್ಯಾಟರ್ ಹಾತೊರೆಯುತ್ತಿದ್ದಾರೆ. ಇದೀಗ ರಿಷಭ್ ಪಂತ್, ಜಿಮ್‌ನಲ್ಲಿ ಸೈಕ್ಲಿಂಗ್ ಮಾಡುತ್ತಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋವೀಗ ಸಾಕಷ್ಟು ವೈರಲ್ ಆಗಿದೆ.

ಕಳೆದ ಜುಲೈ 21ರಂದು ಬಿಸಿಸಿಐ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಕೆ ಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡಿತ್ತು. ಶ್ರೇಯಸ್ ಅಯ್ಯರ್ ಹಾಗೂ ಕೆ ಎಲ್ ರಾಹುಲ್ ಈಗಾಗಲೇ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಇಬ್ಬರು ಏಷ್ಯಾಕಪ್ ಟೂರ್ನಿಗೂ ಆಯ್ಕೆಯಾಗಿದ್ದಾರೆ.

ಏಷ್ಯಾಕಪ್‌ನಲ್ಲಿ ವಿರಾಟ್ ಕೊಹ್ಲಿ ವಿರಾಟ ರೂಪ..! ಏಷ್ಯಾಕಪ್‌ಗೂ ಮುನ್ನ ಎದುರಾಳಿ ಪಡೆಯಲ್ಲಿ ಢವ ಢವ

ಇದೀಗ ರಿಷಭ್ ಪಂತ್ ತಾವು ಸೈಕ್ಲಿಂಗ್ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, "ಗ್ರಿಪ್, ಟ್ವಿಸ್ಟ್‌, ಪ್ಯಾಡಲ್. ಗುಡ್ ವೈಬ್ಸ್‌ ಓನ್ಲಿ'(ಹಿಡಿತ, ಟ್ವಿಸ್ಟ್ ಹಾಗೂ ತುಳಿಯುವಿಕೆ, ಒಳ್ಳೆಯ ಮೂಡ್ ಮಾತ್ರ) ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು 8 ಲಕ್ಷಕ್ಕೂ ಅಧಿಕ ಮಂದಿ ಈ ವಿಡಿಯೋವನ್ನು ಲೈಕ್ ಮಾಡಿದ್ದಾರೆ.

 
 
 
 
 
 
 
 
 
 
 
 
 
 
 

A post shared by Rishabh Pant (@rishabpant)

ರಿಷಭ್ ಪಂತ್, ಬಹುತೇಕ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದು, ಮುಂಬರುವ ತವರಿನಲ್ಲಿ ನಡೆಯಲಿರುವ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯ ವೇಳೆಗೆ ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ರಿಷಭ್ ಪಂತ್, ಅಧಿಕೃತವಾಗಿ ಭಾರತ ವಿಶ್ವಕಪ್ ತಂಡದಿಂದ ಹೊರಬಿದ್ದರೆ, ಕೆ ಎಲ್ ರಾಹುಲ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ರೂಪದಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಇನ್ನು ಎರಡನೇ ಆಯ್ಕೆಯ ವಿಕೆಟ್ ಕೀಪರ್ ರೂಪದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ನಡುವೆ ಪೈಪೋಟಿ ಇದೆ.

2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿದೆಯಾದರೂ, ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಮಾಡಲು ಹಿಂದೇಟು ಹಾಕಿದ್ದರಿಂದ ಹೈಬ್ರೀಡ್‌ ಮಾದರಿಯಲ್ಲಿ ಪಾಕಿಸ್ತಾನ & ಶ್ರೀಲಂಕಾದಲ್ಲಿ ಮುಂಬರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆಗೊಂಡಿದೆ. ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ, ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2ರಂದು ಪಾಕ್‌ ವಿರುದ್ಧ ಆಡುವ ಮೂಲಕ ಭಾರತ ಅಭಿಯಾನ ಆರಂಭಿಸಲಿದೆ.

ಒಂದು ದಿನ ಮುಂಚಿತವಾಗಿಯೇ ಏಕದಿನ ವಿಶ್ವಕಪ್‌ ಉದ್ಘಾಟನಾ ಸಮಾರಂಭ..!

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾದ ರಿಷಭ್ ಪಂತ್..!

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕ್ರಿಕೆಟಿಗ ರಿಷಭ್ ಪಂತ್ ಈಗ ಚೇತರಿಕೆ ಹಾದಿಯಲ್ಲಿದ್ದು, ಇಲ್ಲಿನ ಎನ್‌ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಏಷ್ಯಾಕಪ್ ಟೂರ್ನಿಗೆ ಇಲ್ಲಿನ ಹೊರವಲಯದ ಆಲೂರು ಕೆಎಸ್‌ಸಿಎ ಮೈದಾನದಲ್ಲಿ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಂಡಿರುವ ಭಾರತ ತಂಡವನ್ನು ರಿಷಭ್ ಪಂತ್ ಸೋಮವಾರ ಭೇಟಿಯಾದರು. ತಮ್ಮ ಸಹ ಆಟಗಾರರ ಜತೆ ಕೆಲಕಾಲ ಕಳೆದ ರಿಷಭ್ ಪಂತ್, ಪ್ರಧಾನ ಕೋಚ್ ರಾಹುಲ್ ದ್ರಾವಿಡ್ ಜತೆಗೂ ಚರ್ಚೆ ನಡೆಸಿದರು. 

Follow Us:
Download App:
  • android
  • ios