* ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ* ಭಾರತ ತಂಡದಲ್ಲಿ 6 ಮಹತ್ವದ ಬದಲಾವಣೆ* ಏಕದಿನ ಕ್ರಿಕೆಟ್‌ಗೆ ಭಾರತದ ಐವರು ಕ್ರಿಕೆಟಿಗರು ಪಾದಾರ್ಪಣೆ

ಕೊಲಂಬೊ(ಜು.23): ಭಾರತ ಹಾಗೂ ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ತಂಡದಲ್ಲಿ 6 ಬದಲಾವಣೆ ಮಾಡಲಾಗಿದ್ದು, ಕನ್ನಡಿಗ ಕೆ. ಗೌತಮ್ ಸೇರಿ ಐದು ಆಟಗಾರರು ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಮೂರು ಪಂದ್ಯಗಳ ಏಕದಿನ ಸರಣಿಯನ್ನು ಈಗಾಗಲೇ 2-0 ಅಂತರದಲ್ಲಿ ಕೈವಶ ಮಾಡಿಕೊಂಡಿರುವ ಭಾರತ ತಂಡ ಕೆಲ ಪ್ರಯೋಗಕ್ಕೆ ಕೈ ಹಾಕಿದೆ. ಪರಿಣಾಮ ಸಂಜು ಸ್ಯಾಮ್ಸನ್, ನಿತಿಶ್ ರಾಣಾ, ಚೇತನ್ ಸಕಾರಿಯಾ, ಕೃಷ್ಣಪ್ಪ ಗೌತಮ್ ಹಾಗೂ ರಾಹುಲ್ ಚಹಾರ್ ಏಕದಿನ ಕ್ರಿಕೆಟ್‌ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಆರ್‌ಸಿಬಿ ವೇಗಿ ನವದೀಪ್ ಸೈನಿ ಕೂಡಾ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ.

ಲಂಕಾ ಎದುರು ಸರಣಿ ಕ್ಲೀನ್‌ ಸ್ವೀಪ್‌ ಮೇಲೆ ಟೀಂ ಇಂಡಿಯಾ ಕಣ್ಣು

Scroll to load tweet…

1980ರ ಟೀಂ ಇಂಡಿಯಾದಲ್ಲಿ ಇದೇ ಮೊದಲ ಬಾರಿಗೆ ಏಕದಿನ ತಂಡಕ್ಕೆ ಐವರು ಕ್ರಿಕೆಟಿಗರು ಪಾದಾರ್ಪಣೆ ಮಾಡಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಕನಸು ಕಾಣುತ್ತಿದ್ದ ದೇವದತ್ ಪಡಿಕ್ಕಲ್‌ಗೆ ಮತ್ತೊಮ್ಮೆ ನಿರಾಸೆ ಎದುರಾಗಿದೆ. 

ಇನ್ನು ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಸಹಾ ಮೂರು ಬದಲಾವಣೆ ಮಾಡಲಾಗಿದ್ದು, ಅಕಿಲಾ ಧನಂಜಯ, ಇಶಾನ್‌ ಜಯರತ್ನೆ, ರಮೇಶ್ ಮೆಂಡೀಸ್ ತಂಡ ಕೂಡಿಕೊಂಡಿದ್ದಾರೆ.

ತಂಡಗಳು ಹೀಗಿವೆ:

ಭಾರತ:

Scroll to load tweet…

ಶ್ರೀಲಂಕಾ:

Scroll to load tweet…